ಬ್ರೇಕಿಂಗ್ ನ್ಯೂಸ್
01-10-26 02:31 pm HK News Staffer ಕ್ರೈಂ
ಬೆಂಗಳೂರು , ಅ.1: ಬಹುಕೋಟಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ಗೆ ಕಸ್ಟಮ್ಸ್ ಇಲಾಖೆ ಬರೋಬ್ಬರಿ 89.91 ಕೋಟಿ ರೂ. ದಂಡ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಜಂಟಿ ನಿರ್ದೇಶಕ ಸಂದೀಪ್ ಹೊರಡಿಸಿರುವ 399 ಪುಟಗಳ ಆದೇಶದಲ್ಲಿ ಹಲವು ಮಹತ್ವದ ಅಂಶಗಳನ್ನು ಉಲ್ಲೇಖಿಸಲಾಗಿದೆ.
ಪ್ರಕರಣದ ಆದೇಶ ಹಾಗೂ ದಾಖಲೆಗಳು ಲಭ್ಯವಾಗಿರುವ ಹಿನ್ನೆಲೆಯಲ್ಲಿ, ದುಬೈನಿಂದ ಭಾರತಕ್ಕೆ ಚಿನ್ನ ಅಕ್ರಮವಾಗಿ ಸಾಗಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಇಲಾಖೆ ವಿಸ್ತೃತ ಕ್ರಮ ಕೈಗೊಂಡಿದೆ. 2024ರ ಮಾರ್ಚ್ 7ರಿಂದ 2025ರ ಫೆಬ್ರವರಿ 2ರವರೆಗಿನ ಅವಧಿಯಲ್ಲಿ 113 ಕೆಜಿ ಚಿನ್ನದ ಅಕ್ರಮ ಸಾಗಾಟ ನಡೆದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ನಟಿ ರನ್ಯಾ ರಾವ್ ಸಹ ಆರೋಪಿ ತರುಣ್ ಸೇರಿದಂತೆ ಇತರ ಮೂವರೊಂದಿಗೆ ಸೇರಿ ಚಿನ್ನ ಕಳ್ಳಸಾಗಣೆ ನಡೆಸಿದ ಆರೋಪ ಪ್ರಕರಣದಲ್ಲಿದೆ. ತನಿಖೆ ವೇಳೆ ವಿವಿಧ ದಾಖಲೆಗಳು ಹಾಗೂ ಇತರ ಸಾಕ್ಷ್ಯಗಳನ್ನು ಪರಿಶೀಲಿಸಲಾಗಿದೆ ಎಂದು ಕಸ್ಟಮ್ಸ್ ಆದೇಶದಲ್ಲಿ ತಿಳಿಸಲಾಗಿದೆ.
ಮನೆಯಲ್ಲಿ ಪತ್ತೆಯಾಗಿದ್ದೇನು?
ಈ ಹಿಂದೆ DRI ಅಧಿಕಾರಿಗಳು ರನ್ಯಾ ರಾವ್ ಅವರ ನಿವಾಸದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ 2.5 ಕೋಟಿ ರೂ. ನಗದು ಹಾಗೂ ಸುಮಾರು 2.06 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿದ್ದವು ಎಂದು ತನಿಖಾ ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ.
ಪತ್ತೆಯಾದ ಚಿನ್ನಾಭರಣಗಳ ಪಟ್ಟಿಯಲ್ಲಿ ಪಚ್ಚೆ ಕುಂದನ್ ಮೋಪು ನೆಕ್ಲೇಸ್, ವಜ್ರ ಮತ್ತು ಕೆಂಪು ಹರಳುಗಳ ವಂಕಿ, ಪೋಲ್ಕಿ ಕೆಂಪು ಜುಮುಕಿ, ಮುತ್ತಿನ ಮಾಟಿಲ್, ಹಸಿರು ಹರಳಿನ ಬಳೆ, ಕುಂದನ್ ನೆಕ್ಲೇಸ್ ಸೆಟ್, ಕುಂದನ್ ಹಾರ, ವಜ್ರ ಮತ್ತು ಪಚ್ಚೆ ಕಿವಿಯೋಲೆಗಳು, ಮುತ್ತಿನ ನೆಕ್ಲೇಸ್, ಪದಕ ಹಾಗೂ ಕರಿಮಣಿ ಸರ ಸೇರಿದಂತೆ ಹಲವು ಆಭರಣಗಳಿವೆ.
ವಿಮಾನ ನಿಲ್ದಾಣದಲ್ಲೇ ಬಂಧನ
2025ರ ಮಾರ್ಚ್ 2ರಂದು ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದ ರನ್ಯಾ ರಾವ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ DRI ಅಧಿಕಾರಿಗಳು ತಡೆದು ಪರಿಶೀಲಿಸಿದ್ದರು. ಈ ವೇಳೆ ಸುಮಾರು 12 ಕೋಟಿ ರೂ. ಮೌಲ್ಯದ 14.8 ಕೆಜಿ ವಿದೇಶಿ ಮೂಲದ ಚಿನ್ನದ ಬಿಸ್ಕತ್ತುಗಳು ಪತ್ತೆಯಾಗಿದ್ದವು.
ಇದಾದ ಬಳಿಕ ಅವರನ್ನು ಬಂಧಿಸಿ ಪ್ರಕರಣದ ಕುರಿತು ವಿಚಾರಣೆ ನಡೆಸಲಾಗಿತ್ತು. ತನಿಖೆ ಮುಂದುವರಿದಂತೆ ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಿಸಿದ ಹಲವು ಅಂಶಗಳು ಬೆಳಕಿಗೆ ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
COFEPOSA ಅಡಿ ಬಂಧನ
ಪ್ರಕರಣದಲ್ಲಿ ಆರ್ಥಿಕ ಅಪರಾಧಗಳ ನ್ಯಾಯಾಲಯವು 2025ರ ಮೇ ತಿಂಗಳಲ್ಲಿ ರನ್ಯಾ ರಾವ್ಗೆ ಡಿಫಾಲ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಕೇಂದ್ರ ಸರ್ಕಾರ COFEPOSA ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದರಿಂದ ತಕ್ಷಣ ಜೈಲಿನಿಂದ ಬಿಡುಗಡೆಯಾಗಲು ಸಾಧ್ಯವಾಗಿರಲಿಲ್ಲ.
COFEPOSA ಎಂದರೆ Conservation of Foreign Exchange and Prevention of Smuggling Activities Act. ವಿದೇಶಿ ವಿನಿಮಯ ಉಲ್ಲಂಘನೆ ಹಾಗೂ ಕಳ್ಳಸಾಗಣೆ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಈ ಕಾಯ್ದೆಯನ್ನು ಬಳಸಲಾಗುತ್ತದೆ.
ಇದೀಗ 89.91 ಕೋಟಿ ರೂ. ದಂಡ ವಿಧಿಸಿರುವ ಕಸ್ಟಮ್ಸ್ ಆದೇಶ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ನೀಡಿದೆ. ಆದೇಶದಲ್ಲಿರುವ ಆರೋಪಗಳು ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ಮುಂದಿನ ಕಾನೂನು ಪ್ರಕ್ರಿಯೆ ನಡೆಯಲಿದೆ.
06-10-26 09:32 am
HK News Staffer
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
06-10-26 10:11 am
HK News Staffer
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am