ಬ್ರೇಕಿಂಗ್ ನ್ಯೂಸ್
03-09-26 09:36 pm HK News Staffer ಕ್ರೈಂ
ಉಡುಪಿ, ಸೆ. 3: ರಾಜ್ಯ ಸರ್ಕಾರದ ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ವ್ಯಕ್ತಿಯೊಬ್ಬರಿಗೆ ಕೊಲೆ ಹಾಗೂ ಸುಲಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ಸೇರಿದಂತೆ ಮೂವರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೋಟತಟ್ಟು ಗ್ರಾಮದ ಗೊಬ್ಬರಬೆಟ್ಟು ನಿವಾಸಿ ನಾಗೇಂದ್ರ ಪುತ್ರನ್ (37), ಪಾರಂಪಳ್ಳಿ ಗ್ರಾಮದ ಪಡುಕೆರೆಯ ಪಿ. ಸುಮಂತ್ ಕುಂದರ್ (40) ಹಾಗೂ ಸಾಸ್ತಾನದ ಸಚಿನ್ ಶ್ರೀಯಾನ್ (32) ಎಂದು ಗುರುತಿಸಲಾಗಿದೆ.
ಅನ್ನಭಾಗ್ಯದ ಅಕ್ಕಿ ಚೀಲ ಇಟ್ಟ ವಿಚಾರಕ್ಕೆ ಕಿರಿಕ್;
ಆ.31ರಂದು ಮನೆಯ ಅಂಗಳದಲ್ಲಿ ಅನ್ನಭಾಗ್ಯದ ಅಕ್ಕಿ ಚೀಲಗಳನ್ನು ಇರಿಸಿರುವ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಹಾಗೂ ಸುಲಿಗೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು.
ಮೈಸೂರು, ಉಡುಪಿಯಲ್ಲಿ ಬಂಧನ
ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಕೋಟ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಪ್ರವೀಣ್ ಕುಮಾರ್ ಆರ್. ಹಾಗೂ ಮಹಾಂತೇಶ ಜಾಬಗೌಡ ಮತ್ತು ಸಿಬ್ಬಂದಿ ವಿಜಯೇಂದ್ರ, ಶರತ್ ಹಾಗೂ ಶಿವರಾಜ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಸಚಿನ್ ಶ್ರೀಯಾನ್‌ನನ್ನು ಸೆ.1ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇನ್ನು ನಾಗೇಂದ್ರ ಪುತ್ರನ್ ಹಾಗೂ ಪಿ. ಸುಮಂತ್ ಕುಂದರ್ ಅವರನ್ನು ಸೆ.2ರಂದು ಮೈಸೂರು ಪ್ಯಾಲೇಸ್ ಎದುರಿನ ವಸ್ತು ಪ್ರದರ್ಶನ ಮೈದಾನದ ಬಳಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm