ಬ್ರೇಕಿಂಗ್ ನ್ಯೂಸ್
08-10-26 08:44 pm HK News Staffer ಕ್ರೈಂ
ಮಂಗಳೂರು, ಅ.8: ನವರಾತ್ರಿ ಭಾರತೀಯ ಸನಾತನ ಸಂಸ್ಕೃತಿಯ ಪವಿತ್ರವಾದ ಹಬ್ಬವಾಗಿದ್ದು, ಈ ದಿನಗಳಲ್ಲಿ ನಡೆಯುವ 'ದಾಂಡಿಯಾ/ಗರ್ಬಾ' ನೃತ್ಯವು ಹಿಂದೂ ಧರ್ಮೀಯರು ಅತ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸುವ ಧಾರ್ಮಿಕ ಆಚರಣೆಯಾಗಿದೆ. ಆದರೆ, ಮಂಗಳೂರು ನಗರದ ಪಬ್ಗಳು, ಪಾರ್ಟಿ ಹಾಲ್ಗಳು ಹಾಗೂ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ 'ದಾಂಡಿಯಾ' ಹೆಸರಿನಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಡಿಜೆ ಮ್ಯೂಸಿಕ್ ಹಾಗೂ ಅಶ್ಲೀಲ ಪಾರ್ಟಿಗಳನ್ನು ಆಯೋಜಿಸುತ್ತಿದ್ದು ಇದಕ್ಕೆಲ್ಲ ಪೊಲೀಸ್ ಇಲಾಖೆ ಅವಕಾಶ ನೀಡಬಾರದೆಂದು ಬಜರಂಗದಳ ಮತ್ತು ದುರ್ಗಾವಾಹಿನಿ ಆಗ್ರಹಿಸಿದೆ.
ಈ ಕುರಿತು ಪೋಸ್ಟರ್ಗಳು ಸಾರ್ವಜನಿಕವಾಗಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇಂತಹ ಪಾರ್ಟಿಗಳ ಮುಖಾಂತರ ಮದ್ಯ ಹಾಗೂ ಮಾದಕ ದ್ರವ್ಯಗಳ ಸೇವನೆಗೆ ಆಸ್ಪದ ಮಾಡಲಾಗುತ್ತಿದೆ ಎಂಬ ಸಂಶಯ ವ್ಯಕ್ತವಾಗುತ್ತಿದೆ. ದಾಂಡಿಯಾದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಆಯೋಜಿಸುತ್ತಿರುವ ಈ ಕಾರ್ಯಕ್ರಮಗಳು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆ ಇದೆ.
ದಾಂಡಿಯಾ ಕಾರ್ಯಕ್ರಮದ ಮುಖಾಂತರ ಯುವಜನತೆಯನ್ನು ದುರ್ಮಾರ್ಗಕ್ಕೆ ಎಳೆಯುವ ಇಂತಹ ಯಾವುದೇ ಅಸಭ್ಯ ಪಾರ್ಟಿ, ಫ್ಯಾಷನ್ ಶೋ ಅಶ್ಲೀಲ ಕಾರ್ಯಕ್ರಮಗಳಿಗೆ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದೆಂದು ಪೊಲೀಸ್ ಉಪ ಆಯುಕ್ತರನ್ನು ಭೇಟಿಯಾಗಿ ಮನವಿ ನೀಡಲಾಗಿದೆ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಂಘಟಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗಳಿಗೂ ದೂರು ನೀಡಲಾಗಿದ್ದು ಇದಕ್ಕೆಲ್ಲ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದಾಗಿ ಪ್ರಾಂತ ಮಾತೃಶಕ್ತಿ ಪ್ರಮುಖ್ ಶ್ರೀಮತಿ ಸುರೇಖಾ ರಾಜ್, ಜಿಲ್ಲಾ ಬಜರಂಗದಳ ಸಂಯೋಜಕ್ ಪ್ರೀತಮ್ ಕಾಟಿಪಳ್ಳ ವಿನಂತಿಸಿದ್ದಾರೆ.
