ಬ್ರೇಕಿಂಗ್ ನ್ಯೂಸ್
25-09-26 10:30 am HK News Staffer ಕ್ರೈಂ
ಉಡುಪಿ, ಸೆ.25: ಉಡುಪಿ- ಮೂಡುಬೆಳ್ಳೆ- ಕಾರ್ಕಳ ಮಾರ್ಗದಲ್ಲಿ ಸಂಚರಿಸುವ ‘ಶ್ರೀ ಕೃಷ್ಣಪ್ರಸಾದ್’ ಹೆಸರಿನ ಸಿಟಿ ಬಸ್‌ವೊಂದು ಉಡುಪಿ ತಾಲೂಕಿನ ಮಣಿಪುರ ಪಂಚಾಯತ್ ವ್ಯಾಪ್ತಿಯ ದೆಂದೂರುಕಟ್ಟೆಯ ಎಂಆರ್‌ಪಿಎಲ್ ಪೆಟ್ರೋಲ್ ಪಂಪ್ ಬಳಿ ಇಂದು ನಸುಕಿನ ವೇಳೆಗೆ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾಗಿದೆ.
ಪ್ರತಿ ದಿನದಂತೆ ಗುರುವಾರ ರಾತ್ರಿ ಬಸ್‌ನ್ನು ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಲಾಗಿತ್ತು. ಶುಕ್ರವಾರ ಬೆಳಗಿನ ಜಾವ ಸುಮಾರು 3.30ರ ವೇಳೆಗೆ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರವಾಗಿ ಆವರಿಸಿಕೊಂಡು ಬಸ್ ಸಂಪೂರ್ಣ ಸುಟ್ಟುಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಿಂದ ₹10 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.








ಬಸ್ ಸಮೀಪವೇ ನಿಲ್ಲಿಸಲಾಗಿದ್ದ ಟೆಂಪೋ ಒಂದಕ್ಕೂ ಬೆಂಕಿ ವ್ಯಾಪಿಸಿದ್ದು, ಸೆಕ್ಯುರಿಟಿ ಗಾರ್ಡ್ ಹಾಗೂ ಸ್ಥಳದಲ್ಲಿದ್ದ ಪೆಟ್ರೋಲ್ ಪಂಪ್ ಸಿಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಇದೇ ಪೆಟ್ರೋಲ್ ಪಂಪ್‌ನಲ್ಲಿ ಮತ್ತೊಂದು ಬಸ್ ಕೂಡ ನಿಲ್ಲಿಸಲಾಗಿದ್ದರೂ ಅದಕ್ಕೆ ಯಾವುದೇ ಹಾನಿಯಾಗಿಲ್ಲ. ಅದೃಷ್ಟವಶಾತ್ ಬೆಂಕಿ ಪೆಟ್ರೋಲ್ ಪಂಪ್‌ಗೆ ವ್ಯಾಪಿಸದೆ ನಿಯಂತ್ರಣಕ್ಕೆ ಬಂದಿದ್ದು, ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಬಸ್‌ಗೆ ಬೆಂಕಿ ತಗುಲಲು ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
24-09-26 10:46 pm
HK News Desk
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
25-09-26 11:17 am
HK News Staffer
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am