ಬ್ರೇಕಿಂಗ್ ನ್ಯೂಸ್
22-01-21 11:56 am Udupi Correspondent ಕ್ರೈಂ
ಕಾರ್ಕಳ, ಜ. 22: ಕಾಲೇಜು ಯುವತಿಯನ್ನು ಕಾರಿನಲ್ಲಿ ಕರೆದೊಯ್ದು ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಪ್ಪಿನಂಗಡಿ ನಿವಾಸಿಯಾದ ಪ್ರಾಣೇಶ್ ಎಂಬಾತ ಆರೋಪಿ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ಕಾಲೇಜಿಗೆ ತೆರಳೆಂದು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಆಕೆಯ ದೊಡ್ಡಪ್ಪನ ಪರಿಚಯದ ಪ್ರಾಣೇಶ್, ಅದೇ ಮಾರ್ಗದಲ್ಲಿ ಕಾರಿನಲ್ಲಿ ಬಂದಿದ್ದು, ಡ್ರಾಪ್ ಕೊಡುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾನೆ. ಆಕೆ ಇಳಿಯಬೇಕಾದ ಸ್ಥಳ ಬಂದರೂ ಕಾರನ್ನು ನಿಲ್ಲಿಸದೆ ಉಪ್ಪಿನಂಗಡಿ ಕಡೆಗೆ ಕಾರನ್ನು ಚಲಾಯಿಸಿದ್ದು ಬಳಿಕ ಕಾರಿನಲ್ಲೇ ಅಮಲು ಬರುವ ಜ್ಯೂಸ್ ನೀಡಿ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಅತ್ಯಾಚಾರದ ವಿಡಿಯೋ ಚಿತ್ರೀಕರಿಸಿ ಘಟನೆ ಕುರಿತು ಹೊರಗಡೆ ಹೇಳಿದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆನಂತರ ಜನವರಿ 12 ರಂದು ಯುವತಿ ಕಾರ್ಕಳಕ್ಕೆ ಕಂಪ್ಯೂಟರ್ ಕ್ಲಾಸಿಗೆ ಬಂದಿದ್ದ ವೇಳೆ ಬೈಲೂರಿಗೆ ಬರುವಂತೆ ಬೆದರಿಸಿದ್ದಾನೆ. ಹೆದರಿಕೆಯಿಂದ ಬೈಲೂರಿಗೆ ಹೋಗಿದ್ದು ಅಲ್ಲಿಗೆ ಬಂದ ಪ್ರಾಣೇಶ್ ಆಕೆಯನ್ನು ಮೋಟಾರು ಸೈಕಲಿನಲ್ಲಿ ಕುಳ್ಳಿರಿಸಿಕೊಂಡು ಗುಡ್ಡೆಯಂಗಡಿ ಬಳಿ ಕರೆದೊಯ್ದು ಮತ್ತೊಮ್ಮೆ ಅತ್ಯಾಚಾರ ನಡೆಸಿರುತ್ತಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ದೂರನ್ನು ಸ್ವೀಕರಿಸಿರುವ ಕಾರ್ಕಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A rape case has been registered at Karkala Police Station where the girl was taken in car drugged and raped and also threatened about filing a police complaint.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm