ಬ್ರೇಕಿಂಗ್ ನ್ಯೂಸ್
20-10-26 03:10 pm HK News Staffer ಕ್ರೈಂ
ಮಂಗಳೂರು, ಅ.20: ಉಳ್ಳಾಲದ ಮೊಗವೀರಪಟ್ನ ಶಾರದೋತ್ಸವ ಹಿನ್ನೆಲೆಯಲ್ಲಿ ಕಳೆದ ವರ್ಷ ಅಹಿತಕರ ಘಟನೆ ನಡೆದಿರುವ ಹಿನ್ನೆಲೆಯಲ್ಲಿ ಈ ಬಾರಿ ಶಾರದಾ ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಇದಕ್ಕಾಗಿ ಟ್ಯಾಬ್ಲೋ ಇಳಿಸುವವರು ಅಥವಾ ಸಂಘಟಕರು ಪೊಲೀಸ್ ಇಲಾಖೆಗೆ ಬಾಂಡ್ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ, ವಿವಿಧ ಸ್ತಬ್ಧಚಿತ್ರಗಳ ಸಂಘಟಕರಿಂದ ಪ್ರತ್ಯೇಕವಾಗಿ ಮುಚ್ಚಳಿಕೆ ಬರೆಸಿಕೊಡುವಂತೆ ಪೊಲೀಸರು ಆರಂಭದಲ್ಲಿ ಮನವಿ ಮಾಡಿದ್ದರು. ಆನಂತರ, ಸಂಘಟಕರು ಪೊಲೀಸ್ ಆಯುಕ್ತರ ಕಚೇರಿಯನ್ನು ಸಂಪರ್ಕಿಸಿ, ಎಲ್ಲರ ಪರವಾಗಿ ಒಂದೇ ಮುಚ್ಚಳಿಕೆಯನ್ನು ಸ್ವೀಕರಿಸುವಂತೆ ಕೇಳಿಕೊಂಡಿದ್ದರು. ಇದಕ್ಕೆ ಪೊಲೀಸರು ಸಮ್ಮತಿಸಿ ಒಂದೇ ಮುಚ್ಚಳಿಕೆ ನೀಡುವಂತೆ ಸೂಚಿಸಿದ್ದರು.
ಆದರೆ ಸಂಘಟಕರು ನಂತರ ಯಾವುದೇ ಮುಚ್ಚಳಿಕೆಯನ್ನು ನೀಡಲು ನಿರಾಕರಿಸಿದ್ದಾರೆ. ಅಲ್ಲದೆ, ತಾವು ಇಷ್ಟಬಂದಂತೆ ಮೆರವಣಿಗೆ ನಡೆಸುವುದಾಗಿಯೂ, ಯಾವುದೇ ಮುಚ್ಚಳಿಕೆ ಸಲ್ಲಿಸುವುದಿಲ್ಲವೆಂದೂ ತಿಳಿಸಿದ್ದಾರೆ. ಆಮೂಲಕ ಪರೋಕ್ಷವಾಗಿ ಸ್ಥಳೀಯರು ಪೊಲೀಸರಿಗೆ ಸವಾಲು ಹಾಕಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಹೇಳಿಕೆ ಬಿಡುಗಡೆ ಮಾಡಿದ್ದು ಪೊಲೀಸರು ಇದುವರೆಗೆ ಅತ್ಯಂತ ಸಂಯಮದಿಂದ ವರ್ತಿಸಿದ್ದು, ಸಂಘಟಕರ ಸಹಕಾರ ಪಡೆಯಲು ಸೌಹಾರ್ದಯುತ ಪ್ರಯತ್ನಗಳನ್ನು ಮಾಡಿದ್ದಾರೆ. ಬಾಂಡ್ ಪಡೆಯುವುದು ಯಾವುದೇ ಧಾರ್ಮಿಕ ಅಥವಾ ಸಾಂಸ್ಕೃತಿಕ ಮೆರವಣಿಗೆಗೆ ಅಡ್ಡಿಪಡಿಸುವ ಉದ್ದೇಶದ್ದಲ್ಲ; ಬದಲಿಗೆ ಸಾರ್ವಜನಿಕ ಶಾಂತಿ ಮತ್ತು ಕಾನೂನು ಪಾಲನೆಯನ್ನು ಖಚಿತಪಡಿಸುವುದಾಗಿದೆ ಎಂದು ಹೇಳಿದ್ದಾರೆ.
"ಒಂದು ವೇಳೆ ಯಾವುದೇ ವ್ಯಕ್ತಿ ಅಥವಾ ಗುಂಪು ಕಾನೂನನ್ನು ಉಲ್ಲಂಘಿಸುವ ಅಥವಾ ಶಾಂತಿಭಂಗ ಮಾಡುವ ಉದ್ದೇಶದಿಂದ ಮೆರವಣಿಗೆ ನಡೆಸಲು ಮುಂದಾದರೆ, ಪರಿಸ್ಥಿತಿಗೆ ತಕ್ಕಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಅಡಿಯಲ್ಲಿ ಸೂಕ್ತ ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಬಗ್ಗೆ ಸಂಘಟಕರಿಗೂ ತಿಳಿಸಲಾಗಿದ್ದು ಶಾರದಾ ಮೆರವಣಿಗೆಯನ್ನು ಶಾಂತಿಯುತವಾಗಿ ನಿರ್ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
20-10-26 06:06 pm
HK News Staffer
ಮೈಸೂರು ದಸರಾ ಕಂಬಳ ಸಂಪನ್ನ ; 16 ಗ್ರಾಂ ಚಿನ್ನ ಗೆದ್...
20-10-26 11:04 am
ಸಂಪುಟದಲ್ಲಿ ಮಹಿಳೆಗೆ ಸಿಗದ ಸ್ಥಾನ ; ಮಹಿಳಾ ಕಾಂಗ್ರ...
17-10-26 07:30 pm
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
20-10-26 01:18 pm
HK News Staffer
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
19-10-26 08:41 pm
HK News Staffer
ಸಹಕಾರಿ ಬ್ಯಾಂಕ್ ನಿರ್ದೇಶಕ ಸ್ಥಾನ 10 ವರ್ಷಕ್ಕೆ ಮಿತ...
19-10-26 07:10 pm
G I Bakery Raid, Mangalore: ಅವಧಿ ಮುಗಿದ ತಿಂಡಿಗ...
17-10-26 11:04 pm
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
20-10-26 05:06 pm
HK News Staffer
ಮಂಗಳೂರಿನ ಮಹಿಳಾ ಅಧಿಕಾರಿಗೆ ಅಶ್ಲೀಲ ವಿಡಿಯೋ ಕಳುಹಿಸ...
20-10-26 04:13 pm
ಮೊಗವೀರಪಟ್ನ ಶಾರದಾ ಮೆರವಣಿಗೆ ; ಟ್ಯಾಬ್ಲೋಗಳಿಗೆ ಬಾಂ...
20-10-26 03:10 pm
ಮೈಸೂರು ದಸರಾ ನೋಡಿ ವಾಪಸಾಗುತ್ತಿದ್ದ ವೇಳೆ ಬೆಳ್ತಂಗ...
20-10-26 10:56 am
ಉಪ್ಪಿನಂಗಡಿಯಲ್ಲಿ ತಲವಾರು ಝಳಪಿಸಿದ ಗ್ಯಾಂಗ್ ; ಕುಡಿ...
19-10-26 04:20 pm