ಬ್ರೇಕಿಂಗ್ ನ್ಯೂಸ್
27-01-21 12:01 pm Udupi Correspondent ಕ್ರೈಂ
ಉಡುಪಿ, ಜ.27 : ಬೈಕಿನಲ್ಲಿ ತೆರಳುತ್ತಿದ್ದ ತಾಯಿ - ಮಗನನ್ನು ಕೋಟ ಠಾಣೆ ಪೊಲೀಸರು ತಪಾಸಣೆ ನೆಪದಲ್ಲಿ ಥಳಿಸಿ ಅಮಾನವೀಯ ನಡೆ ತೋರಿದ ಘಟನೆ ಕೋಟದಲ್ಲಿ ನಡೆದಿದೆ.
ಪ್ರಶಾಂತ್ ಎಂಬವರು, ಕೋಟ ಮೂರುಕೈ ರಸ್ತೆಯಲ್ಲಿ ಸಾಯ್ಬರ ಕಟ್ಟೆಗೆಂದು ತಾಯಿ ಶಾರದಾ ಅವರನ್ನು ಬೈಕ್ ನಲ್ಲಿ ಕುಳ್ಳಿರಿಸಿಕೊಂಡು ತೆರಳುತ್ತಿದ್ದರು. ಈ ಸಂದರ್ಭ ಚೆಕ್ಕಿಂಗ್ ನೆಪದಲ್ಲಿ ಕರ್ತವ್ಯದಲ್ಲಿದ್ದ ಕೋಟ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಂತೋಷ್ ಬಿ.ಪಿ. ಮತ್ತು ಸ್ಟೇಶನ್ ಎಸ್ ಬಿ ರಾಜು ಅವರು ಪ್ರಶಾಂತ್ ಬೈಕ್ ತಡೆದು ದಾಖಲೆ ಕೇಳಿದ್ದಾರೆ. ಒರಿಜಿನಲ್ ದಾಖಲೆ ಮನೆಯಲ್ಲಿದ್ದ ಕಾರಣ ವಾಹನದ ದಾಖಲೆಯ ಝೆರಾಕ್ಸ್ ಅನ್ನು ಪ್ರಶಾಂತ್ ಪೊಲೀಸರಿಗೆ ನೀಡಿದ್ದಾರೆ. ಇದರಿಂದ ಅಸಮಾಧಾನಗೊಂಡ ಪೊಲೀಸರು ಪ್ರಶಾಂತ್ ಗೆ ಅವಾಚ್ಯ ಮಾತುಗಳಿಂದ ನಿಂದಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ನೆಪಕ್ಕೆ ಪ್ರಶಾಂತ್ ಮೇಲೆ ಕೋಟ ಎಸ್ಸೈ ಕೈ ಮಾಡಿದ್ದು ಇಬ್ಬರು ಪೊಲೀಸರು ಸೇರಿ ಹಲ್ಲೆಗೈದು ಥಳಿಸಿದ್ದಾರೆ. ಇದನ್ನು ತಡೆಯಲು ಬಂದ ಪ್ರಶಾಂತ್ ತಾಯಿ ಶಾರದಾ ಅವರಿಗೂ ಬೆತ್ತದಿಂದ ಪೆಟ್ಟು ನೀಡಿದ್ದು ಮಗನನ್ನು ಅರೆಸ್ಟ್ ಮಾಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ದಾಖಲಿಸಿದ್ದಾರೆ. ಇತ್ತ ಪೊಲೀಸ್ ರಿಂದ ಥಳಿಸಿಕೊಂಡ ಶಾರದಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ , ಇದೇ ವಿಚಾರವಾಗಿ ತಾಯಿ ಶಾರದಾ ಮಾನವ ಹಕ್ಕುಗಳ ಆಯೋಗಕ್ಕೆ ಮೊರೆ ಹೋಗಿದ್ದಾರೆ. ಥಳಿಸುವ, ಹಲ್ಲೆ ಮಾಡುವ ಅಗತ್ಯ ಇಲ್ಲದಿದ್ದರೂ ನನ್ನ ಮತ್ತು ಮಗನ ಮೇಲೆ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕೇಸು ದಾಖಲಿಸಬೇಕು, ಕರ್ತವ್ಯದಿಂದ ಅಮಾನತು ಮಾಡಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರ ಕೃತ್ಯ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
Son and Mother have been brutally assaulted by Kota Police overheated arguments in the matter of Vehicle Inspection in Udupi.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm