ಬ್ರೇಕಿಂಗ್ ನ್ಯೂಸ್
20-09-26 01:01 pm HK News Staffer ಕ್ರೈಂ
ಹುಬ್ಬಳ್ಳಿ, ಸೆಪ್ಟೆಂಬರ್ 20: ಗ್ಯಾಸ್ ಸೋರಿಕೆಯಿಂದ ಸಂಭವಿಸಿದ ಭೀಕರ ಅಗ್ನಿ ಅವಘಡದ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಳೆ ಹುಬ್ಬಳ್ಳಿಯ ಅಯೋಧ್ಯಾ ನಗರದಲ್ಲಿ ನಡೆದಿದೆ.
ಘಟನೆಯಲ್ಲಿ ಪ್ರವೀಣ್ ಕಲಾಲ್ (46) ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ಕಲಾಲ್ (40) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಮನ ಕಲಾಲ್ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ಯಾಸ್ ಲೀಕ್ನಿಂದ ಹೊತ್ತಿಕೊಂಡ ಬೆಂಕಿ
ಮನೆಯಲ್ಲಿದ್ದ ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹಾಗೂ ಸಂಬಂಧಪಟ್ಟ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಘಟನೆಯಲ್ಲಿ ಪ್ರವೀಣ್ ಕಲಾಲ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ಕಲಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಸುಮನ ಕಲಾಲ್ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಮೃತರಲ್ಲಿ ಒಬ್ಬರು ಕೆಇಬಿ ಸಿಬ್ಬಂದಿ
ಮೃತ ಪ್ರವೀಣ್ ಕಲಾಲ್ ಅವರು ಕೆಇಬಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ಯಾಸ್ ಸೋರಿಕೆಗೆ ನಿಖರ ಕಾರಣವೇನು ಹಾಗೂ ಸಿಲಿಂಡರ್ ಸ್ಫೋಟಕ್ಕೆ ಕಾರಣವಾದ ಅಂಶಗಳ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Two people were killed and a woman was seriously injured after a gas cylinder exploded following a suspected gas leak at Ayodhya Nagar in Old Hubballi on Saturday.
20-11-26 05:15 pm
HK News Staffer
2028ರ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ; ಮಾಜಿ ಸಿಎಂ...
20-11-26 12:04 pm
ಹಿರಿಯೂರು ಅಭ್ಯರ್ಥಿ ; ನಾವು ಕುಮಾರಸ್ವಾಮಿ ಜೊತೆ ಮಾತ...
19-11-26 12:32 pm
ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ ; ಕಾರು - ಬೊಲೆರೋ...
18-11-26 11:03 pm
ರಾಜ್ಯದಲ್ಲಿ 30ಕ್ಕೂ ಹೆಚ್ಚು ಐಪಿಎಸ್ ವರ್ಗಾವಣೆ ; ಬೆ...
18-11-26 07:26 pm
21-11-26 11:44 am
HK News Staffer
ಜಾಗತಿಕ ಜನಸಂಖ್ಯೆಯಲ್ಲಿ ಇಸ್ಲಾಂ ಪಾರಮ್ಯ ; 2035ಕ್ಕೆ...
20-11-26 12:58 pm
ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ; ಮಾಜಿ ಮುಖ್ಯಸ್...
19-11-26 07:30 pm
"ಧರ್ಮ ಯಾವುದೇ ಇರಲಿ, ಪ್ರತಿಯೊಬ್ಬ ಭಾರತೀಯನ ರಕ್ತದಲ್...
19-11-26 01:19 pm
ಸೌದಿಗೆ ನವೆಂಬರ್ 30ರ ವರೆಗೆ ವಿಮಾನ ಸೇವೆ ರದ್ದು ; ಇ...
18-11-26 11:28 pm
22-11-26 04:17 pm
HK News Staffer
ಮಂಗಳೂರು ಏರ್ಪೋರ್ಟ್ ನಲ್ಲಿ ಪಾರ್ಕಿಂಗ್ ಶುಲ್ಕ ದುಬಾರ...
21-11-26 10:59 pm
‘ಮಹಾತ್ಮೆ ಕುದ್ಮುಲ್’ ; ಸೂರಿಲ್ಲದ, ತುಂಡು ಭೂಮಿ ಇಲ್...
21-11-26 10:29 pm
ಅಪಹರಣ ಆಗಿಲ್ಲ, ವಿದ್ಯಾರ್ಥಿನಿ ತಪ್ಪುದಾರಿ ತುಳಿದಿದ್...
20-11-26 09:53 pm
ಮುಸ್ಲಿಂ ಯುವತಿ ಅಪಹರಣ ; ಕೇರಳದಲ್ಲಿ ಸಂಬಂಧಿಕರ ಮನೆಯ...
20-11-26 09:51 pm
21-11-26 04:41 pm
HK News Staffer
ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಹಣಕ್ಕಾಗಿ ಅಜ್ಜಿಯನ್ನೇ ಕ...
21-11-26 12:41 pm
'ಬಸವ ಮಂಟಪ' ಕೃತಿ ವಿವಾದ ಹಿನ್ನೆಲೆ ; ಲೇಖಕ ರವಿ ಹಂಜ...
21-11-26 12:33 pm
ಬಂಟ್ವಾಳ ; ಶಾಲೆಯಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ...
19-11-26 09:20 pm
Baglur Manchapanahalli Murder: ಗುಜರಿ ವ್ಯಾಪಾರದ...
19-11-26 03:20 pm