ಬ್ರೇಕಿಂಗ್ ನ್ಯೂಸ್
12-10-26 10:06 am HK News Staffer ಕ್ರೈಂ
ಕೊಚ್ಚಿ, ಅ.12: ಕೇರಳದ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ನೆಡುಂಬಾಶ್ಶೇರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಮೂವರು ಯುವ ಉದ್ಯೋಗಿಗಳು ಬಲಿಯಾಗಿದ್ದಾರೆ. ಅತಿವೇಗದಲ್ಲಿ ಬಂದ ಮಿನಿ ಕೂಪರ್ ಕಾರು ಸ್ಕೂಟರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಾರನ್ನು 19 ವರ್ಷದ ಸುಹೇಲ್ ಸಜೀವ್ ಚಲಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿರುವ ಶಂಕೆಯೂ ವ್ಯಕ್ತವಾಗಿದೆ.
ಮೃತರನ್ನು ವಯನಾಡಿನ ದೇವಿಕಾ (21), ಪಾಲಕ್ಕಾಡ್ನ ಗೋಪಿಕಾ (22) ಮತ್ತು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಇಜಾಜ್ (21) ಎಂದು ಗುರುತಿಸಲಾಗಿದೆ. ಮೂವರೂ ಕೊಚ್ಚಿಯ ತ್ರಿಕ್ಕಕ್ಕರ ಪ್ರದೇಶದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಟೀ ಕುಡಿಯಲು ಸ್ಕೂಟರ್ನಲ್ಲಿ ತೆರಳಿದ್ದ ಅವರು ಮರಳುತ್ತಿದ್ದಾಗ ದುರಂತ ಸಂಭವಿಸಿದೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ವೇಗವಾಗಿ ಬಂದ ಮಿನಿ ಕೂಪರ್ ಸ್ಕೂಟರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದು, ಸ್ಕೂಟರ್ ಕಾರಿನೊಂದಿಗೆ ಸುಮಾರು 100 ಮೀಟರ್ ದೂರ ಎಳೆಯಲ್ಪಟ್ಟಿದೆ ಎಂದು ವರದಿಯಾಗಿದೆ. ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೂವರೂ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಸ್ಥಳೀಯರು ಚಾಲಕನನ್ನು ಪ್ರಶ್ನಿಸಿದಾಗ, ಆತ ನಿರ್ಲಕ್ಷ್ಯದಿಂದ ವರ್ತಿಸಿದ್ದಾನೆ ಎಂದು ಆರೋಪಿಸಿದ್ದಾರೆ. “ರಸ್ತೆಗಳಲ್ಲಿ ವೇಗವಾಗಿ ವಾಹನ ಚಲಾಯಿಸಿದರೆ ತಪ್ಪೇನು? ನನ್ನ ತಂದೆ ಎಲ್ಲವನ್ನೂ ನೋಡಿಕೊಳ್ಳುತ್ತಾರೆ” ಎಂಬರ್ಥದಲ್ಲಿ ಮಾತನಾಡಿದ್ದಾನೆ ಎನ್ನಲಾಗಿದೆ. ಈತನ ವರ್ತನೆ ಸಾರ್ವಜನಿಕರ ಆಕ್ರೋಶಕ್ಕೂ ಮತ್ತಷ್ಟು ಕಾರಣವಾಗಿವೆ.
ಚಾಲಕನನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ಮತ್ತು ಇತರ ಸಾಕ್ಷ್ಯಗಳ ಆಧಾರದ ಮೇಲೆ ಮದ್ಯಪಾನದ ಆರೋಪವನ್ನು ಪರಿಶೀಲಿಸಲಾಗುತ್ತಿದೆ.
ಕೇರಳದಲ್ಲಿ ಮದ್ಯಪಾನಕ್ಕೆ ಕಾನೂನುಬದ್ಧ ಕನಿಷ್ಠ ವಯಸ್ಸು 23 ವರ್ಷವಾಗಿರುವ ಹಿನ್ನೆಲೆಯಲ್ಲಿ, 19 ವರ್ಷದ ಯುವಕನಿಗೆ ಮದ್ಯ ಪೂರೈಸಿದ ಆರೋಪ ಎದುರಿಸುತ್ತಿರುವ ಬಾರ್ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಬಕಾರಿ ಸಚಿವ ಎಂ. ಲಿಜು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಪಘಾತಕ್ಕೂ ಮುನ್ನ ಆರೋಪಿ ಹಲವು ಬಾರ್ಗಳಿಗೆ ಭೇಟಿ ನೀಡಿ ಮದ್ಯ ಸೇವಿಸಿದ್ದಾನೆ ಎಂಬ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ ಎಂದು ವರದಿಗಳು ತಿಳಿಸಿವೆ.
ನಿಯಮ ಉಲ್ಲಂಘಿಸಿ ಮದ್ಯ ಪೂರೈಸಿರುವುದು ದೃಢಪಟ್ಟರೆ ಸಂಬಂಧಪಟ್ಟ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಈ ಪ್ರಕರಣವು ಅಪ್ರಾಪ್ತ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದನ್ನು ತಡೆಯುವ ಅಗತ್ಯದ ಬಗ್ಗೆಯೂ ಚರ್ಚೆ ಹುಟ್ಟುಹಾಕಿದೆ. ನೆಡುಂಬಸ್ಸೆರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 105ರ ಅಡಿಯಲ್ಲಿ ಅಪರಾಧಪೂರ್ಣ ನರಹತ್ಯೆ ಸೇರಿದಂತೆ ಸಂಬಂಧಿತ ಆರೋಪಗಳಡಿ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಅಪಘಾತದ ನಿಖರ ಕಾರಣ, ಚಾಲಕನ ಮದ್ಯಪಾನದ ಸ್ಥಿತಿ ಮತ್ತು ಇತರ ಅಂಶಗಳ ಕುರಿತು ತನಿಖೆ ನಡೆಯುತ್ತಿದೆ.
20-11-26 05:15 pm
HK News Staffer
2028ರ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ; ಮಾಜಿ ಸಿಎಂ...
20-11-26 12:04 pm
ಹಿರಿಯೂರು ಅಭ್ಯರ್ಥಿ ; ನಾವು ಕುಮಾರಸ್ವಾಮಿ ಜೊತೆ ಮಾತ...
19-11-26 12:32 pm
ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ ; ಕಾರು - ಬೊಲೆರೋ...
18-11-26 11:03 pm
ರಾಜ್ಯದಲ್ಲಿ 30ಕ್ಕೂ ಹೆಚ್ಚು ಐಪಿಎಸ್ ವರ್ಗಾವಣೆ ; ಬೆ...
18-11-26 07:26 pm
21-11-26 11:44 am
HK News Staffer
ಜಾಗತಿಕ ಜನಸಂಖ್ಯೆಯಲ್ಲಿ ಇಸ್ಲಾಂ ಪಾರಮ್ಯ ; 2035ಕ್ಕೆ...
20-11-26 12:58 pm
ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ; ಮಾಜಿ ಮುಖ್ಯಸ್...
19-11-26 07:30 pm
"ಧರ್ಮ ಯಾವುದೇ ಇರಲಿ, ಪ್ರತಿಯೊಬ್ಬ ಭಾರತೀಯನ ರಕ್ತದಲ್...
19-11-26 01:19 pm
ಸೌದಿಗೆ ನವೆಂಬರ್ 30ರ ವರೆಗೆ ವಿಮಾನ ಸೇವೆ ರದ್ದು ; ಇ...
18-11-26 11:28 pm
22-11-26 04:17 pm
HK News Staffer
ಮಂಗಳೂರು ಏರ್ಪೋರ್ಟ್ ನಲ್ಲಿ ಪಾರ್ಕಿಂಗ್ ಶುಲ್ಕ ದುಬಾರ...
21-11-26 10:59 pm
‘ಮಹಾತ್ಮೆ ಕುದ್ಮುಲ್’ ; ಸೂರಿಲ್ಲದ, ತುಂಡು ಭೂಮಿ ಇಲ್...
21-11-26 10:29 pm
ಅಪಹರಣ ಆಗಿಲ್ಲ, ವಿದ್ಯಾರ್ಥಿನಿ ತಪ್ಪುದಾರಿ ತುಳಿದಿದ್...
20-11-26 09:53 pm
ಮುಸ್ಲಿಂ ಯುವತಿ ಅಪಹರಣ ; ಕೇರಳದಲ್ಲಿ ಸಂಬಂಧಿಕರ ಮನೆಯ...
20-11-26 09:51 pm
21-11-26 04:41 pm
HK News Staffer
ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಹಣಕ್ಕಾಗಿ ಅಜ್ಜಿಯನ್ನೇ ಕ...
21-11-26 12:41 pm
'ಬಸವ ಮಂಟಪ' ಕೃತಿ ವಿವಾದ ಹಿನ್ನೆಲೆ ; ಲೇಖಕ ರವಿ ಹಂಜ...
21-11-26 12:33 pm
ಬಂಟ್ವಾಳ ; ಶಾಲೆಯಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ...
19-11-26 09:20 pm
Baglur Manchapanahalli Murder: ಗುಜರಿ ವ್ಯಾಪಾರದ...
19-11-26 03:20 pm