ಬ್ರೇಕಿಂಗ್ ನ್ಯೂಸ್
26-01-21 01:29 pm Bangalore Correspondent ಕ್ರೈಂ
ಬೆಂಗಳೂರು, ಜ.26: ಕೆಪಿಎಸ್ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಪ್ರಕರಣದಲ್ಲಿ ರೂವಾರಿಯಾಗಿದ್ದ ಸ್ಟೆನೋಗ್ರಾಫರ್ ಸನಾ ಬೇಡಿ ಎಂಬ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ, ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ 16ಕ್ಕೇರಿದೆ.
ಕೆಲ ವರ್ಷಗಳಿಂದ ಕೆಪಿಎಸ್ಸಿ ಪರೀಕ್ಷಾ ವಿಭಾಗದಲ್ಲಿ ಸ್ಟೆನೋಗ್ರಾಫರ್ ಆಗಿದ್ದ ಸನಾ ಬೇಡಿ, ಜ.24ರಂದು ಭಾನುವಾರ ನಡೆಯಬೇಕಿದ್ದ ಪ್ರಶ್ನೆ ಪತ್ರಿಕೆಯನ್ನು ಟೈಪ್ ಮಾಡಿದ್ದಳು. ಅಲ್ಲದೆ, ಅದನ್ನು ಪ್ರಮುಖ ಆರೋಪಿ ರಮೇಶ್ ಅಲಿಯಾಸ್ ರಾಮಪ್ಪ ಹರೇಕಲ್ ಗೆ ಪೆನ್ ಡ್ರೈವ್ ಮೂಲಕ ಕೊಟ್ಟಿದ್ದಳು. ರಮೇಶ್ ಹಣದ ಆಮಿಷಕ್ಕೊಳಗಾಗಿ ತನ್ನ ಪರಿಚಿತ ಚಂದ್ರು ಮೂಲಕ ಪ್ರಶ್ನೆ ಪತ್ರಿಕೆಯನ್ನು ಮಾರಾಟ ಮಾಡಿದ್ದ ಎನ್ನುವ ಅಂಶ ವಿಚಾರಣೆಯಲ್ಲಿ ಬಯಲಾಗಿದೆ.
ಕೆಪಿಎಸ್ಸಿ ವಿಭಾಗದಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ ರಮೇಶ್, ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಸನಾ ಬೇಡಿ ಟೈಪ್ ಮಾಡುವ ಬಗ್ಗೆ ತಿಳಿದಿತ್ತು. ಅದಕ್ಕಾಗಿ ಸನಾ ಬೇಡಿಯನ್ನು ಕಾಡತೊಡಗಿದ್ದ ರಮೇಶ್, ಈ ಬಾರಿ ಎಫ್ ಡಿಎ ಪರೀಕ್ಷೆ ಬರೆದು ಪಾಸಾಗಬೇಕು ಎಂದು ನಾಟಕವಾಡಿದ್ದ. ಅಲ್ಲದೆ, ಪ್ರಶ್ನೆ ಪತ್ರಿಕೆಯ ಪ್ರತಿ ನೀಡುವಂತೆ ಪೀಡಿಸಿದ್ದಾನೆ. ಬಳಿಕ ಸನಾ ಬೇಡಿ ತನ್ನಲ್ಲಿ ಕಾಪಿ ಮಾಡಿ ಇಟ್ಟುಕೊಂಡಿದ್ದ ಪ್ರಶ್ನೆ ಪತ್ರಿಕೆಯ ಪ್ರತಿಯನ್ನು ಪೆನ್ ಡ್ರೈವ್ ನಲ್ಲಿ ಹಾಕಿ ಕೊಟ್ಟಿದ್ದಳು. ಅದಕ್ಕಾಗಿ ಎಷ್ಟು ಹಣ ಪಡೆದಿದ್ದಾಳೆ ಎನ್ನೋದ್ರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ರಮೇಶ್ ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಎಲ್ಲವನ್ನೂ ಪೊಲೀಸರಲ್ಲಿ ಬಾಯಿ ಬಿಟ್ಟಿದ್ದಾನೆ.
ಇದೇ ವೇಳೆ, ಪ್ರಶ್ನೆಪತ್ರಿಕೆಯನ್ನು ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಅಭ್ಯರ್ಥಿಗಳಿಂದ ಡೀಲ್ ಕುದುರಿಸಿದ್ದ ಚಂದ್ರ ಮತ್ತು ರಾಜಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ ಈವರೆಗೆ 82 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಹಣ ಕೊಟ್ಟು ಪ್ರಶ್ನೆ ಪತ್ರಿಕೆ ಖರೀದಿಸಿದ್ದ 10ಕ್ಕೂ ಹೆಚ್ಚು ಅಭ್ಯರ್ಥಿಗಳನ್ನೂ ಬಂಧಿಸಿದ್ದಾರೆ.
Continuing its investigations into the FDA question paper leak case, the Central Crime Branch (CCB) today arrested Sana Bedi, stenographer in the Karnataka Public Service Commission (KPSC) controller of exam division, who allegedly played a key role in getting the papers leaked.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm