ಬ್ರೇಕಿಂಗ್ ನ್ಯೂಸ್
19-02-21 12:55 pm Mangalore Correspondent ಕ್ರೈಂ
ಮಂಗಳೂರು, ಫೆ.19: ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಗುರಿಯಾಗಿಟ್ಟು ನಡೆದಿರುವ ಐಟಿ ಅಧಿಕಾರಿಗಳ ದಾಳಿ ಮೂರನೇ ದಿನವೂ ಮುಂದುವರಿದಿದ್ದು, ತೆರಿಗೆ ವಂಚನೆಯ ಎಸಗಿರುವ ಬಗ್ಗೆ ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಸೋದರ ಡಾ.ಇಫ್ತಿಕಾರ್ ಆಲಿ ಐಟಿ ದಾಳಿಗೆ ಬೆದರಿ ದೇಶ ಬಿಟ್ಟು ಪಲಾಯನ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಇಫ್ತಿಕಾರ್ ಅವರ ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಮನೆ ಹಾಗೂ ಕಚೇರಿಗೆ ದಾಳಿ ನಡೆಸಿರುವ ಅಧಿಕಾರಿಗಳು, ಇಫ್ತಿಕಾರ್ ಹಾಗೂ ಪತ್ನಿಗೆ ಸೇರಿದ ವಿವಿಧ ಬ್ಯಾಂಕ್ ಅಕೌಂಟ್ ಗಳನ್ನು ಸೀಜ್ ಮಾಡಿದ್ದಾರೆ. ಐದು ಖಾಸಗಿ ಹಾಗೂ ಎರಡು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಹೊಂದಿದ್ದ ಖಾತೆಗಳನ್ನು ಅಧಿಕಾರಿಗಳು ಸೀಝ್ ಮಾಡಿದ್ದಾರೆ. ಐಟಿ ಅಧಿಕಾರಿಗಳು ಎರಡು ದಿನಗಳ ಹಿಂದೆ ಮೆಡಿಕಲ್ ಕಾಲೇಜುಗಳನ್ನು ಗುರಿಯಾಗಿಟ್ಟು ದಾಳಿ ನಡೆಸಿದ್ದು ಗೊತ್ತಾದ ಕೂಡಲೇ ಇಫ್ತಿಕಾರ್ ಆಲಿ, ದೇಶ ಬಿಟ್ಟು ಪರಾರಿಯಾಗಿದ್ದು ಪ್ರಸ್ತುತ ಅಬುಧಾಬಿಯಲ್ಲಿದ್ದಾರೆ ಎನ್ನಲಾಗುತ್ತಿದೆ.
ಅಬುಧಾಬಿ ಸೇರಿದಂತೆ ದುಬೈ, ಕತಾರ್ ನಲ್ಲೂ ಇಫ್ತಿಕಾರ್ ಆಲಿ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದ್ದು, ಅದರ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ದಾಳಿಗೆ ಒಳಗಾದ ಮೆಡಿಕಲ್ ಕಾಲೇಜು ಒಂದರಲ್ಲಿ ಇಫ್ತಿಕಾರ್ ಪಾಲುದಾರಿಕೆ ಹೊಂದಿರುವುದು ಕೂಡ ರಟ್ಟಾಗಿದ್ದು, ಅದಕ್ಕೆ ಸಂಬಂಧಿಸಿ ಅಧಿಕಾರಿಗಳ ಪರಿಶೀಲನೆಯಲ್ಲಿ ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.
ಬೇನಾಮಿ ಹೆಸರಲ್ಲಿ ಇಫ್ತಿಕಾರ್ ವಿವಿಧೆಡೆ ವ್ಯವಹಾರ ಕ್ಷೇತ್ರದಲ್ಲಿ ಹೂಡಿಕೆ ಮಾಡಿದ್ದು, ಈ ಬಗ್ಗೆ ಮಾಹಿತಿಗಳನ್ನು ಕಲೆಹಾಕಿಯೇ ಅಧಿಕಾರಿಗಳು ದಾಳಿ ನಡೆಸಿದ್ದರು. ಆದಾಯ ತೆರಿಗೆ ವಂಚಿಸುವುದಕ್ಕಾಗಿ ಬೇನಾಮಿ ಹೆಸರಲ್ಲಿ ಹೂಡಿಕೆ ಮಾಡಿದ್ದರು. ಅಲ್ಲದೆ, ಮಂಗಳೂರಿನ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲೂ ಭಾರೀ ಮೊತ್ತದ ಹೂಡಿಕೆ ಮಾಡಿರುವುದು ಪತ್ತೆಯಾಗಿದೆ. ಈ ಬಗ್ಗೆ ಅಧಿಕಾರಿಗಳು ಅಧಿಕೃತವಾಗಿ ಯಾವುದೇ ಮಾಹಿತಿಗಳನ್ನು ನೀಡಿಲ್ಲ.
ಇದೀಗ ಮಂಗಳೂರಿನ ಮನೆಯಲ್ಲಿ ಬೀಡುಬಿಟ್ಟಿರುವ ಐಟಿ ಅಧಿಕಾರಿಗಳು, ಇಫ್ತಿಕಾರ್ ಮನೆಗೆ ಬಾರದೆ ಮರಳಿ ಹೋಗುವಂತಿಲ್ಲ. ಅಲ್ಲಿರುವ ಲಾಕರ್ ಗಳನ್ನು ಇಫ್ತಿಕಾರ್ ಉಪಸ್ಥಿತಿಯಲ್ಲೇ ಓಪನ್ ಮಾಡಬೇಕಾಗಿರುವುದರಿಂದ ಅಧಿಕಾರಿಗಳು ಇಫ್ತಿಕಾರ್ ಸ್ಥಳಕ್ಕೆ ಬರೋ ವರೆಗೂ ಅಲ್ಲೇ ಉಳಿಯಲಿದ್ದಾರೆ. ಈ ನಡುವೆ, ಭಾರೀ ಪ್ರಮಾಣದ ವಂಚನೆ ಕಂಡುಬಂದ ಹಿನ್ನೆಲೆಯಲ್ಲಿ ಅವರಿಗೆ ಸಂಬಂಧಪಟ್ಟ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿದ್ದಾರೆ.
ಮಂಗಳೂರಿನಲ್ಲಿ ಶ್ರೀನಿವಾಸ ಮೆಡಿಕಲ್ ಕಾಲೇಜು ಮುಖ್ಯಸ್ಥರ ಮನೆ, ಕಚೇರಿಗೂ ದಾಳಿ
ತುಮಕೂರು, ದಾವಣಗೆರೆ, ಮಂಗಳೂರಿನಲ್ಲಿ ಹತ್ತಕ್ಕೂ ಹೆಚ್ಚು ಮೆಡಿಕಲ್ ಕಾಲೇಜು ಮುಖ್ಯಸ್ಥರಿಗೆ ಐಟಿ ಶಾಕ್
ಯುಟಿ ಖಾದರ್ ಸೋದರ ಡಾ.ಇಫ್ತಿಕಾರ್ ಮನೆಗೂ ಐಟಿ ದಾಳಿ ; ಮೆಡಿಕಲ್ ಕಾಲೇಜಿನಲ್ಲಿ ಪಾಲುದಾರಿಕೆ ಶಂಕೆ !!
Income tax raid on U T Khader brother Ifthikar Ali continues in Mangalore. Seven bank account seized. Ifthikar said to be absconding.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm