ಬ್ರೇಕಿಂಗ್ ನ್ಯೂಸ್
27-10-26 08:41 pm HK News Staffer ಕ್ರೈಂ
ಕಾರವಾರ, ಅ.27 : ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬಳಿಯ ತದಡಿ ಬಂದರಿನಲ್ಲಿ ಭೀಕರ ದುರಂತ ಸಂಭವಿಸಿದೆ. ಮೀನುಗಾರಿಕಾ ಬೋಟ್‌ನೊಳಗೆ ಉಸಿರುಗಟ್ಟಿ ಮೂವರು ಮೀನುಗಾರರು ಮೃತಪಟ್ಟಿದ್ದು, ಮತ್ತೊಬ್ಬ ಮೀನುಗಾರನ ಸ್ಥಿತಿ ಗಂಭೀರವಾಗಿದೆ. ಮೀನು ಸಂಗ್ರಹಿಸಿಟ್ಟಿದ್ದ ಸ್ಥಳವನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಮೃತರನ್ನು ಕಾರ್ಮಿಕರಾದ ನೌಶಾದ್ (48), ಅಮೀನ್ (40) ಮತ್ತು ಅಮನ್ (26) ಎಂದು ಗುರುತಿಸಲಾಗಿದೆ. ಅಸ್ವಸ್ಥಗೊಂಡ ಅಬ್ದುಲ್ ಯಾಕುಬ್ ದಾಡಿಯಾ (60) ಅವರನ್ನು ರಕ್ಷಿಸಿ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ಮಾಹಿತಿಯ ಪ್ರಕಾರ, ತದಡಿಯ ಕುಚೈಮಾ ಮೀನುಗಾರಿಕಾ ಬೋಟ್‌ನಲ್ಲಿ ಮೀನುಗಾರರು ಕೆಲಸ ಮಾಡುತ್ತಿದ್ದರು. ಮೀನುಗಾರಿಕೆ ಮುಗಿಸಿ ಬೋಟ್ ಬಂದರಿಗೆ ಮರಳಿತ್ತು. ಬಳಿಕ ಮೀನುಗಳನ್ನು ಇಳಿಸಿ, ಅವುಗಳನ್ನು ಸಂಗ್ರಹಿಸಿಟ್ಟಿದ್ದ ಸ್ಥಳವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ಮೀನುಗಾರರು ತೊಡಗಿದ್ದರು.
ಈ ಸಂದರ್ಭದಲ್ಲಿ ಮೀನುಗಳ ತೀವ್ರ ವಾಸನೆ ಅಥವಾ ಮುಚ್ಚಿದ ಸ್ಥಳದಲ್ಲಿ ಸಂಗ್ರಹವಾಗಿದ್ದ ಅನಿಲಗಳಿಂದ ಉಸಿರಾಟಕ್ಕೆ ತೊಂದರೆಯಾಗಿರುವ ಶಂಕೆ ವ್ಯಕ್ತವಾಗಿದೆ. ಪರಿಣಾಮವಾಗಿ ಮೂವರು ಮೀನುಗಾರರು ಮೃತಪಟ್ಟಿದ್ದು, ಮತ್ತೊಬ್ಬರು ಅಸ್ವಸ್ಥರಾಗಿದ್ದಾರೆ. ಆದರೆ, ಸಾವಿಗೆ ನಿಖರವಾದ ಕಾರಣವೇನು ಎಂಬುದು ಅಧಿಕೃತ ತನಿಖೆಯಿಂದ ದೃಢಪಡಬೇಕಿದೆ.
ಘಟನೆಗೆ ಸಂಬಂಧಿಸಿದಂತೆ ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೀನುಗಾರಿಕೆಗೆ ತೆರಳಿ ಸುರಕ್ಷಿತವಾಗಿ ಮರಳಿದ್ದ ಮೀನುಗಾರರು ಬಂದರಿನಲ್ಲೇ ದುರಂತಕ್ಕೆ ಬಲಿಯಾಗಿರುವುದು ಸ್ಥಳೀಯರಲ್ಲಿ ತೀವ್ರ ದುಃಖ ಮೂಡಿಸಿದೆ.
27-10-26 09:47 pm
HK News Desk
ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು...
27-10-26 01:23 pm
ದೇವೇಗೌಡ್ರ ಕುಟುಂಬವನ್ನು ಮುಗಿಸಲು ಡಿಕೆಶಿಯಿಂದ 600...
26-10-26 11:55 am
Rahul Gandhi, Siddaramaiah: ಸ್ಟಿಂಗ್ ಆಪರೇಶನ್ ;...
26-10-26 11:53 am
ಸ್ಟಿಂಗ್ ಆಪರೇಶನ್ ; ಕಾಂಗ್ರೆಸ್ ನಾಯಕಿ ಕೃಪಾ ಆಳ್ವಗೆ...
24-10-26 05:35 pm
25-10-26 09:40 pm
HK News Staffer
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
27-10-26 09:30 pm
HK News Desk
Soujanya Case: ಸೌಜನ್ಯಾ ಪ್ರಕರಣದ ಮರುತನಿಖೆ ; ರುದ...
27-10-26 08:40 pm
ಮೈಸೂರನ್ನು ಬ್ರಾಂಡ್ ಮಾಡಿದವರು ರಾಜವಂಶಸ್ಥರು, ರಾಜ್ಯ...
27-10-26 03:35 pm
Mangalore Man Missing, Israel: ಉದ್ಯೋಗಕ್ಕಾಗಿ ಇ...
27-10-26 01:53 pm
ಸೌಜನ್ಯ ಪ್ರಕರಣದ ಎಸ್ಐಟಿ ಮುಖ್ಯಸ್ಥರ ಬದಲಾವಣೆಗೆ ಪಟ್...
26-10-26 03:41 pm
27-10-26 09:32 pm
HK News Staffer
ತದಡಿ ಬಂದರಿನಲ್ಲಿ ದುರಂತ ; ಬೋಟ್ ಸ್ವಚ್ಛಗೊಳಿಸುತ್ತ...
27-10-26 08:41 pm
ಮನೆ ಬ್ರೋಕರ್ ವ್ಯಕ್ತಿಯನ್ನು ಅಪಹರಿಸಿ ಬಜಾಲ್ ಬಳಿ ಕೂ...
27-10-26 07:33 pm
ದೇರಳಕಟ್ಟೆ ಕಣಚೂರು ಮೆಡಿಕಲ್ ಕಾಲೇಜಿನ ಜೂನಿಯರ್ ವಿದ್...
27-10-26 05:22 pm
ಸುರತ್ಕಲ್ ಬೀಚ್ ಬಳಿ ಕುಡಿದ ಮತ್ತಿನಲ್ಲಿ ಜಗಳ ; ಕೇಸು...
27-10-26 03:01 pm