Kokkada Fight, Mangalore: ಕೊಕ್ಕಡ ; ಹೂವಿನ ವ್ಯಾಪಾರ ವಿಚಾರದಲ್ಲಿ ಎರಡು ಕುಟುಂಬದ ಮಧ್ಯೆ ಗಲಾಟೆ, ಮಹಿಳೆಯರು, ಪುರುಷರ ಹೊಡೆದಾಟದ ವಿಡಿಯೋ ವೈರಲ್ 

18-10-26 09:32 pm       HK News Staffer   ಕ್ರೈಂ

ಧರ್ಮಸ್ಥಳ ಬಳಿಯ ಕೊಕ್ಕಡದಲ್ಲಿ ಹೂವು ವ್ಯಾಪಾರ ವಿಷಯದಲ್ಲಿ ಎರಡು ತಂಡಗಳ ಮಧ್ಯೆ ಗಲಾಟೆ ನಡೆದಿದ್ದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಮಹಿಳೆಯರು ಮತ್ತು ಪುರುಷರು ಹೊಡೆದಾಟ ನಡೆಸಿರುವ ವಿಡಿಯೋ ವೈರಲ್ ಆಗಿದೆ. 

ಬೆಳ್ತಂಗಡಿ, ಅ.18: ಧರ್ಮಸ್ಥಳ ಬಳಿಯ ಕೊಕ್ಕಡದಲ್ಲಿ ಹೂವು ವ್ಯಾಪಾರ ವಿಷಯದಲ್ಲಿ ಎರಡು ತಂಡಗಳ ಮಧ್ಯೆ ಗಲಾಟೆ ನಡೆದಿದ್ದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಮಹಿಳೆಯರು ಮತ್ತು ಪುರುಷರು ಹೊಡೆದಾಟ ನಡೆಸಿರುವ ವಿಡಿಯೋ ವೈರಲ್ ಆಗಿದೆ. 

ಕೊಕ್ಕಡ ಗ್ರಾಮದ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ ಗೆ ಸೇರಿದ ಕಟ್ಟಡದ ಹೂವಿನ ವ್ಯಾಪಾರದ ಅಂಗಡಿ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ಬಗ್ಗೆ ಕೊಕ್ಕಡ ನಿವಾಸಿ ಕೃಷ್ಣ  ಭಟ್‌ ಎಂಬವರ ದೂರಿನ ಪ್ರಕಾರ, ರಾಘವ ಭಂಡಾರಿ ಎಂಬವರು ಮತ್ತು ಅವರ ಕೆಲಸದವರು ವ್ಯಾಪಾರ ಮಾಡುತ್ತಿದ್ದಾಗ, ಸದ್ರಿ ಅಂಗಡಿಯಲ್ಲಿ ಈ ಹಿಂದೆ ವ್ಯಾಪಾರ ನಡೆಸುತ್ತಿದ್ದ ಆರೋಪಿತ ಹರೀಶ್‌ ಮತ್ತು ಅವರ ಹೆಂಡತಿ ಮಕ್ಕಳು ಹಾಗೂ ಇತರರು ಏಕಾಏಕಿ ಅಂಗಡಿಯ ಒಳಗೆ ಬಂದು ಗಲಾಟೆ ನಡೆಸಿದ್ದಾರೆ. ಘಟನೆಯಲ್ಲಿ ಸುಮಾರು 25,000/ ರೂ. ಅಂದಾಜು ಮೌಲ್ಯದ ಕಟ್ಟಡ ಹಾಗೂ ಸ್ವತ್ತುಗಳನ್ನು ಹಾನಿ ಮಾಡಿ ರಾಘವ ಭಂಡಾರಿ ಮತ್ತು ಅವರ ಕೆಲಸದವರಿಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ  ನಿಂದಿಸಿ, ಜೀವ ಬೆದರಿಕೆ ಹಾಕಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 78/2026, ಕಲಂ: 115(2), 118(1), 324(4), 329(4), 351(2), 352 R/W 190 ಬಿ ಎನ್‌ ಎಸ್‌ -2023 ರಂತೆ ಪ್ರಕರಣ ದಾಖಲಾಗಿರುತ್ತದೆ.

ಇದೇ ವಿಷಯದಲ್ಲಿ ಸೌತಡ್ಕ ದೇವಸ್ಥಾನದ ಬಳಿ ಅಂಗಡಿಯಲ್ಲಿ ಹರಿಶ್ಚಂದ್ರ ಎಂಬವರು ವ್ಯಾಪಾರ ಮಾಡಿಕೊಂಡಿದ್ದಾಗ ಆರೋಪಿಗಳಾದ ರಾಘವ ಭಂಡಾರಿ, ಲಿಂಗಪ್ಪ, ಕಿಶೋರ್, ಚೇತನ್ ಎಂಬವರು ಅಂಗಡಿಗೆ ಅಕ್ರಮವಾಗಿ ಪ್ರವೇಶಿಸಿ, ಅಂಗಡಿಯ ಸೊತ್ತುಗಳನ್ನು ಹೊರಗೆ ಬಿಸಾಡಿ, ಹರಿಶ್ಚಂದ್ರರವರಿಗೆ, ಅವರ ಪತ್ನಿಗೆ ಹಾಗೂ ಕೆಲಸಗಾರರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ, ಅನುಚಿತವಾಗಿ ವರ್ತಿಸಿ ಜೀವ ಬೆದರಿಕೆ ಒಡ್ಡಿರುತ್ತಾರೆ ಎಂಬುದಾಗಿ ಹರಿಶ್ಚಂದ್ರರವರ ಪತ್ನಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:  79/2026 ಕಲಂ: 329(4), 324(4), 352, 74, 118(1), 115(2), 351(2)     R/W 3(5) BNS -2023 ರಂತೆ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಎರಡೂ ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

A dispute between two families over the flower trade in Kokkada reportedly escalated into a physical altercation, involving both men and women.