ಪೆರ್ನೆಯಲ್ಲಿ ಅಕ್ರಮ ಮರಳುಗಾರಿಕೆ ; ಗಣಿ ಅಧಿಕಾರಿಗಳ ದಾಳಿ

04-02-21 11:22 am       Mangalore Correspondent   ಕ್ರೈಂ

ಪೆರ್ನೆ ಸಮೀಪ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಜಾಗಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿದೆ. 

ಉಪ್ಪಿನಂಗಡಿ, ಫೆ.4 : ಇಲ್ಲಿನ ಪೆರ್ನೆ ಸಮೀಪ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಜಾಗಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ಮುಟ್ಟುಗೋಲು ಹಾಕಿದೆ. 

ಪೆರ್ನೆ ಗ್ರಾಮದ ಕಳೆಂಜ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂವಿಜ್ಞಾನಿ ಮಹದೇಶ್ವರ ಮತ್ತು ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಕ್ರಮವಾಗಿ ದೋಣಿಯ ಮೂಲಕ ಮರಳು ಸಂಗ್ರಹಿಸಿ ನದಿ ದಡದಲ್ಲಿ ರಾಶಿ ಹಾಕಿರುವುದನ್ನು ಪತ್ತೆ ಹಚ್ಚಿ ಮರಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಅಲ್ಲದೆ, ನದಿ ದಡದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ ಅನ್ನು ತೆರವುಗೊಳಿಸಿದೆ.

ಪೆರ್ನೆ ಗ್ರಾಮದ ಬಿಳಿಯೂರಿನಲ್ಲಿ ಮರಳು ತೆಗೆಯಲು ಪರವಾನಿಗೆ ನೀಡಲಾಗಿತ್ತು. ಆದರೆ ಪೆರ್ನೆಯಲ್ಲಿ ಮರಳು ತೆಗೆಯಲು ಪರವಾನಿಗೆ ನೀಡಿರಲಿಲ್ಲ. ಆದರೆ ಅಲ್ಲಿ ಹನೀಫ್ ಎಂಬಾತ ಅಕ್ರಮವಾಗಿ ಮರಳು ತೆಗೆದು ದಾಸ್ತಾನು ಇರಿಸಿದ್ದು, ಕಂಡು ಬಂದಿದೆ. ಅಲ್ಲಿ ಮಹಜರು ಮಾಡಿ ಮರಳು ಮುಟ್ಟುಗೋಲು ಮಾಡಿ, ಶೆಡ್ ತೆರವು ಮಾಡಿದ್ದೇವೆ. ಈ ಬಗ್ಗೆ ಸೂಕ್ತ ಕ್ರಮಕ್ಕಾಗಿ ಹಿರಿಯ ಅಧಿಕಾರಿಗೆ ವರದಿ ಸಲ್ಲಿಸಲಾಗುವುದು ಎಂದು ಭೂವಿಜ್ಞಾನಿ ಮಹದೇಶ್ವರ  ತಿಳಿಸಿದ್ದಾರೆ.

Mines and Geology conduct Raid on Illegal sand mining in Perne River at Uppinangady.