ಸಂಪಾಜೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು- ಲಾರಿ ಮುಖಾಮುಖಿ ಡಿಕ್ಕಿ ; ಮೈಸೂರಿಗೆ ತೆರಳುತ್ತಿದ್ದ ವಿಟ್ಲದ ಕುಟುಂಬಕ್ಕೆ ಆಘಾತ, 10 ವರ್ಷದ ಬಾಲಕ ಮೃತ್ಯು

25-10-26 01:31 pm       HK News Staffer   ಕ್ರೈಂ

ಕಾರು ಮತ್ತು ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ವಿಟ್ಲ ಬಳಿಯ ಪುಣಚ ಮೂಲದ ಬಾಲಕ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ನಡೆದಿದೆ.

ಪುತ್ತೂರು, ಅ.25 : ಕಾರು ಮತ್ತು ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ವಿಟ್ಲ ಬಳಿಯ ಪುಣಚ ಮೂಲದ ಬಾಲಕ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ನಡೆದಿದೆ.

ಭಾನುವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು ಮೈಸೂರಿನಲ್ಲಿ ಉದ್ಯೋಗದಲ್ಲಿದ್ದ ವಿಟ್ಲ ಮೂಲದ ನಾರಾಯಣ ಎಂಬವರು ಮೈಸೂರಿಗೆ ಕುಟುಂಬ ಸಮೇತರಾಗಿ ಕಾರಿನಲ್ಲಿ ತೆರಳುತ್ತಿದ್ದಾಗ ಮಡಿಕೇರಿ ಕಡೆಯಿಂದ ಬರುತ್ತಿದ್ದ ಲಾರಿ ಎದುರಿನಿಂದ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು ಹಲವರಿಗೆ ತೀವ್ರ ಗಾಯಗಳಾಗಿವೆ‌. 

ಕಾರಿನಲ್ಲಿದ್ದ 10 ವರ್ಷದ ಬಾಲಕ ತೀವ್ರ ಗಾಯಗೊಂಡು ಮೃತಪಟ್ಟಿದ್ದು ಇತರ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು ಗಾಯಾಳುಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ವರ್ಗಾಯಿಸಲಾಗಿದೆ.