ಕಾನೂನು ಕೈಗೆತ್ತಿಕೊಳ್ಳಬೇಡಿ ; ಕಮಿಷನರ್
ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ, ಅಂತಹ ಕಾನೂನು ವಿರೋಧಿ ಚಟುವಟಿಕೆ ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಿ, ಕಾನೂನು ರೀತ್ಯ ಇಲ್ಲದಿದ್ದರೆ ನಾವೇ ಕಾರ್ಯಕ್ರಮ ರದ್ದುಪಡಿಸುತ್ತೇವೆ. ಹಾಗಂತ, ಯಾರೇ ಆಗಲಿ ತಾವೇ ಕಾರ್ಯಕ್ರಮ ರದ್ದುಪಡಿಸುತ್ತೇವೆಂದು ಕಾನೂನು ಕೈಗೆತ್ತಿಕೊಂಡರೆ ಅದು ಕಾನೂನು ಬಾಹಿರವಾಗುತ್ತದೆ. ಅಲ್ಲದೆ, ಕಾನೂನು ರೀತ್ಯ ಕಾರ್ಯಕ್ರಮಗಳನ್ನು ನಿಲ್ಲಿಸಿದರೆಂದು ದೂರು ಬಂದರೆ, ಅಂತಹ ಕೃತ್ಯಗಳಿಗೆ ಹತ್ತು ವರ್ಷಗಳ ವರೆಗೆ ಜೈಲು ಶಿಕ್ಷೆಯಾಗಬಹುದೆಂದು ಮೊದಲೇ ಎಚ್ಚರಿಸುತ್ತೇನೆಂದು ತಿಳಿಸಿದ್ದಾರೆ.
30-10-26 08:26 pm
HK News
ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ; ಕೇಂದ್ರ ಸಚಿವ ಕುಮ...
30-10-26 05:15 pm
ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ; ನಂದಿನಿ ಹಾ...
29-10-26 08:21 pm
'ಮೈಸೂರು ಅರಮನೆ ಸರ್ಕಾರಕ್ಕೆ ಸೇರಿದ್ದು' ತನ್ನ ಹೇಳಿಕ...
28-10-26 10:52 pm
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಕ್ಕೆ ಚುನಾವಣೆ ; ನಾ...
27-10-26 09:47 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
30-10-26 12:51 pm
HK News Staffer
ಸೌಜನ್ಯಾ ಪ್ರಕರಣ ತನಿಖೆಯಲ್ಲಿ ಭಾಗಿಯಾಗಿದ್ದ ಎಲ್ಲ ಪೊ...
30-10-26 12:19 pm
UPSCಯಲ್ಲಿ 42ನೇ ರ್ಯಾಂಕ್ನಿಂದ ರಫೇಲ್ ಪೈಲಟ್ ವರೆ...
30-10-26 12:16 pm
ಕುಸುಮಾವತಿಯೇ, ಇಂದಿರಾವತಿಯೇ ? ಸರ್ಕಾರಿ ಜಮೀನು ಅಕ್ರ...
29-10-26 08:19 pm
ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆ ; ಪಿಎಸ್ಐ ಯೋಗೀಶ್...
29-10-26 02:12 pm
30-10-26 11:01 pm
HK News Staffer
Cyprian Pinto, Mangalore: 50ಕ್ಕೂ ಹೆಚ್ಚು ಬಾಲಕರ...
30-10-26 09:57 pm
ಆನ್ಲೈನಲ್ಲಿ ಕೇರಳ ಲಾಟರಿ ಗೆದ್ದ ಮಂಗಳೂರಿನ ವ್ಯಕ್ತಿಗ...
30-10-26 05:16 pm
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಬೆಂಗಳೂ...
30-10-26 05:13 pm
ಶಿವಮೊಗ್ಗದಿಂದ ಮಂಗಳೂರಿಗೆ 1.15 ಕೋಟಿ ನಗದು ರವಾನೆ ;...
29-10-26 11:02 pm