ಬ್ರೇಕಿಂಗ್ ನ್ಯೂಸ್
25-10-26 02:49 pm HK News Staffer ಕ್ರೈಂ
ಮಂಗಳೂರು, ಅ.25: ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ 18-18ರ ಯುವಕರು ಮತ್ತು ಇತರ 18 ವರ್ಷದ ಒಳಗಿನ ಅಪ್ರಾಪ್ತರು ಸೇರಿಕೊಂಡು ಪಾರ್ಕ್ ಮಾಡುತ್ತಿದ್ದ ಬೈಕ್, ಇನ್ನಿತರ ದ್ವಿಚಕ್ರ ವಾಹನಗಳನ್ನು ಕಳವುಗೈದು ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದು ಮೂವರು ಅಪ್ರಾಪ್ತರು ಸೇರಿ ಒಟ್ಟು ಏಳು ಮಂದಿ ಹದಿಹರೆಯದ ಯುವಕರನ್ನು ಬಂಧಿಸಿದ್ದಾರೆ. ಕಳವುಗೈದ ಆರು ಮತ್ತು ಕೃತ್ಯಕ್ಕೆ ಬಳಸಿದ ಮೂರು ಸೇರಿ ಒಟ್ಟು ಒಂಬತ್ತು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ವೆಲೆನ್ಸಿಯಾ ಜಂಕ್ಷನ್ ಬಳಿಯ ಡಾನ್ ಬಾಸ್ಕೋ ಹಾಸ್ಟೇಲ್ ಬಳಿ ಅ.12ರಂದು ನಿಲ್ಲಿಸಿದ್ದ ಕೆ.ಟಿ.ಎಮ್ ಡ್ಯೂಕ್ ಮೋಟಾರು ಸೈಕಲ್, ಅ.19ರಂದು ಜಪ್ಪು ಮಾರ್ಕೆಟ್ ಬಳಿ ನಿಲ್ಲಿಸಿದ್ದ ಯಮಹಾ ಎಫ್.ಜೆಡ್ ಮೋಟಾರ್ ಸೈಕಲ್, ಅ.21ರಂದು ಅತ್ತಾವರ ಕೆಎಂಸಿ ಆಸ್ಪತ್ರೆಯ ಬಳಿಯಿರುವ ದುರ್ಗಾ ಹೋಟೇಲ್ ಮುಂದೆ ನಿಲ್ಲಿಸಿದ್ದ ಬಜಾಜ್ ಡಿಸ್ಕವರಿ ಬೈಕ್ ಹಾಗೂ ಅ.22ರಂದು ಹೊಯಿಗೆ ಬಜಾರ್ ಭಗವತಿ ಅಪಾರ್ಟ್ಮೆಂಟ್ ಕೆಳಗೆ ನಿಲ್ಲಿಸಿದ್ದ ಕೆ.ಟಿ.ಎಂ. ಡ್ಯೂಕ್ ಬೈಕ್ ಕಳವಾಗಿರುತ್ತದೆ. ಅದೇ ರೀತಿ, ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ಬಳಿ ಅ.18 ರಂದು ನಿಲ್ಲಿಸಿದ್ದ ರಾಯಲ್ ಎನ್ ಪೀಲ್ಡ್ ಬುಲೆಟ್ ಮೋಟಾರ್ ಸೈಕಲ್ ಹಾಗೂ ಕುತ್ತಾರ್ ಪಂಡಿತ್ ಹೌಸ್ ಬಳಿ ಅ.21ರಂದು ಯಮಹಾ ಎಫ್.ಜೆಡ್ ಮೋಟಾರ್ ಸೈಕಲ್ ಕಳವಾಗಿತ್ತು. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 4 ಪ್ರಕರಣಗಳು ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿತ್ತು.
ದ್ವಿಚಕ್ರ ವಾಹನಗಳ ಕಳವುಗೈದ ಆರೋಪಿಗಳ ಪತ್ತೆಗಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಅಪರಾಧ ಪತ್ತೆ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು. ಸದರಿ ತಂಡವು ತನಿಖೆ ನಡೆಸಿ, ಮಾಹಿತಿ ಸಂಗ್ರಹಿಸುವ ಮೂಲಕ ಒಟ್ಟು 7 ಜನರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿರುತ್ತದೆ.
ಮೂಡುಶೆಡ್ಡೆ ಗ್ರಾಮದ ಮಹಮ್ಮದ್ ಸಿಯಾಮ್ (19), ಮೊಹಮ್ಮದ್ ರಾಹೀಲ್ (18) ಬೈಕಂಪಾಡಿಯ ತೋಕೂರು ನಿವಾಸಿ ಮುಹಮ್ಮದ್ ನಾಸೀಫ್ @ ನಸೀಫ್ (19) ಮತ್ತು ತಿರುವೈಲು ನಿವಾಸಿ ನಿಖೀಲ್ (18) ಬಂಧಿತರು. ಬಂಧಿತರಲ್ಲಿ 03 ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಬಾಲಕರಾಗಿದ್ದು, ಅವರನ್ನು ಕೌನ್ಸೆಲಿಂಗ್ ಮಾಡಲಾಗಿದೆ. ಆರೋಪಿಗಳಿಂದ ಕಳವು ಮಾಡಲಾಗಿದ್ದ ಎಲ್ಲಾ 06 ದ್ವಿಚಕ್ರ ವಾಹನಗಳನ್ನು, ಮತ್ತು ಕೃತ್ಯಕ್ಕೆ ಬಳಸಿದ 03 ದ್ವಿಚಕ್ರ ವಾಹನಗಳನ್ನು ವಶಪಡಿಸಿದ್ದು ಇವುಗಳ ಒಟ್ಟು ಅಂದಾಜು ಮೌಲ್ಯ-4.50.000/- ರೂ ಆಗಿರುತ್ತದೆ.
ವಿಚಾರಣೆಯಿಂದ, ಆರೋಪಿಗಳು ಇತರ ದುಶ್ಕೃತ್ಯಗಳಾದ ಸರಗಳ್ಳತನ ಮುಂತಾದ ಕೃತ್ಯಗಳನ್ನು ಎಸಗಿ ಅದರ ಲಾಬಾಂಶದಿಂದ ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದರು ಎಂಬುದು ತಿಳಿದುಬಂದಿದೆ. ಬೆಲೆಬಾಳುವ ಮೋಟಾರ್ ಸೈಕಲ್ ಗಳನ್ನು ಗುರಿಯಾಗಿಸಿ, ನಿಲುಗಡೆ ಮಾಡಿದ್ದ ಸ್ಥಳಗಳಿಂದ ಕಳವು ಮಾಡಿ, ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದುದಾಗಿ ತನಿಖೆಯಿಂದ ತಿಳಿದುಬಂದಿರುತ್ತದೆ. ಬಂಧಿತ 4 ಜನ ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಪತ್ತೆ ಕಾರ್ಯದಲ್ಲಿ ಮಂ. ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಘವೇಂದ್ರ ಬೈಂದೂರು ನೇತೃತ್ವದಲ್ಲಿ ಪಿ.ಎಸ್.ಐ ಗಳಾದ ಮಾರುತಿ, ನವೀನ್, ರೇಖಾ.ಹಾಗೂ ಕ್ರೈಂ ಸಿಬ್ಬಂದಿಗಳಾದ ಲಕ್ಷ್ಮಣ ಸಾಲೋಟಗಿ, ಪುಟ್ಟರಾಮ್, ಲತೇಶ್ ನಾಯ್ಕ್,ಸಾಗರ ದೇವಕತ್ತಿ, ಆಂಜನೇಯ ಕೆ.ಎಸ್, ರೇಣುಕಾ ಎಂ ಅವರು ಭಾಗವಹಿಸಿದ್ದು, ಮಂಗಳೂರು ದಕ್ಷಿಣ ಠಾಣಾ ಅಧಿಕಾರಿ ಸಿಬ್ಬಂದಿಯವರು ಪತ್ತೆ ಕಾರ್ಯಕ್ಕೆ ಸಹಕರಿಸಿದ್ದಾರೆ.
24-10-26 05:35 pm
HK News Desk
Parvez dharwad: 40 ದಿನಗಳ ನಿಗೂಢತೆ ಅಂತ್ಯ ; ಡೆತ್...
24-10-26 12:22 pm
ಸ್ಟಿಂಗ್ ಆಪರೇಶನ್ ಹಿಂದಿರುವವರು ಯಾರೆಂಬ ಸತ್ಯ ಗೊತ್...
23-10-26 08:34 pm
ಮಾಧ್ಯಮದ ಮುಖ್ಯಸ್ಥನ ಜೊತೆಗಿದ್ದ ವಿಕ್ಕಿ ಎಂಬ ವ್ಯಕ್ತ...
23-10-26 05:47 pm
ಬ್ಲ್ಯಾಕ್ಮೇಲ್ ಉದ್ದೇಶದಿಂದ ಸ್ಟಿಂಗ್ ಮಾಡಿದ್ದಾರೆ...
23-10-26 03:56 pm
21-10-26 04:21 pm
HK News Desk
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
24-10-26 10:59 pm
HK News Staffer
ಕದ್ರಿಯ 'ಕುಡ್ಪೀಸ್ ಫುಡ್ಸ್' ಬೇಕರಿ ಮಳಿಗೆಗೆ ಆಹಾರ...
24-10-26 10:54 pm
ಸ್ಟಿಂಗ್ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆ...
24-10-26 08:06 pm
ಪೊಳಲಿ ಕ್ಷೇತ್ರದಲ್ಲಿ ₹1.50 ಕೋಟಿ ವೆಚ್ಚದ ಗೋಶಾಲೆ ನ...
24-10-26 01:59 pm
Subbanna Pandit, Folk Academy Award: 45 ವರ್ಷಗ...
24-10-26 12:19 pm
25-10-26 02:49 pm
HK News Staffer
ಕುಂದಾಪುರ ; ಹಾಸಿಗೆ ಹಿಡಿದಿದ್ದ ಅಂಗವಿಕಲ ಮಗಳನ್ನು ಕ...
25-10-26 01:44 pm
ಸಂಪಾಜೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು- ಲಾರಿ...
25-10-26 01:31 pm
ಸಿದ್ದರಾಮಯ್ಯ ಸ್ಟಿಂಗ್ ; ಜಾಲತಾಣದಲ್ಲಿ ವಿಡಿಯೋ ಅಪ್ಲ...
24-10-26 10:21 pm
ಸ್ಟಿಂಗ್ ಆಪರೇಶನ್ ; ಕೇರಳದಲ್ಲಿ ಸಂತ್ರಸ್ತ ಮಹಿಳೆಯ ಹ...
24-10-26 05:17 pm