ಬ್ರೇಕಿಂಗ್ ನ್ಯೂಸ್
25-09-26 11:17 am HK News Staffer ಕ್ರೈಂ
ಮಂಗಳೂರು, ಸೆ.25: ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಕಟ್‌ಬೆಲ್ತೂರು ನಿವಾಸಿ ರಾಘವೇಂದ್ರ ಜೋಗಿ (48) ಅವರು ಮನೆ ಬಳಿಯಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರ ಸಹೋದರ ರಾಜೇಶ್ ಜೋಗಿ (42) ದೂರಿನಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಟ್‌ಬೆಲ್ತೂರು ಗ್ರಾಮದ ನಿವಾಸಿಯಾಗಿದ್ದ ರಾಘವೇಂದ್ರ ಜೋಗಿ ಕಳೆದ 18 ವರ್ಷಗಳಿಂದ ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಕಾರ್ಯ ನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸೆಪ್ಟೆಂಬರ್ 24 ರಂದು ಮಧ್ಯಾಹ್ನ ಸುಮಾರು 12:30ರ ವೇಳೆಗೆ ರಾಘವೇಂದ್ರ ಜೋಗಿ ಅವರು ಮನೆಯ ಸಮೀಪ ಮರಕ್ಕೆ ನೇಣು ಬಿಗಿದುಕೊಂಡಿರುವುದನ್ನು ಕುಟುಂಬಸ್ಥರು ಗಮನಿಸಿದ್ದಾರೆ.
ಕೂಡಲೇ ಸ್ಥಳೀಯರು ಅವರನ್ನು ಕುಂದಾಪುರದ ಆದರ್ಶ ಆಸ್ಪತ್ರೆಗೆ ಕರೆದೊಯ್ದರೂ, ಪರೀಕ್ಷಿಸಿದ ವೈದ್ಯರು ರಾಘವೇಂದ್ರ ಜೋಗಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮನೆಯಲ್ಲಿ ಪರಿಶೀಲಿಸಿದಾಗ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ‘ತನ್ನ ಸಾವಿಗೆ ತಾನೇ ಕಾರಣ’ ಎಂದು ಬರೆದಿಡಲಾಗಿದೆ. ಯಾವುದೋ ವೈಯಕ್ತಿಕ ಸಮಸ್ಯೆಯಿಂದ ಅಥವಾ ಇತರ ವಿಚಾರಗಳಿಂದ ತೀವ್ರ ಮನನೊಂದು ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 31/2026 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 194 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Raghavendra Jogi, 48, who served as the Chief Executive Officer of the Jogi Multipurpose Cooperative Society in Koteshwara, was found dead after allegedly hanging himself from a tree near his residence in Katbelthur village.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
24-09-26 10:46 pm
HK News Desk
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
25-09-26 11:17 am
HK News Staffer
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am