ಬ್ರೇಕಿಂಗ್ ನ್ಯೂಸ್
27-09-26 06:10 pm HK News Desk ಕ್ರೈಂ
ಮಂಗಳೂರು, ಸೆ.27: 2025ರ ಮೇ ತಿಂಗಳಲ್ಲಿ ನಡೆದಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಮುಸ್ಲಿಂ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಬೇಕೆಂದು ಸಂಚು ರೂಪಿಸಿದ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೆ ಸಂಚು ರೂಪಿಸಿದ ತಂಡದಲ್ಲಿದ್ದ ವ್ಯಕ್ತಿಯೇ ದೂರು ಕೊಟ್ಟಿದ್ದು ಉಡುಪಿ ಜಿಲ್ಲೆಯ ಮೂಲದ ಸುದೀಪ್, ಮಹೇಶ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ಮಂಗಳೂರು ಸಿಸಿಬಿ ಪೊಲೀಸರಿಗೆ ವಹಿಸಲಾಗಿದೆ.
ದೂರಿನ ಪ್ರಕಾರ, ಉಡುಪಿಯ ಬಸ್ ನಿಲ್ದಾಣದ ಬಳಿಯ ಹೋಟೆಲ್ ಹಾಗೂ ಕಾರ್ಕಳದ ಅತ್ತೂರು ಚರ್ಚ್ ಬಳಿ ದೂರುದಾರ ಅಭಿಷೇಕ್ ಪೂಜಾರಿಯನ್ನು ಭೇಟಿಯಾಗಿದ್ದ ಸುದೀಪ್ ಮತ್ತು ಆತನ ಸಹಚರ ಮಹೇಶ್ ಎಂಬವರು, ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವಾಗಿ ಬಜಪೆಯ ಕಿನ್ನಿಪದವಿನಲ್ಲಿ ಹಿಂದು ವ್ಯಕ್ತಿಯನ್ನು ಕೊಂದ ಹಿನ್ನೆಲೆ ಇರುವ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು. ಕೊಲೆ ಕೃತ್ಯ ಎಸಗಿದರೆ ₹24 ಲಕ್ಷ ನಗದು ನೀಡಲಾಗುವುದು. ಜೈಲಿಗೆ ಹೋದರೆ ಕುಟುಂಬದ ನಿರ್ವಹಣೆಗೆ ಪ್ರತಿ ತಿಂಗಳು ₹5,000 ಮೌಲ್ಯದ ದಿನಸಿ ಹಾಗೂ ₹15,000 ಹಣ ನೀಡುವುದಾಗಿ ಆಮಿಷ ಒಡ್ಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹಣಕಾಸು ಒಪ್ಪಂದ ಬಳಿಕ ಅಭಿಷೇಕ್ ಹಾಗೂ ಆತನ ಸ್ನೇಹಿತ ಕೀರ್ತನ್ ಸ್ಕಾರ್ಪಿಯೋ ಕಾರಿನಲ್ಲಿ ತೆರಳಿ ಕಿನ್ನಿಪದವಿನ ವ್ಯಕ್ತಿಯ ಚಲನವಲನಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದರು. ಅಲ್ಲದೆ, ಸುಳ್ಯದ ಅಲೆಟ್ಟಿ ಗ್ರಾಮದ ಚಿಂತನ್ ಎಂಬಾತನನ್ನೂ ಸಂಪರ್ಕಿಸಿ ಕೃತ್ಯಕ್ಕೆ ಎರಡು ತಲವಾರುಗಳನ್ನು ಸಿದ್ಧಗೊಳಿಸಿದ್ದರು. ಹತ್ಯೆ ಮಾಡಲು ಆರೋಪಿಗಳಿಂದ ಪದೇ ಪದೆ ಒತ್ತಡ ಬರುತ್ತಿದ್ದ ಸಮಯದಲ್ಲೇ ದೂರುದಾರ ಅಭಿಷೇಕ್ ಅವರ ಪತ್ನಿಗೆ ಹೆರಿಗೆಯಾಗಿದೆ. ಮಗುವಿನ ಜನನದ ನಂತರ ಮನಸ್ಸು ಪರಿವರ್ತನೆಗೊಂಡ ಅಭಿಷೇಕ್, ಇನ್ನು ಜೈಲು ಸೇರಿದರೆ ಕುಟುಂಬ ಅನಾಥವಾಗುತ್ತದೆ ಎಂಬ ಭಯದಿಂದ ಕೃತ್ಯದಿಂದ ಹಿಂದೆ ಸರಿದಿದ್ದಾರೆ. ಬಳಿಕ ಆರೋಪಿಗಳೊಂದಿಗೆ ನಡೆಸಿದ್ದ ವಾಟ್ಸಾಪ್ ಚಾಟ್ಗಳು, ಯುಪಿಐ ಹಣ ವರ್ಗಾವಣೆ ಸಾಕ್ಷ್ಯಗಳು ಮತ್ತು ಸ್ಕ್ರೀನ್ಶಾಟ್ಗಳ ಸಮೇತ ಬಜಪೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ದೂರಿನ ಆಧಾರದಲ್ಲಿ ಬಜಪೆ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 55 ಹಾಗೂ 61(2)(a) ಅಡಿಯಲ್ಲಿ ಪ್ರಕರಣ (ಅ.ಕ್ರ: 155/2026) ದಾಖಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಹೆಚ್.ಸುಧೀರ್ ಕುಮಾರ್ ರೆಡ್ಡಿ ಪ್ರತಿಕ್ರಿಯಿಸಿ, “ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ. ಪ್ರಾಥಮಿಕ ಮಾಹಿತಿಯಂತೆ ಎಫ್ಐಆರ್ ದಾಖಲಿಸಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದೇವೆ. ಸದ್ಯಕ್ಕೆ ಈ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಬಜಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಕ್ರಾಸ್ ಬಳಿ 2025ರ ಮೇ 1ರಂದು ಸುಹಾಸ್ ಶೆಟ್ಟಿ ಎಂಬವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದರು. ಪ್ರಕರಣವನ್ನು ಎನ್ಐಎ ತನಿಖೆ ನಡೆಸುತ್ತಿದ್ದು, 11 ಮಂದಿ ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದೆ. ಇದೀಗ ಅದೇ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ರೂಪಿಸಿದ್ದ ಕೊಲೆ ಸಂಚಿನ ಬಗ್ಗೆ ಮಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
27-09-26 06:10 pm
HK News Desk
ಶಾರ್ಜಾದಲ್ಲಿ ಹತ್ಯೆಯಾದ ಕುಂದಾಪುರದ ವ್ಯಕ್ತಿಯ ಶವ ಹು...
25-09-26 04:53 pm
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am