ಬ್ರೇಕಿಂಗ್ ನ್ಯೂಸ್
06-03-21 11:09 am Mangalore Correspondent ಕ್ರೈಂ
ಬಂಟ್ವಾಳ, ಮಾ.6: ಹೆಂಡತಿಯೇ ಗಂಡನನ್ನು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ. ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಕೊಲೆ ಆರೋಪದಡಿ ಸೇಸಪ್ಪ ಅವರ ಪತ್ನಿ ಉಮಾವತಿ (52) ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಕೂಲಿ ಕೆಲಸ ಮಾಡುತ್ತಿದ್ದು ದಿನಾ ಮನೆಯಲ್ಲಿ ಗಂಡ- ಹೆಂಡತಿ ಮಧ್ಯೆ ಕುಡಿದು ಗಲಾಟೆ ನಡೆಯುತ್ತಿತ್ತು. ಇವರ ಮನೆಯಲ್ಲಿ ಮಾ.3 ರಂದು ರಾತ್ರಿ ಗಂಡ ಹೆಂಡತಿ ಮಧ್ಯೆ ಗಲಾಟೆ ನಡೆದಿತ್ತು. ಗಲಾಟೆ ಜೋರಾಗಿ ಹೊಡೆದಾಟದ ಹಂತಕ್ಕೆ ತಲುಪಿದ್ದು ಹೆಂಡತಿ ಮನೆಯಲ್ಲಿ ಇದ್ದ ಕತ್ತಿಯಿಂದ ಗಂಡನಿಗೆ ಹೊಡೆದಿದ್ದರು. ಇದರಿಂದ ಸೇಸಪ್ಪ ಅವರ ಬಲ ಹಣೆಗೆ ಗಾಯವಾಗಿದ್ದು ಮಗಳು ಇವರ ಜಗಳ ಬಿಡಿಸಿದ್ದಳು. ಬಳಿಕ ಗಾಯವಾಗಿ ರಕ್ತ ಬಂದರೂ ಚಿಕಿತ್ಸೆ ಪಡೆಯದೆ ಮನೆಯಲ್ಲಿಯೇ ಉಳಿದಿದ್ದರು. ರಕ್ತಸ್ರಾವ ಆಗಿದ್ದರಿಂದ ಹುಷಾರಿಲ್ಲ ಎಂದು ಮಲಗಿದ್ದಲ್ಲಿಯೇ ಇದ್ದು ಮಾ.5 ರಂದು ಸಂಜೆ ಅವರು ಮೃತಪಟ್ಟಿದ್ದಾರೆ.
ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ಉಮಾವತಿ ಅವರನ್ನು ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತೃತ್ವದಲ್ಲಿ ಬಂಟ್ಚಾಳ ಗ್ರಾಮಾಂತರ ಎಸ್ಐ ಪ್ರಸನ್ನ ಅವರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
The wife kills her husband in an angry mood and under the influence of liquor in Bantwal, Mangalore. The deceased has been identified as Sesappa Poojary (60).
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 06:16 pm
HK News Staffer
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm