ಬ್ರೇಕಿಂಗ್ ನ್ಯೂಸ್
08-09-26 08:45 pm HK News Staffer ಕ್ರೈಂ
ಮಂಗಳೂರು, ಸೆ.8: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳು ನಿಷೇಧಿತ ಮೊಬೈಲ್ ಫೋನ್‌ಗಳನ್ನು ಬಳಕೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸೆ.7ರ ತಡರಾತ್ರಿ ಪೊಲೀಸರು ದಾಳಿ ನಡೆಸಿದ್ದು ಒಂಬತ್ತು ಮಂದಿ ನಟೋರಿಯಸ್ ಆರೋಪಿಗಳು ಹತ್ತು ಮೊಬೈಲ್ ಫೋನ್ ಬಳಸಿಕೊಂಡಿದ್ದನ್ನು ಪತ್ತೆ ಮಾಡಿದ್ದಾರೆ.
ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದಾಗ, ಎ-ಬ್ಲಾಕ್‌ನಲ್ಲಿದ್ದ ಕೈದಿಗಳ ಪೈಕಿ ಅಕ್ರಮವಾಗಿ 10 ಮೊಬೈಲ್ ಸ್ಮಾರ್ಟ್‌ಫೋನ್ ಗಳನ್ನು ಬಚ್ಚಿಟ್ಟುಕೊಂಡಿದ್ದನ್ನು ವಶಪಡಿಸಲಾಗಿದೆ. ತೊಕ್ಕೊಟ್ಟಿನಲ್ಲಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ನಟೋರಿಯಸ್ ಗ್ಯಾಂಗ್ ಸ್ಟರ್ ಗಳಾದ ರಿಫಾತ್ ಅಲಿ, ಇಬ್ರಾಹಿಂ ಖಲೀಲ್, ಅಶ್ಫಾಕ್ ಅಲಿಯಾಸ್ ಜುಟ್ಟು ಅಸ್ಫಕ್ ಮತ್ತು ಅರ್ಷದ್ ಎಂಬವರು ಮೊಬೈಲ್ ಸ್ಮಾರ್ಟ್ ಫೋನ್ ಬಳಸುತ್ತಿದ್ದುದು ಪತ್ತೆಯಾಗಿದೆ.
ಡ್ರಗ್ ಪೆಡ್ಲರ್ ಗಳಾಗಿದ್ದು ಎನ್ ಡಿಪಿಎಸ್ ಕಾಯ್ದೆಯಡಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ದಾವೂದ್ ಫರ್ವೇಜ್, ನಝರತ್ ಅಲಿ, ಶಿಫಾನ್ ಮತ್ತು ಅಬ್ದುಲ್ ಸಾದೀಕ್ ಎಂಬವರಲ್ಲಿಯೂ ಮೊಬೈಲ್ ಪತ್ತೆಯಾಗಿದೆ. ಇದಲ್ಲದೆ, ಕಂಕನಾಡಿ ನಗರ ಠಾಣೆಯಲ್ಲಿ ಕೋಕಾ ಪ್ರಕರಣದಲ್ಲಿ ಆರೋಪಿಯಾಗಿದ್ದು ಜೈಲಿನಲ್ಲಿರುವ ಅರ್ಫಾಜ್ ಎಂಬಾತನಲ್ಲಿಯೂ ಮೊಬೈಲ್ ಪತ್ತೆಯಾಗಿದೆ.
ವಶಪಡಿಸಿಕೊಂಡಿರುವ ಮೊಬೈಲ್ ಫೋನ್ಗಳನ್ನು ಅವುಗಳ ಬಳಕೆ ಮತ್ತು ಪೂರೈಕೆಗೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಇತರ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಈ ಬಗ್ಗೆ ಅ.ಕ್ರ. 82/2026, ಕಲಂ 323 ಬಿಎನ್‌ಎಸ್ ಹಾಗೂ ಕಲಂ 42 ಕರ್ನಾಟಕ ಕಾರಾಗೃಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇತ್ತೀಚೆಗೆ ಜೈಲಿಗೆ ಹೊಸದಾಗಿ ಜೈಲರ್ ಒಬ್ಬರು ವರ್ಗಾವಣೆಗೊಂಡು ಬಂದ ನಂತರ ಅಕ್ರಮ ಚಟುವಟಿಕೆ ಹೆಚ್ಚಾಗಿದೆ ಎಂಬ ಆರೋಪ ಕೇಳಿಬಂದಿದೆ.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am