ಬ್ರೇಕಿಂಗ್ ನ್ಯೂಸ್
09-09-26 06:20 pm HK News Staffer ಕ್ರೈಂ
bಕ್ಷುಲ್ಲಕ ವಿಚಾರಕ್ಕೆ ದಂಪತಿ ನಡುವೆ ನಡೆದ ಗಲಾಟೆ ಹತ್ಯೆ ಹಾಗೂ ಆತ್ಮಹತ್ಯೆಯಲ್ಲಿ ಅಂತ್ಯವಾಗಿರುವ ಘೋರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಭೂತಿಪುರದಲ್ಲಿ ಘಟನೆ ನಡೆದಿದ್ದು, ಶೃತಿ (30) ಹತ್ಯೆಯಾದ ಗೃಹಿಣಿ. ಬಿಯರ್ ಬಾಟಲಿಯಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ ಬಳಿಕ ಪತಿ ರಾಘವೇಂದ್ರ (36) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂಲತಃ ದಾವಣಗೆರೆಯವರಾದ ಶೃತಿ ಹಾಗೂ ರಾಘವೇಂದ್ರಗೆ 17 ವರ್ಷಗಳ ಹಿಂದೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದು, ಮಕ್ಕಳನ್ನು ಶೃತಿಯ ಪೋಷಕರ ಮನೆಯಲ್ಲಿ ಬಿಟ್ಟು ಇಬ್ಬರೂ ಬೆಂಗಳೂರಿನ ವಿಭೂತಿಪುರದಲ್ಲಿ ವಾಸವಿದ್ದರು. ದಂಪತಿ ವಾಸವಿದ್ದ ಕಟ್ಟಡದ ಮೇಲ್ಮಹಡಿಯಲ್ಲಿಯೇ ರಾಘವೇಂದ್ರನ ಪೋಷಕರು ವಾಸವಿದ್ದರು.
ರಾಘವೇಂದ್ರ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದರೆ, ಶೃತಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮನೆಕೆಲಸ ಮಾಡಿಕೊಂಡಿದ್ದರು. ಪತ್ನಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸುತ್ತಿರುತ್ತಾಳೆ ಎಂದು ಆಗಾಗ್ಗೆ ರಾಘವೇಂದ್ರ ಗಲಾಟೆ ಮಾಡುತ್ತಿದ್ದ. ಇತ್ತ ಪತಿ ಸಹ ಮದ್ಯಪಾನ ಮಾಡುತ್ತಾನೆ ಎಂದು ಶೃತಿ ಆರೋಪಿಸಿದ್ದಳು. ಇಬ್ಬರ ನಡುವಿನ ಈ ಗಲಾಟೆ ಇತ್ತೀಚಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿದಾಗ ಇಬ್ಬರಿಗೂ ಪೊಲೀಸರು ಬುದ್ಧಿವಾದ ಹೇಳಿ ಕಳಿಸಿದ್ದರು.
ಮಂಗಳವಾರ ರಾತ್ರಿ ದಂಪತಿ ನಡುವೆ ಮಾತಿಗೆ ಮಾತು ಬೆಳೆದು ಜಗಳ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ಆಕ್ರೋಶಗೊಂಡ ರಾಘವೇಂದ್ರ, ಖಾಲಿ ಬಿಯರ್ ಬಾಟಲಿಯಿಂದ ಪತ್ನಿ ಶೃತಿಗೆ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಶೃತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತ್ನಿಯ ಸಾವಿನ ನಂತರ ತಾನೂ ಸಹ ನೇಣು ಬಿಗಿದುಕೊಂಡು ರಾಘವೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಹೆಚ್ಎಎಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಮುಂದಿನ ಕಾನೂನು ಕ್ರಮ ಕೈಗೊಂಡಿರುವುದಾಗಿ ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 03:29 pm
HK News Staffer
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
09-09-26 06:20 pm
HK News Staffer
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm