ಬ್ರೇಕಿಂಗ್ ನ್ಯೂಸ್
31-10-26 01:16 pm HK News Staffer ಕ್ರೈಂ
ಉಡುಪಿ, ಅ.31: ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಮನೆಯವರು ಯುವಕನ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದರಿಂದ ಮನನೊಂದ ಯುವಕನೊಬ್ಬ ಚಿಕತ್ಸೆ ಪಡೆಯುತ್ತಿದ್ದ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಡುಪಿ ನಗರದಲ್ಲಿ ವಡೆದಿದೆ.
ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದ ಯುವಕ ಪ್ರದೀಪ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಘಟನೆಗೆ ಕಾರಣರಾದ ಯುವತಿ ಹಾಗೂ ಆಕೆಯ ಸಹೋದರರು ಸೇರಿದಂತೆ ಹತ್ತಕ್ಕೂ ಹೆಚ್ಚು ಮಂದಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪ್ರದೀಪ ಕಳೆದ 8 ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಅಕ್ಟೋಬರ್ 27ರ ರಾತ್ರಿ 10 ಗಂಟೆಗೆ ಪ್ರದೀಪ್, ನಾಯರ್ ಕೋಡಿನಲ್ಲಿರುವ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ, ಪ್ರೀತಿಸುತ್ತಿದ್ದ ಯುವತಿಯ ಸಹೋದರರಾದ ಪ್ರಸನ್ನ ಶೆಟ್ಟಿ, ಸುಧೀರ್ ಶೆಟ್ಟಿ, ಶೈಲೇಶ್ ಶೆಟ್ಟಿ, ಸನತ್, ಕೃಷ್ಣ, ಸುಜಯ್ ಹಾಗೂ ಇತರರು ಮೂರು ಕಾರುಗಳಲ್ಲಿ ಬಂದು ಪ್ರದೀಪನನ್ನು ಬಲವಂತವಾಗಿ ಯುವತಿಯ ಮನೆಗೆ ಕರೆದುಕೊಂಡು ಹೋಗಿದ್ದಾರೆ.
ಅಲ್ಲಿ ಪ್ರಸನ್ನ ಶೆಟ್ಟಿ ಬೆತ್ತವನ್ನು ತೆಗೆದು ಪ್ರದೀಪನ ಕಾಲು ಹಾಗೂ ಬೆನ್ನಿಗೆ ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆ ನಡೆಸಿದ್ದಾನೆ. ಜೊತೆಯಲ್ಲಿದ್ದ ಇತರೆ ಆರೋಪಿಗಳು ಮರದ ದೊಣ್ಣೆಗಳಿಂದ ಹೊಡೆದು ಗಾಯಗೊಳಿಸಿದ್ದಾರೆ. ವಿಷಯ ತಿಳಿದು ಪ್ರದೀಪನ ಸ್ನೇಹಿತರು ಯುವತಿಯ ಮನೆಗೆ ತೆರಳಿದ್ದು, ಆರೋಪಿಗಳು ಪ್ರದೀಪನಿಗೆ ಹಲ್ಲೆ ಮಾಡುವುದನ್ನು ನಿಲ್ಲಿಸಿದ್ದಾರೆ. ಬಳಿಕ ತೀವ್ರ ಗಾಯಗೊಂಡಿದ್ದ ಪ್ರದೀಪನನ್ನು ಅಕ್ಟೋಬರ್ 28ರಂದು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅಣ್ಣನ ಬಳಿ ಕಣ್ಣೀರಿಟ್ಟ ಪ್ರದೀಪ, ಯುವತಿ ಹಾಗೂ ಆಕೆಯ ಮನೆಯವರು ತನ್ನ ಮೇಲೆ ನಡೆಸಿದ ಅಮಾನವೀಯ ಹಲ್ಲೆ ಮತ್ತು ಜೀವ ಬೆದರಿಕೆ ಹಾಕಿರುವ ಕುರಿತು ದುಃಖ ಹೇಳಿಕೊಂಡಿದ್ದ. ಸತತ ಮಾನಸಿಕ ಹಿಂಸೆ ಹಾಗೂ ಅವಮಾನದಿಂದ ನೊಂದಿದ್ದ ಪ್ರದೀಪ, ಅಕ್ಟೋಬರ್ 30ರ ಸಂಜೆ ಆಸ್ಪತ್ರೆಯ ಶೌಚಾಲಯದಲ್ಲಿ ನೇಣು ಬಿಗಿದು ಕೊನೆಯುಸಿರೆಳೆದಿದ್ದಾರೆ.
ಪ್ರದೀಪ್ ಸಹೋದರ ನೀಡಿದ ದೂರಿನಂತೆ, ಸಾವಿಗೆ ಪ್ರಚೋದನೆ ನೀಡಿದ್ದಾರೆಂದು ಶ್ರಾವ್ಯ ಶೆಟ್ಟಿ, ಪ್ರಸನ್ನ ಶೆಟ್ಟಿ, ಸುಧೀರ್, ಶೈಲೇಶ್, ಶಶಾಂಕ್, ಕೃಷ್ಣ, ಸುಜಯ್, ಸನತ್, ಹೊರ ರಾಜ್ಯದ ಇಬ್ಬರು ಕಾರ್ಮಿಕರು ಹಾಗೂ ಇತರರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಅಪರಾಧ ಕ್ರಮಾಂಕ 149/2026, ಕಲಂ 108 ಜೊತೆಗೆ 190 BNS ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
30-10-26 08:26 pm
HK News
ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ; ಕೇಂದ್ರ ಸಚಿವ ಕುಮ...
30-10-26 05:15 pm
ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ; ನಂದಿನಿ ಹಾ...
29-10-26 08:21 pm
'ಮೈಸೂರು ಅರಮನೆ ಸರ್ಕಾರಕ್ಕೆ ಸೇರಿದ್ದು' ತನ್ನ ಹೇಳಿಕ...
28-10-26 10:52 pm
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಕ್ಕೆ ಚುನಾವಣೆ ; ನಾ...
27-10-26 09:47 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
30-10-26 12:51 pm
HK News Staffer
ಸೌಜನ್ಯಾ ಪ್ರಕರಣ ತನಿಖೆಯಲ್ಲಿ ಭಾಗಿಯಾಗಿದ್ದ ಎಲ್ಲ ಪೊ...
30-10-26 12:19 pm
UPSCಯಲ್ಲಿ 42ನೇ ರ್ಯಾಂಕ್ನಿಂದ ರಫೇಲ್ ಪೈಲಟ್ ವರೆ...
30-10-26 12:16 pm
ಕುಸುಮಾವತಿಯೇ, ಇಂದಿರಾವತಿಯೇ ? ಸರ್ಕಾರಿ ಜಮೀನು ಅಕ್ರ...
29-10-26 08:19 pm
ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆ ; ಪಿಎಸ್ಐ ಯೋಗೀಶ್...
29-10-26 02:12 pm
31-10-26 01:16 pm
HK News Staffer
ಕಾರವಾರದ ಮುದಗಾ ಬಂದರಿನಲ್ಲಿ ಮತ್ತೆ ವಿಷಾನಿಲ ದುರಂತ:...
31-10-26 01:05 pm
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್ ; ಕಾಂಗ್ರೆ...
30-10-26 11:01 pm
Cyprian Pinto, Mangalore: 50ಕ್ಕೂ ಹೆಚ್ಚು ಬಾಲಕರ...
30-10-26 09:57 pm
ಆನ್ಲೈನಲ್ಲಿ ಕೇರಳ ಲಾಟರಿ ಗೆದ್ದ ಮಂಗಳೂರಿನ ವ್ಯಕ್ತಿಗ...
30-10-26 05:16 pm