ಬ್ರೇಕಿಂಗ್ ನ್ಯೂಸ್
05-09-26 04:55 pm HK News Staffer ಕ್ರೈಂ
ಶಿವಮೊಗ್ಗ, ಸೆ.5 : ಜಿಂಕೆ ಬೇಟೆಯಾಡಿ, ಮಾಂಸ ಮಾರಾಟಕ್ಕಾಗಿ ಕಾರಿನಲ್ಲಿ ಸಾಗಿಸುತ್ತಿದ್ದಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿ, 21 ಕೆ.ಜಿ ಜಿಂಕೆ ಮಾಂಸ ಹಾಗೂ ಒಂದು ಕಾರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಹೊಸನಗರ ತಾಲೂಕು ರಿಪ್ಪನ್ಪೇಟೆ ಗ್ರಾಮದಲ್ಲಿ ಅಕ್ರಮವಾಗಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ಪೊಲೀಸರು ದಾಳಿ ನಡೆಸಿದ್ದಾರೆ. ರಿಪ್ಪನ್ಪೇಟೆಯ ಶಬರೀಶ ನಗರದಲ್ಲಿ ಜಿಂಕೆ ಮಾಂಸ ಮಾರಾಟ ಮಾಡುವಾಗ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಎರ್ಟಿಗಾ ಕಾರು, ಅದರಲ್ಲಿದ್ದ 21 ಕೆ.ಜಿ ಜಿಂಕೆ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಡಿಕೇರಿಯ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ಬಿಜ್ಜೂರ್ ಮಾರ್ಗದರ್ಶನದಲ್ಲಿ ಸಾಗರದ ಅರಣ್ಯ ಸಂಚಾರಿ ದಳದ ಪಿಎಸ್ಐ ವಿನಾಯಕ ಹಾಗೂ ಸಿಬ್ಬಂದಿ ಗಣೇಶ್ ಬಿ.ಸಿ., ಆಂಜನೇಯ ಪಾಟೀಲ್, ಚಂದ್ರಕಾಂತ್, ಸುರೇಶ್, ಪ್ರಮೋದಿನಿ ಹಾಗೂ ಹೆಚ್.ಬಿ. ದೊಡ್ಡಮನಿ ಹಾಜರಿದ್ದರು.
ಜಿಂಕೆ ಮಾಂಸವನ್ನು ಕಾರಿನಲ್ಲಿ ಮಾರಾಟ ಮಾಡುತ್ತಿದ್ದ ರಿಪ್ಪನ್ಪೇಟೆಯ ಶಬರೀಶ ನಗರ ನಿವಾಸಿ ಗುರುರಾಜ್, ಕಾರಗೋಡು ನಿವಾಸಿ ಗಣೇಶ್ ಕೆ.ಜಿ. ಇಬ್ಬರೂ ಪರಾರಿಯಾಗಿದ್ದಾರೆ. ಸದರಿ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ ಪೊಲೀಸರು ತಿಳಿಸಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm