ಬ್ರೇಕಿಂಗ್ ನ್ಯೂಸ್
19-01-21 11:13 am Mangalore Correspondent ಕ್ರೈಂ
ಬೆಳ್ತಂಗಡಿ, ಜ.19: ಮಗನೇ ತಂದೆಯನ್ನು ಮರದ ಸಲಾಕೆಯಿಂದ ಬಡಿದು ಹತ್ಯೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಡು ಮುಂಡ್ಯೊಟ್ಟು ಎಂಬಲ್ಲಿ ನಡೆದಿದೆ.
ಶ್ರೀಧರ ಪೂಜಾರಿ(55) ಹತ್ಯೆಯಾದ ವ್ಯಕ್ತಿಯಾಗಿದ್ದು ಆರೋಪಿ ಮಗ ಹರೀಶ್ (27) ನನ್ನು ಪೊಲೀಸರು ಬಂಧಿಸಿದ್ದಾರೆ. ಮಗ ಹರೀಶ್ ಬೆಂಗಳೂರಿನಲ್ಲಿ ಕೆಲಸಕ್ಕಿದ್ದು ಅಲ್ಲಿ ಬೇರೆ ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಇತ್ತೀಚೆಗೆ ತನ್ನ ಮನೆಗೆ ಬಂದಿದ್ದ ಹರೀಶನ ಮದುವೆ ವಿಚಾರದಲ್ಲಿ ತಂದೆಯೊಂದಿಗೆ ಜಗಳ ನಡೆದಿತ್ತು. ಬೇರೆ ಜಾತಿಯ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ತಂದೆ ಆಕ್ಷೇಪಿಸಿದ್ದಲ್ಲದೆ ತನ್ನ ಮನೆಗೆ ಆಕೆಯನ್ನು ಕರೆತರದಂತೆ ಸೂಚಿಸಿದ್ದರು. ಈ ವಿಚಾರದಲ್ಲಿ ಹಲವು ಸಮಯದಿಂದ ಇಬ್ಬರ ನಡುವೆ ಜಟಾಪಟಿ ನಡೆಯುತ್ತಿತ್ತು.
ಸೋಮವಾರ ಮಧ್ಯಾಹ್ನ ಇದೇ ವಿಚಾರದಲ್ಲಿ ಮನೆಯಲ್ಲಿ ಜಗಳ ನಡೆದಿತ್ತು. ಸಂಜೆ 6.30ರ ವೇಳೆಗೆ ತನ್ನ ಸಹೋದರನ ಮನೆಗೆ ತೆರಳಿದ್ದ ಶ್ರೀಧರ ಪೂಜಾರಿ ಅಲ್ಲಿ ಮಗನನ್ನು ಬೈಯುತ್ತಿದ್ದರು. ಕುಡಿದ ಮತ್ತಿನಲ್ಲಿದ್ದ ಹರೀಶ ಅಲ್ಲಿಗೆ ತೆರಳಿ, ಕೈಗೆ ಸಿಕ್ಕಿದ ಮರದ ಸಲಾಕೆಯಿಂದ ತಂದೆಯ ತಲೆಗೆ ಹೊಡೆದಿದ್ದಾನೆ.
ತೀವ್ರ ರಕ್ತಸ್ರಾವಕ್ಕೊಳಗಾದ ಶ್ರೀಧರ ಪೂಜಾರಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಒಯ್ದಿದ್ದು ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಆರೋಪಿ ಹರೀಶನನ್ನು ಬಂಧಿಸಿದ್ದಾರೆ.
Son savagely beat his father to death using Hammer in Belthangady. It is learnt that he was angry at his father's refusal to accept his wife as daughter-in-law.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm