ಬ್ರೇಕಿಂಗ್ ನ್ಯೂಸ್
05-10-26 08:26 pm HK News Staffer ಕ್ರೈಂ
ಬೆಂಗಳೂರು, ಅ.5 : ಸುಪ್ರೀಂ ಕೋರ್ಟಿನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬನನ್ನು 2018ರಲ್ಲಿ ಜೈಲಿನಿಂದ ಬಿಡುಗಡೆ ಮಾಡಿದ ಆರೋಪದಲ್ಲಿ ಆಗಿನ ಜೈಲು ಸುಪರಿಡೆಂಟ್ ಆಗಿದ್ದ, ಸದ್ಯ ಡಿಐಜಿ ಹುದ್ದೆಯಲ್ಲಿರುವ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, 2018ರಲ್ಲಿ ನಡೆದಿದ್ದ ಕೈದಿ ಬಿಡುಗಡೆ ಪ್ರಕರಣದಲ್ಲಿ ಸೋಮಶೇಖರ್ ಅವರ ಪಾತ್ರದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪರಪ್ಪನ ಅಗ್ರಹಾರ ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಅಂದು ಪರಪ್ಪನ ಅಗ್ರಹಾರ ಜೈಲಿನ ಚೀಫ್ ಸೂಪರಿಂಟೆಂಡೆಂಟ್ ಆಗಿದ್ದ ಸೋಮಶೇಖರ್ ಅವರ ಪಾತ್ರದ ಕುರಿತು ತನಿಖೆ ನಡೆಸುತ್ತಿದ್ದಾರೆ. ಸದ್ಯ ಡಿಐಜಿ ಹುದ್ದೆಯಲ್ಲಿರುವ ಸೋಮಶೇಖರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
2018ರಲ್ಲಿ ನಕಲಿ ಆದೇಶ ಸೃಷ್ಟಿಸಿ ಕೈದಿ ಬಿಡುಗಡೆ
2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್ ಎಂಬ ಕೈದಿಯನ್ನು ಸುಪ್ರೀಂ ಕೋರ್ಟ್ನ ನಕಲಿ ಆದೇಶವನ್ನು ಸೃಷ್ಟಿಸಿ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಶಂಕರ್ ಬಿಡುಗಡೆಗಾಗಿ ಸುಪ್ರೀಂ ಕೋರ್ಟ್ನ ಆದೇಶದಂತೆ ಕಾಣುವ ನಕಲಿ ದಾಖಲೆಯನ್ನು ಸೃಷ್ಟಿಸಲಾಗಿತ್ತು ಎಂಬ ಆರೋಪವಿದೆ. ಈ ದಾಖಲೆಯನ್ನು ಅಂದು ಜೈಲಿನಲ್ಲಿ ಎಸ್ಡಿಎ ಆಗಿದ್ದ ಶ್ರೀಕಾಂತ್ ಎಸ್. ಎಂಬಾತ ಸೃಷ್ಟಿಸಿದ್ದಾನೆ ಎಂದು ಆರೋಪಿಸಲಾಗಿದೆ. ನಕಲಿ ಆದೇಶವನ್ನು ಆಧಾರವಾಗಿಸಿ 2018ರ ನವೆಂಬರ್ 13ರಂದು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್ನನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು ಎಂದು ಪೊಲೀಸರು ತನಿಖೆಯಲ್ಲಿ ಕಂಡುಕೊಂಡಿದ್ದಾರೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಕೈದಿ ಶಂಕರ್ ಹಾಗೂ ನಕಲಿ ಆದೇಶ ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಶ್ರೀಕಾಂತ್ ಎಸ್. ಇಬ್ಬರನ್ನೂ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
ಇದೀಗ ಪ್ರಕರಣದಲ್ಲಿ ಅಂದಿನ ಜೈಲು ಚೀಫ್ ಸೂಪರಿಂಟೆಂಡೆಂಟ್ ಆಗಿದ್ದ ಸೋಮಶೇಖರ್ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಯುತ್ತಿದೆ. ನಕಲಿ ಆದೇಶದ ಆಧಾರದ ಮೇಲೆ ಕೈದಿಯನ್ನು ಬಿಡುಗಡೆ ಮಾಡುವ ಪ್ರಕ್ರಿಯೆಯಲ್ಲಿ ಅಧಿಕಾರಿಗಳ ಮಟ್ಟದಲ್ಲಿ ಸಹಕಾರ ನಡೆದಿದೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸೋಮಶೇಖರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ಮುಂದುವರಿದಿದೆ.
20-11-26 05:15 pm
HK News Staffer
2028ರ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ; ಮಾಜಿ ಸಿಎಂ...
20-11-26 12:04 pm
ಹಿರಿಯೂರು ಅಭ್ಯರ್ಥಿ ; ನಾವು ಕುಮಾರಸ್ವಾಮಿ ಜೊತೆ ಮಾತ...
19-11-26 12:32 pm
ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ ; ಕಾರು - ಬೊಲೆರೋ...
18-11-26 11:03 pm
ರಾಜ್ಯದಲ್ಲಿ 30ಕ್ಕೂ ಹೆಚ್ಚು ಐಪಿಎಸ್ ವರ್ಗಾವಣೆ ; ಬೆ...
18-11-26 07:26 pm
21-11-26 11:44 am
HK News Staffer
ಜಾಗತಿಕ ಜನಸಂಖ್ಯೆಯಲ್ಲಿ ಇಸ್ಲಾಂ ಪಾರಮ್ಯ ; 2035ಕ್ಕೆ...
20-11-26 12:58 pm
ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ; ಮಾಜಿ ಮುಖ್ಯಸ್...
19-11-26 07:30 pm
"ಧರ್ಮ ಯಾವುದೇ ಇರಲಿ, ಪ್ರತಿಯೊಬ್ಬ ಭಾರತೀಯನ ರಕ್ತದಲ್...
19-11-26 01:19 pm
ಸೌದಿಗೆ ನವೆಂಬರ್ 30ರ ವರೆಗೆ ವಿಮಾನ ಸೇವೆ ರದ್ದು ; ಇ...
18-11-26 11:28 pm
22-11-26 04:17 pm
HK News Staffer
ಮಂಗಳೂರು ಏರ್ಪೋರ್ಟ್ ನಲ್ಲಿ ಪಾರ್ಕಿಂಗ್ ಶುಲ್ಕ ದುಬಾರ...
21-11-26 10:59 pm
‘ಮಹಾತ್ಮೆ ಕುದ್ಮುಲ್’ ; ಸೂರಿಲ್ಲದ, ತುಂಡು ಭೂಮಿ ಇಲ್...
21-11-26 10:29 pm
ಅಪಹರಣ ಆಗಿಲ್ಲ, ವಿದ್ಯಾರ್ಥಿನಿ ತಪ್ಪುದಾರಿ ತುಳಿದಿದ್...
20-11-26 09:53 pm
ಮುಸ್ಲಿಂ ಯುವತಿ ಅಪಹರಣ ; ಕೇರಳದಲ್ಲಿ ಸಂಬಂಧಿಕರ ಮನೆಯ...
20-11-26 09:51 pm
21-11-26 04:41 pm
HK News Staffer
ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಹಣಕ್ಕಾಗಿ ಅಜ್ಜಿಯನ್ನೇ ಕ...
21-11-26 12:41 pm
'ಬಸವ ಮಂಟಪ' ಕೃತಿ ವಿವಾದ ಹಿನ್ನೆಲೆ ; ಲೇಖಕ ರವಿ ಹಂಜ...
21-11-26 12:33 pm
ಬಂಟ್ವಾಳ ; ಶಾಲೆಯಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ...
19-11-26 09:20 pm
Baglur Manchapanahalli Murder: ಗುಜರಿ ವ್ಯಾಪಾರದ...
19-11-26 03:20 pm