ಬ್ರೇಕಿಂಗ್ ನ್ಯೂಸ್
16-09-26 11:18 am HK News Staffer ಕ್ರೈಂ
ಬೆಳ್ತಂಗಡಿ , ಸೆಪ್ಟೆಂಬರ್ 16: ಮನೆಯವರು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ₹15.82 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹1.80 ಲಕ್ಷ ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಆಲಂದಿಲದಲ್ಲಿ ನಡೆದಿದೆ. ಈ ಸಂಬಂಧ ಮನೆ ಮಾಲೀಕ ನೌಫಾಲ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಪ್ರಕಾರ, ಸೆ.13ರಂದು ಮಧ್ಯಾಹ್ನ ನೌಫಾಲ್ ಅವರು ಪತ್ನಿ, ಮಕ್ಕಳು ಹಾಗೂ ತಾಯಿಯನ್ನು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಕಳುಹಿಸಿದ್ದರು. ಬಳಿಕ ನೌಫಾಲ್ ಕೂಡ ಮನೆಗೆ ಬೀಗ ಹಾಕಿ ತರಕಾರಿ ವ್ಯಾಪಾರದ ಕೆಲಸಕ್ಕಾಗಿ ಬೆಳ್ತಂಗಡಿಗೆ ತೆರಳಿದ್ದರು.
ವಯರಿಂಗ್ ಕೆಲಸಕ್ಕೆ ಕಾರ್ಮಿಕರು ಬಂದಿದ್ದ ದಿನವೇ ಕಳವು
ಸೆ.14ರಂದು ನೌಫಾಲ್ ಅವರು ವಯರಿಂಗ್ ಕೆಲಸಕ್ಕಾಗಿ ಕಾರ್ಮಿಕರನ್ನು ಮನೆಗೆ ಕರೆಸಿದ್ದರು. ಮದ್ದಡ್ಕದ ಫಾರೂಕ್ ಎಂಬವರು ಕುದ್ರಡ್ಕದ ಅಶ್ರಫ್ ಹಾಗೂ ಶಿರ್ಲಾಲಿನ ಸುಲೈಮಾನ್ ಅವರನ್ನು ಕರೆದುಕೊಂಡು ಬಂದು ಮನೆಯಲ್ಲಿ ಕೆಲಸ ಮಾಡಿದ್ದರು. ಈ ವೇಳೆ ನೌಫಾಲ್ ಅವರ ತಮ್ಮ ಮಹಮ್ಮದ್ ನೌಷಾದ್ ಮನೆಯಲ್ಲಿದ್ದರೆಂದು ದೂರಿನಲ್ಲಿ ತಿಳಿಸಲಾಗಿದೆ. ಅದೇ ದಿನ ರಾತ್ರಿ ಸುಮಾರು 8.30ಕ್ಕೆ ನೌಫಾಲ್ ಕುಟುಂಬದೊಂದಿಗೆ ಮನೆಗೆ ವಾಪಸ್ ಬಂದಾಗ ಬೆಡ್‌ರೂಂನ ಗಾದ್ರೇಜ್‌ನಲ್ಲಿಟ್ಟಿದ್ದ ಚಿನ್ನದ ಬಾಕ್ಸ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.
113 ಗ್ರಾಂ ಚಿನ್ನಾಭರಣ, ₹1.80 ಲಕ್ಷ ನಗದು ನಾಪತ್ತೆ
ಗಾದ್ರೇಜ್ ಪರಿಶೀಲಿಸಿದಾಗ 32 ಗ್ರಾಂ ಹಾಗೂ 26 ಗ್ರಾಂ ತೂಕದ ಎರಡು ಚಿನ್ನದ ಸರಗಳು, ಮಗುವಿನ ಚಿನ್ನದ ಸರ, ಕಾಲುಚೈನು, ಬ್ರಾಸ್‌ಲೈಟ್ ಸೇರಿದಂತೆ ಒಟ್ಟು 113 ಗ್ರಾಂ ತೂಕದ ಚಿನ್ನಾಭರಣ ಕಳವಾಗಿರುವುದು ಪತ್ತೆಯಾಗಿದೆ. ಕಳವಾದ ಚಿನ್ನಾಭರಣದ ಒಟ್ಟು ಮೌಲ್ಯ ₹15.82 ಲಕ್ಷ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದಲ್ಲದೆ, ನೌಫಾಲ್ ಅವರ ತಾಯಿಯ ಗಾದ್ರೇಜ್‌ನಲ್ಲಿದ್ದ ಒಟ್ಟು 7 ಗ್ರಾಂ ತೂಕದ ಮೂರು ಚಿನ್ನದ ಉಂಗುರಗಳೂ ಕಾಣೆಯಾಗಿವೆ. ಮನೆಯ ಗಾದ್ರೇಜ್‌ನ ಕೀ ಗಾದ್ರೇಜ್‌ನಲ್ಲಿಯೇ ಇತ್ತು ಎನ್ನಲಾಗಿದೆ. ಮನೆಯವರು ಹೊರಗಿದ್ದ ಅವಧಿಯಲ್ಲಿ ಯಾರೋ ಮನೆಗೆ ಪ್ರವೇಶಿಸಿ ಗಾದ್ರೇಜ್ ತೆರೆದು ಚಿನ್ನಾಭರಣ ಹಾಗೂ ₹1.80 ಲಕ್ಷ ನಗದು ಕಳವು ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.
ವಯರಿಂಗ್ ಕೆಲಸಕ್ಕೆ ಬಂದವರ ಮೇಲೆ ಅನುಮಾನ
ವಯರಿಂಗ್ ಕೆಲಸಕ್ಕೆ ಮನೆಗೆ ಬಂದಿದ್ದ ಅಶ್ರಫ್, ಫಾರೂಕ್ ಹಾಗೂ ಸುಲೈಮಾನ್ ಅವರ ಮೇಲೆ ಅನುಮಾನವಿರುವುದಾಗಿ ನೌಫಾಲ್ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves allegedly broke into a house in Alandila village of Kuvettu in Belthangady taluk when the family had gone to attend a relative’s housewarming ceremony and stole gold jewellery worth ₹15.82 lakh and ₹1.80 lakh in cash. House owner Noufal has lodged a complaint at the Belthangady Police Station.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm