ಬ್ರೇಕಿಂಗ್ ನ್ಯೂಸ್
04-09-26 08:16 pm HK News Staffer ಕ್ರೈಂ
ಬೆಂಗಳೂರು, ಸೆ.4: ಮಂಗಳೂರಿನಲ್ಲಿ ಒಂದು ವರ್ಷದ ಹಿಂದೆ ಕೊಲೆಯಾದ ಸುಹಾಸ್ ಶೆಟ್ಟಿ ಪ್ರಕರಣದಲ್ಲಿ ಆರೋಪಿಗಳಾಗಿದ್ದು ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಾಗಿರುವ ಐದು ಮಂದಿ ನಿಷೇಧಿತ ಮಾದಕ ವಸ್ತುಗಳನ್ನು ಜೈಲಿಗೆ ತರಿಸಿಕೊಳ್ಳಲು ಅಡ್ಡಿಯಾದ ಕಾರಣಕ್ಕೆ ಜೈಲಿನ ವಾರ್ಡನ್ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ವಾರ್ಡನ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ಹವೇಲಿ ಎಂಬವರ ಮೇಲೆ ಹಲ್ಲೆ ನಡೆದಿದ್ದು ಪೊಲೀಸ್ ದೂರು ದಾಖಲಾಗಿದೆ. ಸೆಪ್ಟೆಂಬರ್ 02 ರಂದು ಬೆಳಿಗ್ಗೆ ಅನೆಕ್ಸ್-1ರಲ್ಲಿ ಮಂಜುನಾಥ್ ಅವರು ಕರ್ತವ್ಯದಲ್ಲಿದ್ದಾಗ ಐವರು ಆರೋಪಿಗಳು ಅವರನ್ನು ಬಲವಂತವಾಗಿ ನಾಲ್ಕನೇ ಕೊಠಡಿಗೆ ಎಳೆದೊಯ್ದು ಮನಬಂದಂತೆ ಥಳಿಸಿದ್ದಾರೆ.
ಆಗಸ್ಟ್ 22 ರಂದು ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಈ ಆರೋಪಿಗಳು ಜೈಲಿನೊಳಗೆ ಕೆಲವು ನಿಷೇಧಿತ ವಸ್ತುಗಳನ್ನು ತರಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ, ವಾರ್ಡನ್ ಮಂಜುನಾಥ್ ಹವೇಲಿ ಆ ವಸ್ತುಗಳನ್ನು ತಡೆಹಿಡಿದಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಆರೋಪಿಗಳು ಅಂದೇ ಮಂಜುನಾಥ್ ಅವರಿಗೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಜೈಲಿನಲ್ಲಿ ಪದೇ ಪದೇ ಕಾನೂನು ಉಲ್ಲಂಘನೆ ಆಗುತ್ತಿರುವುದರಿಂದ ಇತ್ತೀಚೆಗೆ ಜೈಲಿನ ನಿಯಮಗಳನ್ನು ಬಿಗಿಗೊಳಿಸಲಾಗಿತ್ತು.
ಕತ್ತು ಹಿಸುಕಿ ಕೊಲ್ಲಲು ಯತ್ನ
ದೂರಿನ ಅನ್ವಯ, ಆರೋಪಿಗಳು ಮಂಜುನಾಥ್ ಅವರ ಮುಖ ಮತ್ತು ಮೂಗಿಗೆ ಮುಷ್ಠಿಯಿಂದ ಬಲವಾಗಿ ಗುದ್ದಿದ್ದಾರೆ. ಅಷ್ಟೇ ಅಲ್ಲದೆ, ಜೈಲಿನಲ್ಲೇ ಅವರ ಕತ್ತು ಹಿಸುಕಿ ಕೊಲೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ದೂರಲಾಗಿದೆ. ಕೂಡಲೇ ಇತರ ಸಿಬ್ಬಂದಿ ಧಾವಿಸಿ ವಾರ್ಡನ್ ಅವರನ್ನು ಕೈದಿಗಳ ಹಲ್ಲೆಯಿಂದ ರಕ್ಷಿಸಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಮೊಹಮದ್ ಮುಶಾಮೀರ್, ಅಬ್ದುಲ್ ಶಪ್ಗನ್, ಮೊಹ್ಮದ್ ರಿಜ್ವಾನ್, ನಿಯಾಜ್, ಕಲಂದರ್ ವಿರುದ್ಧ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ತಮ್ಮ ಮೇಲೆ ನಡೆದ ಮಾರಣಾಂತಿಕ ಹಲ್ಲೆಯ ಕುರಿತು ಮಂಜುನಾಥ್ ಹವೇಲಿ ಅವರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm