15 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ಸಮೇತ ಖತರ್ನಾಕ್ ಲೇಡಿ ಪೊಲೀಸರ ಬಲೆಗೆ ; ಯುವಕರು ಮತ್ತು ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಮಹಿಳೆ ಅರೆಸ್ಟ್

02-11-26 09:48 pm       HK News Staffer   ಕ್ರೈಂ

ಮಂಗಳೂರು ನಗರದಾದ್ಯಂತ ಯುವಕರು ಮತ್ತು ವಿದ್ಯಾರ್ಥಿಗಳಿಗೆ ಎಂಡಿಎಂಎ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಖತರ್ನಾಕ್ ಲೇಡಿಯೋರ್ವಳನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬರೋಬ್ಬರಿ ಹದಿನೈದು ಲಕ್ಷ ಮೌಲ್ಯದ ಡ್ರಗ್ಸ್ ಸಮೇತ ಬಂಧಿಸಿದ್ದಾರೆ.

ಮಂಗಳೂರು, ನ.2: ಮಂಗಳೂರು ನಗರದಾದ್ಯಂತ ಯುವಕರು ಮತ್ತು ವಿದ್ಯಾರ್ಥಿಗಳಿಗೆ ಎಂಡಿಎಂಎ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಖತರ್ನಾಕ್ ಲೇಡಿಯೋರ್ವಳನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬರೋಬ್ಬರಿ ಹದಿನೈದು ಲಕ್ಷ ಮೌಲ್ಯದ ಡ್ರಗ್ಸ್ ಸಮೇತ ಬಂಧಿಸಿದ್ದಾರೆ.

ಮೂಲತಃ ಬೆಳ್ತಂಗಡಿ ತಾಲೂಕು, ಲಾಯಿಲ ನಿವಾಸಿ ಪ್ರಸ್ತುತ ಪಂಪ್ವೆಲ್ ಉಜ್ಜೋಡಿಯ ರಾಧಾ ರೆಸಿಡೆನ್ಸಿ ವಸತಿ ಸಂಕೀರ್ಣದಲ್ಲಿ ವಾಸವಿರುವ ನಸೀಮಾ(42) ಬಂಧಿತ ಆರೋಪಿ.

ಅಕ್ಟೋಬರ್ 1 ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಮಾದಕ ವಸ್ತು ಸೇವನೆ ಪ್ರಕರಣದಲ್ಲಿ ಆರೋಪಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ನಸೀಮಾಳನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಆಕೆ ವಾಸ್ತವ್ಯವಿದ್ದ ಉಜ್ಜೋಡಿಯ ಅಪಾರ್ಟ್ ಮೆಂಟ್ಗೆ ದಾಳಿ ನಡೆಸಿ ಸುಮಾರು 15.30 ಲಕ್ಷ ಮೌಲ್ಯದ 153 ಗ್ರಾಂ ಎಮ್ ಡಿಎಮ್ಎ ಸಮೇತ ಬಂಧಿಸಿದ್ದಾರೆ. ಬಂಧಿತ ಆರೋಪಿ ನಸೀಮಾ ಮಂಗಳೂರು ನಗರದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದುದಾಗಿ ವಿಚಾರಣೆ ವೇಳೆ ತಿಳಿದುಬಂದಿದೆ. 

ಡ್ರಗ್ಸ್ ಜಾಲದಲ್ಲಿ ಮತ್ತಷ್ಟು ಆರೋಪಿಗಳು ಭಾಗಿಯಾಗಿದ್ದು,ಅವರ ಬಂಧನಕ್ಕೆ ಬಲೆ ಬೀಸಲಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣಾ ಅಧಿಕಾರಿ  ಮತ್ತು ಸಿಬ್ಬಂದಿಯವರ ತಂಡವು ಆರೋಪಿ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದೆ.