ಬ್ರೇಕಿಂಗ್ ನ್ಯೂಸ್
26-02-21 11:52 am Headline Karnataka News Network ಕ್ರೈಂ
ಯಲ್ಲಾಪುರ, ಫೆ. 26: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯ ವಿದ್ಯಾರ್ಥಿನಿಯೊಬ್ಬಳು ಬುಧವಾರ ಸಂಜೆ ನಾಪತ್ತೆಯಾಗಿದ್ದಳು. ರಾತ್ರಿ ಅರಣ್ಯದಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಯಲ್ಲಾಪುರದ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಬುಧವಾರ ಸಂಜೆ ಶಾಲೆಯಿಂದ ಮಾಗೋಡ ಬಸ್‌ನಲ್ಲಿ ಮನೆಗೆ ಹೊರಟಿದ್ದು, ನಂದೊಳ್ಳಿಯಲ್ಲಿ ಇಳಿದಿದ್ದಳು. ಆದರೆ, ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಯಾರೋ ಅಪಹರಿಸಿರಬಹುದೆಂದು ಯಲ್ಲಾಪುರ ಠಾಣೆಯಲ್ಲಿ ಕುಟುಂಬವರು ದೂರು ನೀಡಿದ್ದರು.
ಸಂಜೆಯಿಂದ ರಾತ್ರಿಯವರೆಗೆ ಗ್ರಾಮಸ್ಥರೆಲ್ಲ ಸೇರಿ ಹುಡುಕಿದರೂ ವಿದ್ಯಾರ್ಥಿನಿ ಪತ್ತೆಯಾಗಿರಲಿಲ್ಲ. ಮಧ್ಯರಾತ್ರಿ ಮನೆಯ ಸಮೀಪದ ಕಾಡಿನಲ್ಲಿ ಮರಕ್ಕೆ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವಿದ್ಯಾರ್ಥಿನಿಗೆ ಯಾವುದೇ ಅಪಾಯವಾಗಿಲ್ಲ.
ತನಿಖೆ ಚುರುಕು
ವಿದ್ಯಾರ್ಥಿನಿಯನ್ನು ಕಟ್ಟಿ ಹಾಕಿದ್ದ ಸ್ಥಳವನ್ನು ಡಿವೈಎಸ್‌ಪಿ ರವಿ ನಾಯ್ಕ, ಪಿಐ ಸುರೇಶ ಯಳ್ಳೂರ ಹಾಗೂ ಪಿಎಸ್‌ಐ ಮಂಜುನಾಥ ಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬುಧವಾರ ಸಂಜೆ ವೇಳೆ ಬೈಕ್ ಮೇಲೆ ಯುವತಿಯನ್ನು ಯಾರೋ ಮಾಗೋಡ ಕಡೆ ಕರೆದೊಯ್ಯುವುದನ್ನು ನೋಡಿರುವುದಾಗಿ ಕೆಲ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು. ಇದೇ ವೇಳೆ ಪೊಲೀಸರು ವಿದ್ಯಾರ್ಥಿನಿಯ ಮನೆಗೂ ಭೇಟಿ ನೀಡಿ ಕುಟುಂಬದವರೊಂದಿಗೆ ಚರ್ಚಿಸಿದರು. ತನಿಖೆಯನ್ನು ಚುರುಕುಗೊಳಿಸಲಾಗಿದೆ.
Yellapur school girl goes missing later found in the forest being tied to a tree. The police are now investigating the case.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm