ಬ್ರೇಕಿಂಗ್ ನ್ಯೂಸ್
18-11-26 12:36 pm HK News Staffer ಕ್ರೈಂ
ಮಂಗಳೂರು, ನ.18: ನಗರದ ಪಡೀಲ್ ಕಣ್ಣೂರು ಎಂಬಲ್ಲಿರುವ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯ ಉದ್ಯೋಗಿಯನ್ನು ಅಡ್ಡಗಟ್ಟಿ ಅವರ ಕೈಯಲ್ಲಿದ್ದ ಎಂಟು ಲಕ್ಷ ರೂಪಾಯಿ ನಗದನ್ನು ದರೋಡೆ ಮಾಡಿದ ಪ್ರಕರಣದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಹೋಲ್ ಸೇಲ್ ಕಂಪನಿಯ ಉದ್ಯೋಗಿ ಮಯ್ಯದಿ (40) ಎಂಬವರು, ಸದ್ರಿ ಸಂಸ್ಥೆಯ ವ್ಯವಹಾರದ ಹಣವನ್ನು ವಿವಿಧ ಅಂಗಡಿಗಳಿಂದ ಸಂಗ್ರಹಿಸಿ ಆಗಸ್ಟ್ 20ರಂದು ಬೈಕ್ ನಲ್ಲಿ ಬಂಟ್ವಾಳ ಕಕ್ಕೆಪದವಿನಿಂದ ಪಾಣೆಮಂಗಳೂರು ಕಡೆಗೆ ಬರುತ್ತಿದ್ದಾಗ, ಬಂಟ್ವಾಳ ಮಣಿನಾಲ್ಕೂರು ಮುಲ್ಕಾಜೆ ಮಾಡ ಎಂಬಲ್ಲಿ ನಾಲ್ಕು ಜನ ಅಪರಿಚಿತರು ಅಡ್ಡಗಟ್ಟಿ ತಲವಾರು ತೋರಿಸಿ, ಬೆದರಿಸಿ ಅವರ ಬಳಿಯಿದ್ದ ರೂ. 8,35,000/- ನಗದು ಹಣವನ್ನು ದರೋಡೆಗೈದು ಪರಾರಿಯಾಗಿದ್ದರು.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ . ಕ್ರ 115/2026 ಕಲಂ:309(6) BNS ಮತ್ತು ಕಲಂ: 25(1)(A) Arms Act ನಂತೆ ಪ್ರಕರಣ ದಾಖಲಾಗಿರುತ್ತದೆ. ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಗಳ ಪೈಕಿ ಮಂಗಳೂರು ಶಕ್ತಿನಗರ ನಿವಾಸಿ ಪ್ರವಿತ್ ಶೆಟ್ಟಿ, ಉಳ್ಳಾಲ ಕೋಡಿ ನಿವಾಸಿ ಉಮ್ಮರ್ ಫಾರೂಕ್ ಮತ್ತು ಉಳ್ಳಾಲ ಹರೇಕಳ ನಿವಾಸಿ ಶಾಕೀರ್ ಎಂಬವರನ್ನು ನವೆಂಬರ್ 11ರಂದು ಬಂಧಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕರಾದ ಸೀತಾರಾಮ ಪಿ. ಅವರು ಮತ್ತು ತಂಡ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮೂವರು ಆರೋಪಿಗಳನ್ನು ನ.16ರ ವರೆಗೆ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿ ಅವರಿಂದ ರೂ. 2,01,000/-ನಗದನ್ನು ಸ್ವಾಧೀನಪಡಿಸಿದ್ದು ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿತ ಪ್ರವಿತ್ ರಾಜ್ ಶೆಟ್ಟಿ ಎಂಬಾತನ ಗುರುತು ಪತ್ತೆ ಪರೇಡ್ ನಡೆಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
18-11-26 07:26 pm
HK News Staffer
ರೇಸ್ ಕೋರ್ಸ್ ವ್ಯಾಪ್ತಿಯ 79 ಎಕರೆ ಸರ್ಕಾರದ ವಶಕ್ಕೆ...
18-11-26 05:38 pm
ಕೆಪಿಎಸ್ಸಿ ಅಕ್ರಮ ನೇಮಕಾತಿ ಹಗರಣ ; ಆಯೋಗದ ಅಧ್ಯಕ್ಷ...
17-11-26 12:09 pm
ಆಟವಾಡುತ್ತಿದ್ದ ವೇಳೆ ದುರಂತ ; ಬಿಸಿ ಕೆಮಿಕಲ್ ಬಕೆಟ್...
14-11-26 09:24 pm
'ಕಾಸ್ಮೋಸ್ ಮೈಸೂರು' ದೇಶದ ಮೊದಲ ಎಲ್ಇಡಿ ಡೋಮ್ ತಾರಾಲ...
13-11-26 10:13 pm
16-11-26 10:56 pm
Mangaluru Staffer
ಝಾಕಿರ್ ನಾಯ್ಕ್ 'ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್' ಮೇ...
14-11-26 10:00 am
ಚೀನಾ ಗೂಢಚಾರಿಣಿ ಬಲೆಗೆ ಎನ್ವಿಡಿಯಾ ಸಿಇಒ? ವಿವಾಹೇತ...
09-11-26 04:45 pm
ಯುದ್ಧ ನಿಲ್ಲಿಸಿ ಸಂಧಾನಕ್ಕೆ ಬನ್ನಿ.. ಇಲ್ಲದಿದ್ದರೆ...
09-11-26 11:51 am
ಇಸ್ರೇಲ್ ಅಧಿಪತ್ಯ ಪಡೆಯಲು ನೆತನ್ಯಾಹು ಸೋಲು ; ಹೊಸ ಸ...
29-10-26 09:28 pm
18-11-26 07:27 pm
HK News Staffer
Bolas Factory Raid, Mangalore: ಗ್ರಾಹಕರನ್ನು ದಾ...
18-11-26 01:18 pm
Ideal Icecream Raid, Mangalore: ಕೊಲ್ಯ ಐಡಿಯಲ್...
17-11-26 08:15 pm
ಸೌಜನ್ಯಾ ಪ್ರಕರಣ ; ಮೂವರು ತಜ್ಞ ವೈದ್ಯರ ಕಮಿಟಿ ರಚನೆ...
17-11-26 06:42 pm
ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ ; ರೆಕಾರ್ಡ್ ಮಾಡಿದ್ದ...
17-11-26 03:15 pm
18-11-26 07:20 pm
HK News Staffer
ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ...
18-11-26 12:46 pm
ಬಂಟ್ವಾಳದಲ್ಲಿ ವ್ಯಾಪಾರಿ ಅಡ್ಡಗಟ್ಟಿ ಎಂಟು ಲಕ್ಷ ದರೋ...
18-11-26 12:36 pm
ಕೇರಳದಲ್ಲಿ ಟ್ರಾಫಿಕ್ ಉಲ್ಲಂಘನೆ ದಂಡ ; ಇ-ಚಲನ್ ಏಪ್...
16-11-26 09:56 pm
ಮೊಟ್ಟೆ ಸಾಗಾಟ ನೆಪದಲ್ಲಿ ಕೇರಳಕ್ಕೆ ಜಾನುವಾರು ಸಾಗಣೆ...
16-11-26 04:31 pm