ಬ್ರೇಕಿಂಗ್ ನ್ಯೂಸ್
30-09-26 10:04 am HK News Staffer ಕ್ರೈಂ
ಕುಂದಾಪುರ, ಸೆ 30: ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ ಸೌಪರ್ಣಿಕಾ ನದಿ ಸಮೀಪ ಪುರುಷ, ಮಹಿಳೆಯ ಮೃತದೇಹ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ಕೊಲ್ಲೂರು ಪೊಲೀಸ್ ಠಾಣೆಯ ಅಪರಾಧ ಪ್ರಕರಣವೊಂದರಲ್ಲಿ ಆರೋಪಿಗಳಾಗಿದ್ದ ಚಾರ್ಸಾಲು ಮೂಲದ ವಿಠಲ್ ನಾಯ್ಕ (36) ಹಾಗೂ ಹೊಸೂರು ಮೂಲದ ಭವ್ಯಾ ಅಲಿಯಾಸ್ ನಿಶ್ಮಿತಾ (33) ಎಂದು ಗುರುತಿಸಲಾಗಿದೆ.
ಅಕ್ರಮ ಸಂಬಂದ ಹೊಂದಿದ್ದರೆನ್ನಲಾದ ವಿಠಲ್ ನಾಯ್ಕ ಹಾಗೂ ಭವ್ಯಾ ಜೊತೆಗೆ ಸೇರಿ ಅನಾರೋಗ್ಯದಲ್ಲಿದ್ದ ವಿಠಲ್ ನಾಯ್ಕ ಪತ್ನಿಗೆ ಇಂಜೆಕ್ಷನ್‌ಗಳನ್ನು ನೀಡಿ ವಿಷಪ್ರಾಶನಗೊಳಿಸಿ ಕೊಲೆ ಮಾಡಲು ಯತ್ನಿಸಿದ್ದರು ಎನ್ನಲಾಗಿದ್ದು, ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಇಬ್ಬರ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.
ಭವ್ಯಾ ಹಾಗೂ ವಿಠಲ್ ಅಕ್ರಮ ಸಂಬಂಧ ಹೊಂದಿದ್ದು, ನರ್ಸ್ ಎಂದು ಪರಿಚಯಿಸಿ ಪತ್ನಿಗೆ ಇಂಜೆಕ್ಷನ್ ನೀಡಲಾಗಿತ್ತು ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಇಬ್ಬರು ನಾಪತ್ತೆಯಾಗಿದ್ದರು. ಈ ಪ್ರಕರಣದಡಿ ಕೊಲ್ಲೂರು ಪೊಲೀಸರು ಇಬ್ಬರು ಆರೋಪಿಗಳ ಪತ್ತೆಗೆ ಶೋದ ಕಾರ್ಯ ನಡೆಸುತ್ತಿದ್ದರು.


ಈ ಮಧ್ಯೆ ಆರೋಪಿಗಳ ಮೃತದೇಹ ಬೈಂದೂರು ಠಾಣೆ ವ್ಯಾಪ್ತಿಯ ಗೋಳಿಹೊಳೆ ಪ್ರದೇಶದಲ್ಲಿ ಪತ್ತೆಯಾಗಿದ್ದು ಇಬ್ಬರೂ ಕೆಲವು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಸ್ಥಳಕ್ಕೆ ಬೈಂದೂರು ಪೊಲೀಸರು, ಸೋಕೋ ತಂಡ ತೆರಳಿ ಪರಿಶೀಲನೆ ನಡೆಸಿದೆ. ಬೈಂದೂರು ಸಿಪಿಐ ಶಿವಕುಮಾರ್, ಕೊಲ್ಲೂರು ಪಿಎಸ್‌ಐ ವಿನಯ್ ಎಂ. ಕೊರ್ಲಹಳ್ಳಿ, ಬೈಂದೂರು ಪಿಎಸ್‌ಐ ಸುನೀಲ್ ಭೇಟಿ ನೀಡಿದರು.
ಗಂಗೊಳ್ಳಿ ತುರ್ತು ಸ್ಪಂದನಾ ತಂಡದ ಇಬ್ರಾಹಿಂ ಗಂಗೊಳ್ಳಿ, ವಿಲ್ಸನ್ ರೆಬೆಲ್ಲೋ, ವಿಕಾಸ್ ಮೊಗವೀರ ಅವರು ಮೃತದೇಹಗಳನ್ನು ಮರದಿಂದ ಇಳಿಸಿ ಆಸ್ಪತ್ರೆಗೆ ಸಾಗಿಸುವಲ್ಲಿ ಪೊಲೀಸರಿಗೆ ಸಹಕರಿಸಿದರು.
ಮರದ ಮೇಲೆ ನೇತಾಡುತ್ತಿದ್ದ ದೇಹದ ಅಳಿದುಳಿದ ಭಾಗಗಳನ್ನು ಇಳಿಸಲು ಹಾಗೂ ಕೆಳಗಡೆ ಬಿದ್ದಿದ್ದ ಇನ್ನಿತರ ಅವಶೇಷಗಳನ್ನು ವಿಂಗಡಿಸಿ ಅವುಗಳನ್ನು ಪ್ಯಾಕ್ ಮಾಡಿ ಬೈಂದೂರು ಸರಕಾರಿ ಆಸ್ಪತ್ರೆಯ ಶೀಥತಲೀಕರಣ ಘಟಕದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.
The bodies of a man and a woman, who were accused in a criminal case registered at Kollur Police Station, were found hanging from a tree near the Sowparnika River in the Charsal area of Golihole village in Byndoor taluk.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
30-09-26 10:49 am
HK News Staffer
ಡ್ರಗ್ಸ್ ಕಳ್ಳಸಾಗಣೆ ಆರೋಪ, ಸೌದಿಯಲ್ಲಿ ಕೇರಳದ ಯುವಕನ...
29-09-26 08:11 pm
ಸೌಜನ್ಯಾ ಮರು ತನಿಖೆಯೂ, ತಮಿಳುನಾಡಿನಲ್ಲಿ ಗ್ರಾನೈಟ್...
26-09-26 07:01 pm
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
29-09-26 01:25 pm
HK News Staffer
ಬಿ.ಸಿ.ರೋಡ್ ಸಭೆಯಲ್ಲಿ ಕರಾವಳಿ ಶಾಸಕರು, ಸಂಸದರ ಬಗ್ಗ...
29-09-26 11:41 am
ಕಂಬಳ ಲೋಕದ ದಿಗ್ಗಜ ‘ನಂದಳಿಕೆ ಪಾಂಡು’ ಇನ್ನಿಲ್ಲ: 20...
29-09-26 10:45 am
ದೇಶದಲ್ಲಿ 13 ಕೋಟಿ ಮತ ಡಿಲೀಟ್ ಆಗಿದ್ದು ಹೇಗೆ ? ಆಳು...
28-09-26 11:08 pm
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕರಾವಳಿಗೇನು ಕೊಟ್ಟಿ...
28-09-26 09:33 pm
30-09-26 10:33 am
HK News Staffer
Udupi Body found, Accused: ಕೊಲೆ ಯತ್ನ ಪ್ರಕರಣದ...
30-09-26 10:04 am
ಮಾಂಸದ ಅಂಗಡಿಯಲ್ಲೇ ಡ್ರಗ್ಸ್ ದಂಧೆ ; ಇಬ್ಬರು ಯುವಕರು...
30-09-26 10:03 am
ಸ್ವರ್ಣಾ ನದಿಯಲ್ಲಿ ದುರಂತ ; ಹಿರ್ಗಾನ ಬಳಿ ಈಜಲು ತೆರ...
29-09-26 09:26 pm
Mangalore Accident: ನ್ಯಾಯಾಧೀಶರ ಕಾರಿಗೆ ಗೂಡ್ಸ್...
29-09-26 08:14 pm