ಬ್ರೇಕಿಂಗ್ ನ್ಯೂಸ್
09-10-26 03:25 pm HK News Staffer ಕ್ರೈಂ
ಮಂಗಳೂರು, ಅ.9: ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತು (MDMA) ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಸುಮಾರು ₹ 1 ಕೋಟಿ 58 ಲಕ್ಷದ 34 ಸಾವಿರ ಮೌಲ್ಯದ 1 ಕೆಜಿ 796.96 ಗ್ರಾಂ MDMA ಮಾದಕ ವಸ್ತು ವಶಪಡಿಸಿದ್ದಾರೆ.
ಖಚಿತ ಮಾಹಿತಿಯೊಂದಿಗೆ ಸಿಸಿಬಿ ಪೊಲೀಸರು ಅ.08ರಂದು ರಾತ್ರಿ 10 ಗಂಟೆಗೆ ಉಳ್ಳಾಲ ತಾಲೂಕು ಕುಂಪಲದ ಡಿಮಾರ್ಟ್ ಬಳಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 1 ಕೆಜಿ 796.96 ಗ್ರಾಂ ಎಂಡಿಎಂಎ ಹಾಗೂ 03 ಮೊಬೈಲ್ ಫೋನ್, ಮಾದಕ ವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಪ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್, ವಾಟರ್ ಪ್ಯೂರಿಫೈಯರ್ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 1,63,84,000/- ಆಗಿರುತ್ತದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ನಿವಾಸಿ ಅಬ್ದುಲ್ ಹಾಪೀಲ್ (25), ಮಂಗಳೂರು ಕಸಬಾ ಬೆಂಗ್ರೆಯ ಜಿಯಾವುಲ್ ಹಕ್ (30), ಪಾಂಡೇಶ್ವರ ನಿವಾಸಿ ಅಲ್ತಾಫ್ (28) ಎಂದು ಗುರುತಿಸಲಾಗಿದೆ. ಆರೋಪಿ ಅಬ್ದುಲ್ ಹಾಪೀಲ್ ವಿರುದ್ದ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆ ಮಾಡಿದ ಪ್ರಕರಣ ಮತ್ತು ಆರೋಪಿ ಜಿಯಾವುಲ್ ಹಕ್ ವಿರುದ್ದ ದುಬೈ ದೇಶದ ರಸ್-ಅಲ್- ಖೈಮಾ ಎಂಬಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ 03 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ಹಿನ್ನೆಲೆ ಇದೆ. ಆರೋಪಿ ಅಲ್ತಾಫ್ ವಿರುದ್ದ ಈ ಹಿಂದೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ.
ಆರೋಪಿಗಳು ಪಂಜಾಬ್ ರಾಜ್ಯದ ಅಮೃತಸರದಿಂದ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್ ನಲ್ಲಿ ನೀರು ಸಂಗ್ರಹವಾಗುವ ಸ್ಥಳದಲ್ಲಿ ಭದ್ರವಾಗಿರಿಸಿ, ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿದ್ದರು. ನಂತರ ಕೇರಳ ರಾಜ್ಯ ಹಾಗೂ ಮಂಗಳೂರು ನಗರದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದು ತನಿಖೆಯಲ್ಲಿ ತಿಳಿದುಬಂದಿದೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
09-10-26 03:25 pm
HK News Staffer
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm
Albert Rego, Body Exhume, Mangalore: ಆಸ್ತಿಗಾಗ...
09-10-26 10:01 am
ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪ...
08-10-26 08:44 pm
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm