ಬ್ರೇಕಿಂಗ್ ನ್ಯೂಸ್
30-09-26 08:17 pm HK News Staffer ಕ್ರೈಂ
ಉಡುಪಿ , ಸೆ.30: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದ ಪರಿಣಾಮ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಗಾಯಗೊಂಡ ವ್ಯಕ್ತಿ. ಕೆಲವು ದಿನಗಳ ಹಿಂದೆ ಪತ್ನಿ ಜೊತೆಗಿನ ಜಗಳದ ಬಳಿಕ ವಿಷ ಸೇವಿಸಿದ್ದ ರಾಜೇಶ್ ತೀವ್ರ ಅಸ್ವಸ್ಥಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ರಾಜೇಶ್ ಚೇತರಿಸಿಕೊಂಡಿದ್ದರು. ಡಿಸ್ಚಾರ್ಜ್ಗೆ ಸಿದ್ಧತೆ ನಡೆಯುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.


ಇಂದು ಆಸ್ಪತ್ರೆ ಸಿಬ್ಬಂದಿ ಜೊತೆ ವಾಕಿಂಗ್ ತೆರಳುವುದಾಗಿ ಹೇಳಿ ರಾಜೇಶ್ ಕೊಠಡಿಯಿಂದ ಹೊರಬಂದಿದ್ದರು. ಬಳಿಕ ಏಕಾಏಕಿ ಆಸ್ಪತ್ರೆಯ ಕಿಟಕಿಯ ಬಳಿಗೆ ತೆರಳಿ ಗ್ರಿಲ್ಸ್ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ. ಸುರಕ್ಷತೆಗಾಗಿ ಅಳವಡಿಸಿದ್ದ ಜಾಲರಿಯನ್ನು ಹರಿದು ಇಳಿಯುತ್ತಿದ್ದಾಗಲೇ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ.
ಘಟನೆಯಲ್ಲಿ ರಾಜೇಶ್ಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಆಸ್ಪತ್ರೆ ಸಿಬ್ಬಂದಿ ರಕ್ಷಿಸಿ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಿದ್ದಾರೆ. ಸದ್ಯ ರಾಜೇಶ್ ಸ್ಥಿತಿ ಗಂಭೀರವಾಗಿದ್ದು, ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದೆ.
A patient undergoing treatment at Kasturba Medical College Hospital in Manipal was seriously injured after allegedly attempting suicide by jumping from the hospital’s fourth floor on Wednesday.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
30-09-26 10:49 am
HK News Staffer
ಡ್ರಗ್ಸ್ ಕಳ್ಳಸಾಗಣೆ ಆರೋಪ, ಸೌದಿಯಲ್ಲಿ ಕೇರಳದ ಯುವಕನ...
29-09-26 08:11 pm
ಸೌಜನ್ಯಾ ಮರು ತನಿಖೆಯೂ, ತಮಿಳುನಾಡಿನಲ್ಲಿ ಗ್ರಾನೈಟ್...
26-09-26 07:01 pm
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
30-09-26 05:33 pm
Mangaluru Staffer
Mangalore Kumpala Accident: ಕುಂಪಲ ; ರಸ್ತೆ ದಾಟ...
30-09-26 03:37 pm
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ಭೀ...
30-09-26 02:20 pm
Mrpl Fire, Mangalore: ಎಂಆರ್ ಪಿಎಲ್ ತೈಲ ಸ್ಥಾವರದ...
30-09-26 12:59 pm
ಮಂಗಳೂರಿನಲ್ಲಿ ಒಳಚರಂಡಿ ಕಾಮಗಾರಿ ; 20 ವರ್ಷಗಳ ಹಿಂದ...
29-09-26 01:25 pm
30-09-26 08:59 pm
HK News Staffer
ಮಣಿಪಾಲ KMC ಆಸ್ಪತ್ರೆಯಲ್ಲಿ ತೀರ್ಥಹಳ್ಳಿಯ ರೋಗಿ ಆತ್...
30-09-26 08:17 pm
ಉಡುಪಿಯಲ್ಲಿ ಹೆಲ್ಮೆಟ್ ಧರಿಸಿ ದುರ್ಗಾಂಬ ಬಸ್ ಕಳವು ;...
30-09-26 10:33 am
Udupi Body found, Accused: ಕೊಲೆ ಯತ್ನ ಪ್ರಕರಣದ...
30-09-26 10:04 am
ಮಾಂಸದ ಅಂಗಡಿಯಲ್ಲೇ ಡ್ರಗ್ಸ್ ದಂಧೆ ; ಇಬ್ಬರು ಯುವಕರು...
30-09-26 10:03 am