ಬ್ರೇಕಿಂಗ್ ನ್ಯೂಸ್
11-09-26 01:09 pm HK News Staffer ಕ್ರೈಂ
ಉಡುಪಿ , ಸೆಪ್ಟೆಂಬರ್ 11: ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಆರೋಪಿಗೆ ಜಾಮೀನು ನೀಡುವ ವೇಳೆ ನಕಲಿ ಆಧಾರ್ ಕಾರ್ಡ್ ಹಾಜರುಪಡಿಸಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಂಟ್ವಾಳದ ಉಮ್ಮರ್ ಫಾರೂಕ್ (32) ಹಾಗೂ ಮಂಗಳೂರಿನ ನಿಶಾಂತ್ ಕುಮಾರ್ (24) ಬಂಧಿತ ಆರೋಪಿಗಳು.
ನಕಲಿ ಆಧಾರ್ ಸೃಷ್ಟಿಸಿ ಕೋರ್ಟ್‌ಗೆ ಹಾಜರು:
ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ನಡೆಯುತ್ತಿತ್ತು. ಈ ಪ್ರಕರಣದ ಆರೋಪಿ ನೋಮಾನ್ ಎಂಬಾತನಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಫಾರೂಕ್ ಮತ್ತು ಪ್ರಶಾಂತ್ ಎಂಬವರ ಆಧಾರ್ ಕಾರ್ಡ್‌ಗಳನ್ನು ಬಳಸಲಾಗಿದೆ. ಆಧಾರ್ ಕಾರ್ಡ್‌ನಲ್ಲಿದ್ದ ಮೂಲ ಹೆಸರು ಮತ್ತು ವಿಳಾಸದ ಬದಲಿಗೆ ಕೆ.ಟಿ. ಮೊಹಮ್ಮದ್ ಎಂಬವರ ಹೆಸರು ಹಾಗೂ ವಿಳಾಸವನ್ನು ನಕಲಿಯಾಗಿ ಸೃಷ್ಟಿಸಿ, ಇನ್ನೊಬ್ಬ ವ್ಯಕ್ತಿಯಂತೆ ನಟಿಸಿ ಆಧಾರ್ ಕಾರ್ಡ್‌ನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ವಂತ ಲಾಭಕ್ಕಾಗಿ ಗುರುತಿನ ದಾಖಲೆಗಳನ್ನು ನಕಲಿಯಾಗಿ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಉಡುಪಿ ನಗರ ಪೊಲೀಸರು ನಕಲಿ ಆಧಾರ್ ಕಾರ್ಡ್ ಹಾಜರುಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮ್ಮರ್ ಫಾರೂಕ್ ಹಾಗೂ ನಿಶಾಂತ್ ಕುಮಾರ್ ಅವರನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದಲ್ಲಿ ನಕಲಿ ದಾಖಲೆ ಸೃಷ್ಟಿ ಹಾಗೂ ನ್ಯಾಯಾಲಯಕ್ಕೆ ಅದನ್ನು ಹಾಜರುಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm