ಬ್ರೇಕಿಂಗ್ ನ್ಯೂಸ್
17-01-21 01:39 pm Headline Karnataka News Network ಕ್ರೈಂ
ಭೋಪಾಲ್, ಜ.17 : 13 ವರ್ಷದ ಬಾಲಕಿಯನ್ನು ಅಪಹರಿಸಿ, ಒಂಬತ್ತು ಮಂದಿ ಸೇರಿ ನಿರಂತರ ಐದು ದಿನಗಳ ಕಾಲ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಸಮ್ಮಾನ್ ಕಾರ್ಯಕ್ರಮ ನಡೆಸುತ್ತಿರುವ ಸಂದರ್ಭದಲ್ಲೇ ಅಮಾನವೀಯ ಕೃತ್ಯ ನಡೆದಿದ್ದು ಶಿವರಾಜ್ ಸಿಂಗ್ ಚೌಹಾಣ್ ಸರಕಾರಕ್ಕೆ ಮುಜುಗರ ಸೃಷ್ಟಿಸಿದೆ.
13ರ ಬಾಲಕಿಯನ್ನು ಆಕೆಯ ಪರಿಚಿತ ಯುವಕನೊಬ್ಬ ಜ.4ರಂದು ಅಪಹರಿಸಿದ್ದು ಎರಡು ದಿನಗಳ ಕಾಲ ಕೂಡಿಹಾಕಿ ಇತರ ಆರು ಮಂದಿ ಸ್ನೇಹಿತರ ಜೊತೆಗೂಡಿ ಅತ್ಯಾಚಾರ ನಡೆಸಿದ್ದ. ಬಳಿಕ ಜನವರಿ 5ರಂದು ಬಾಲಕಿಯನ್ನು ಬಿಡುಗಡೆ ಮಾಡಿದ್ದು ಘಟನೆ ಬಗ್ಗೆ ಹೊರಗೆ ತಿಳಿಸಿದರೆ ಕೊಲ್ಲುವುದಾಗಿ ಗುಂಪು ಬೆದರಿಕೆ ಹಾಕಿತ್ತು. ಹಾಗಾಗಿ ಬಾಲಕಿ ಯಾರಿಗೂ ಹೇಳಿರಲಿಲ್ಲ.
ಆರು ದಿನಗಳ ಬಳಿಕ ಜ.11ರಂದು ಬಾಲಕಿಯನ್ನ ಮತ್ತೆ ಅದೇ ತಂಡ ಅಪಹರಿಸಿದ್ದು, ಎರಡನೇ ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಆಕೆಯನ್ನು ರಾತ್ರಿ ವೇಳೆ ರಸ್ತೆಯಲ್ಲಿ ಬಿಟ್ಟು ಹೋಗಿದ್ದರು. ಈ ವೇಳೆ, ಮತ್ತೆ ಮೂವರು ಟ್ರಕ್ ಚಾಲಕರು ಸೇರಿ ಅತ್ಯಾಚಾರ ನಡೆಸಿದ್ದಾರೆ. ಕೊನೆಗೆ, ಕಾಮುಕರ ಕೈಯಿಂದ ಬಚಾವಾಗಿ ಬಂದ ಬಾಲಕಿ ಮನೆಮಂದಿಗೆ ತಿಳಿಸಿದ್ದು ಪೊಲೀಸ್ ದೂರು ದಾಖಲಾಗಿದೆ. ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
In a horrifying incident coming to light from Umaria in Madhya Pradesh, nine men kidnapped and gang-raped a 13-year-old girl within a matter of days.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm