ಬ್ರೇಕಿಂಗ್ ನ್ಯೂಸ್
07-02-21 09:37 am Headline Karnataka News Network ಕ್ರೈಂ
ಚಿಕ್ಕಮಗಳೂರು, ಫೆಬ್ರವರಿ 7: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲೆ 17 ಜನರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಸಿದ್ದರಾಮಯ್ಯ ಬಿ.ಎಂ ಅವರನ್ನು ಅಮಾನತು ಮಾಡಲಾಗಿದೆ.
ಶೃಂಗೇರಿ ಸರ್ಕಲ್ ಇನ್ಸ್‌ಪೆಕ್ಟರ್ ಸಿದ್ದರಾಮಯ್ಯ ಬಿ.ಎಂ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ಎಎಸ್ಪಿ ಶೃತಿ ನೇತೃತ್ವದಲ್ಲಿ ತನಿಖೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಅತ್ಯಾಚಾರ ಪ್ರಕರಣದ ತನಿಖಾಧಿಕಾರಿ ಸಿದ್ದರಾಮಯ್ಯ ಬಿ.ಎಂ ಅವರು ಶೃಂಗೇರಿ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಘಟನೆ ನಡೆದು ಎರಡು ದಿನದ ಬಳಿಕ ದೂರು ದಾಖಲಿಸಿದ್ದರಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಅಪ್ರಾಪ್ತ ಮೇಲೆ ಅವಳ ಚಿಕ್ಕಮ್ಮನ ಸಹಕಾರದಿಂದ 17 ಜನರು 5 ತಿಂಗಳುಗಳ ಕಾಲ ಅತ್ಯಾಚಾರ ಮಾಡಿದ್ದರು. ಪ್ರಕರಣದ ಕುರಿತು ಈಗಾಗಲೇ 8 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ತನಿಖಾಧಿಕಾರಿ ಸಿದ್ದರಾಮಯ್ಯ ಬಿ.ಎಂ ಅವರ ಮೇಲೆ ಒತ್ತಡಗಳು ಬಂದಿದ್ದವು ಎನ್ನಲಾಗಿದೆ. ಆ ಕಾರಣಕ್ಕೆ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಅವರು ಶೃಂಗೇರಿಯ ಸರ್ಕಲ್ ಇನ್ಸ್‌ಪೆಕ್ಟರ್ ಸಿದ್ದರಾಮಯ್ಯ ಬಿ.ಎಂ ಅವರನ್ನು ಅಮಾನತುಗೊಳಿಸಿದ್ದಾರೆ.
ಪಿಎಸ್‌ಐ ಕೀರ್ತಿ ಕುಮಾರ್ ಎತ್ತಂಗಡಿ:
ಶೃಂಗೇರಿ ಠಾಣೆ ಪಿಎಸ್ಐ ಕೀರ್ತಿ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಶೃಂಗೇರಿಯಿಂದ ಉತ್ತರ ಕನ್ನಡದ ಕುಮಟಾ ಠಾಣೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಶುಕ್ರವಾರ ಸಿಪಿಐ ಸಿದ್ದರಾಮಯ್ಯರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿತ್ತು.
ಸದ್ಯ ಪ್ರಕರಣದ ತನಿಖೆಯನ್ನು ಎಎಸ್ಪಿ ಶೃತಿ ವಹಿಸಿಕೊಂಡಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ, 8 ಆರೋಪಿಗಳ ಬಂಧನವಾಗಿದೆ.
ಉಳಿದ ಆರೋಪಿಗಳನ್ನು ಬಂಧಿಸಲು ಪೋಲಿಸರು ಹಿಂದೇಟು ಹಾಕಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಪಿಎಸ್‌ಐ ವರ್ಗಾವಣೆ ಮಾಡಲಾಗಿದೆ. ಹೊಸ ತಂಡದ ಜೊತೆ ಎಎಸ್ಪಿ ಶೃತಿ ತನಿಖೆಯನ್ನು ಮುಂದುವರೆಸಿದ್ದಾರೆ.
Read: ಶೃಂಗೇರಿಯಲ್ಲಿ ಪೈಶಾಚಿಕ ಕೃತ್ಯ ; 15ರ ಬಾಲಕಿಗೆ 17ಕ್ಕೂ ಹೆಚ್ಚು ಮಂದಿ ಗ್ಯಾಂಗ್ ರೇಪ್, ಬ್ಲಾಕ್ ಮೇಲ್ !
Rape of a 15-year-old girl in Sringeri Police Inspector Siddaramaiah suspended and station PSI has been transferred. Six people have been arrested for the rape, sexual abuse and trafficking of a 15-year-old girl in Karnakta’s Chikkamagaluru district.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm