ಬ್ರೇಕಿಂಗ್ ನ್ಯೂಸ್
03-10-26 05:05 pm HK News Staffer ಕ್ರೈಂ
ಕಾಸರಗೋಡು, ಅ.3: ಅಪಘಾತದಲ್ಲಿ ಬೋರ್ವೆಲ್ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ ಮೇಲೆ ಪಲ್ಟಿಯಾದ ಪರಿಣಾಮ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ವೆಸ್ಟ್ ಎಳೇರಿ ಗ್ರಾಮದ ವರಕ್ಕಾಡ್ ಜಂಕ್ಷನ್ ಸಮೀಪ ಇಂದು ಮುಂಜಾನೆ ನಡೆದಿದೆ ಮೃತಪಟ್ಟವರನ್ನು ಮಧ್ಯಪ್ರದೇಶದ ದೇವೇಂದ್ರನ್ ಹಾಗೂ ಛತ್ತೀಸ್ಗಢದ ಮನಸೀರ್ ಎಂದು ಗುರುತಿಸಲಾಗಿದೆ.
ಅಪಘಾತದ ರಭಸಕ್ಕೆ ಮನೆಯ ಒಂದು ಭಾಗ ಕುಸಿದಿದ್ದು, ಮನೆಯೊಳಗಿದ್ದ ಕುಟುಂಬಸ್ಥರು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಇಬ್ಬರೂ ಬೋರ್ವೆಲ್ ಲಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ವಾಪಸ್ ತೆರಳುತ್ತಿದ್ದ ವೇಳೆ ವರಕ್ಕಾಡ್ ಜಂಕ್ಷನ್ ಬಳಿಯ ಕಡಿದಾದ ಇಳಿಜಾರಿನಲ್ಲಿ ಲಾರಿ ಏಕಾಏಕಿ ನಿಯಂತ್ರಣ ಕಳೆದುಕೊಂಡಿದೆ. ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿದ್ದ ಜೇಸನ್ ಎಂಬುವವರ ಮನೆಯ ಮೇಲೆ ಪಲ್ಟಿಯಾಗಿದೆ. ಲಾರಿಯಲ್ಲಿದ್ದ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.
ಅಪಘಾತದ ರಭಸಕ್ಕೆ ಮನೆಯ ಮೇಲ್ಛಾವಣಿಯ ಒಂದು ಭಾಗ ಸಂಪೂರ್ಣ ಕುಸಿದಿದೆ. ಆದರೆ ಮನೆಯೊಳಗಿದ್ದ ಜೇಸನ್ ಹಾಗೂ ಕುಟುಂಬ ಸದಸ್ಯರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಇನ್ನು, ಲಾರಿಯಲ್ಲಿದ್ದ ಭಾರೀ ಕ್ರೇನ್ನ ಒಂದು ಭಾಗ ಮನೆಯ ಟೆರೇಸ್ನ ಬದಿಗೆ ಸಿಲುಕಿಕೊಂಡಿತ್ತು. ಇದರಿಂದ ಮತ್ತಷ್ಟು ದೊಡ್ಡ ಅನಾಹುತ ಸಂಭವಿಸುವುದು ತಪ್ಪಿದೆ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಲಾರಿಯನ್ನು ತೆರವುಗೊಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.
20-11-26 05:15 pm
HK News Staffer
2028ರ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ; ಮಾಜಿ ಸಿಎಂ...
20-11-26 12:04 pm
ಹಿರಿಯೂರು ಅಭ್ಯರ್ಥಿ ; ನಾವು ಕುಮಾರಸ್ವಾಮಿ ಜೊತೆ ಮಾತ...
19-11-26 12:32 pm
ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ ; ಕಾರು - ಬೊಲೆರೋ...
18-11-26 11:03 pm
ರಾಜ್ಯದಲ್ಲಿ 30ಕ್ಕೂ ಹೆಚ್ಚು ಐಪಿಎಸ್ ವರ್ಗಾವಣೆ ; ಬೆ...
18-11-26 07:26 pm
21-11-26 11:44 am
HK News Staffer
ಜಾಗತಿಕ ಜನಸಂಖ್ಯೆಯಲ್ಲಿ ಇಸ್ಲಾಂ ಪಾರಮ್ಯ ; 2035ಕ್ಕೆ...
20-11-26 12:58 pm
ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ; ಮಾಜಿ ಮುಖ್ಯಸ್...
19-11-26 07:30 pm
"ಧರ್ಮ ಯಾವುದೇ ಇರಲಿ, ಪ್ರತಿಯೊಬ್ಬ ಭಾರತೀಯನ ರಕ್ತದಲ್...
19-11-26 01:19 pm
ಸೌದಿಗೆ ನವೆಂಬರ್ 30ರ ವರೆಗೆ ವಿಮಾನ ಸೇವೆ ರದ್ದು ; ಇ...
18-11-26 11:28 pm
22-11-26 04:17 pm
HK News Staffer
ಮಂಗಳೂರು ಏರ್ಪೋರ್ಟ್ ನಲ್ಲಿ ಪಾರ್ಕಿಂಗ್ ಶುಲ್ಕ ದುಬಾರ...
21-11-26 10:59 pm
‘ಮಹಾತ್ಮೆ ಕುದ್ಮುಲ್’ ; ಸೂರಿಲ್ಲದ, ತುಂಡು ಭೂಮಿ ಇಲ್...
21-11-26 10:29 pm
ಅಪಹರಣ ಆಗಿಲ್ಲ, ವಿದ್ಯಾರ್ಥಿನಿ ತಪ್ಪುದಾರಿ ತುಳಿದಿದ್...
20-11-26 09:53 pm
ಮುಸ್ಲಿಂ ಯುವತಿ ಅಪಹರಣ ; ಕೇರಳದಲ್ಲಿ ಸಂಬಂಧಿಕರ ಮನೆಯ...
20-11-26 09:51 pm
21-11-26 04:41 pm
HK News Staffer
ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಹಣಕ್ಕಾಗಿ ಅಜ್ಜಿಯನ್ನೇ ಕ...
21-11-26 12:41 pm
'ಬಸವ ಮಂಟಪ' ಕೃತಿ ವಿವಾದ ಹಿನ್ನೆಲೆ ; ಲೇಖಕ ರವಿ ಹಂಜ...
21-11-26 12:33 pm
ಬಂಟ್ವಾಳ ; ಶಾಲೆಯಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ...
19-11-26 09:20 pm
Baglur Manchapanahalli Murder: ಗುಜರಿ ವ್ಯಾಪಾರದ...
19-11-26 03:20 pm