ಸುಪ್ರೀಂ ಕೋರ್ಟ್ ಕದತಟ್ಟಿದ ಆ್ಯಸಿಡ್ ದಾಳಿ ಆರೋಪಿ ; ಬಂಧನಕ್ಕೆ ಕೋರ್ಟ್ ಸೂಚನೆ !

30-03-21 10:47 am       Mangalore Correspondent   ಕ್ರೈಂ

ಕಡಬ ಏಸಿಡ್ ದಾಳಿ ಪ್ರಕರಣದ ಆರೋಪಿಯೇ ಸ್ವತಃ ಪೊಲೀಸರ ಮುಂದೆ ಶರಣಾಗಿದ್ದಾನೆ. 

ಕಡಬ, ಮಾ.30: ಪಾಪಿ ಸಮುದ್ರಕ್ಕೆ ಹೋದರೂ ಮೊಣಕಾಲುದ್ದ ನೀರು ಅಂತಾರಲ್ಲ. ಏಸಿಡ್ ದಾಳಿ ಪ್ರಕರಣದ ಆರೋಪಿಯೊಬ್ಬ ಸುಪ್ರೀಂ ಕೋರ್ಟ್ ಕದ ತಟ್ಟಿದರೂ, ನೆರವು ಸಿಗಲಿಲ್ಲ. ಆತ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ರದ್ದುಪಡಿಸಿದ್ದಲ್ಲದೆ, ಆರೋಪಿಯನ್ನು ಬಂಧಿಸಲು ಪೊಲೀಸರಿಗೆ ಆದೇಶ ಮಾಡಿತ್ತು. ಈವರೆಗೆ ತಲೆಮರೆಸಿಕೊಂಡಿದ್ದ ಆರೋಪಿಯೇ ಸ್ವತಃ ಪೊಲೀಸರ ಮುಂದೆ ಶರಣಾಗಿದ್ದಾನೆ. 

ಕಡಬದ ಕೋಡಿಂಬಾಳದಲ್ಲಿ ತನ್ನ ಸ್ವಂತ ನಾದಿನಿ ಮತ್ತು ಪುಟ್ಟ ಮಗು ಮೇಲೆ ಆ್ಯಸಿಡ್ ದಾಳಿ ನಡೆಸಿ ಕಾರಾಗ್ರಹದಲ್ಲಿದ್ದ ಆರೋಪಿ ಜಯಾನಂದರಿಗೆ ಇತ್ತೀಚೆಗೆ ಪುತ್ತೂರು ನ್ಯಾಯಾಲಯ ಜಾಮೀನು ನೀಡಿತ್ತು. ಆದರೆ ಜಾಮೀನನ್ನು ಪ್ರಶ್ನಿಸಿ ಸಂತ್ರಸ್ತ ಮಹಿಳೆ ಹೈಕೋರ್ಟಿನಲ್ಲಿ ಪ್ರಶ್ನಿಸಿ ಜಾಮೀನು ರದ್ದುಪಡಿಸುವಂತೆ ಅರ್ಜಿ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಜಯಾನಂದರ ಜಾಮೀನು ರದ್ದುಗೊಳಿಸಿ ಅವರನ್ನು ಕೂಡಲೇ ಬಂಧಿಸುವಂತೆ ಕಡಬ ಪೊಲೀಸರಿಗೆ ಆದೇಶ ಮಾಡಿತ್ತು. ಈ ಮಧ್ಯೆ ಆರೋಪಿ ಜಯಾನಂದ ತಲೆಮರೆಸಿಕೊಂಡು ಸುಪ್ರೀಂ ಕೋರ್ಟಿನಲ್ಲಿ ನಿರೀಕ್ಷಣಾ ಜಾಮಿನಿಗೆ ಅರ್ಜಿ ಸಲ್ಲಿಸಿದ್ದ. ಆದರೆ ಈ ಅರ್ಜಿಯನ್ನು ಮಾನ್ಯ ನ್ಯಾಯಾಲಯವು ವಜಾಗೊಳಿಸಿದ್ದು, ಇದೀಗ ಜಯಾನಂದ ನ್ಯಾಯಾಲಯಕ್ಕೆ ಶರಣಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

2020ನೇ ಜನರಿ 24ರಂದು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಕೊಠಾರಿ ಎಂಬಲ್ಲಿ ಜಯಾನಂದ ಎಂಬವರು ತನ್ನ ತಮ್ಮನ ಹೆಂಡತಿ ಸ್ವಪ್ನಾ ಎಂಬವರಿಗೆ ಮತ್ತು ಅವರ ಜೊತೆಗಿದ್ದ ಪುಟ್ಟ ಮಗುವಿನ ಮೇಲೆ ಆ್ಯಸಿಡ್ ಎರಚಿದ್ದ. ಇದರಿಂದ ಸ್ವಪ್ನಾ ಹಾಗೂ ಅವರ ಮಗುವಿಗೆ ಗಾಯವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಜಯಾನಂದನಿಗೆ ಪುತ್ತೂರು ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿತ್ತು. ಆದರೆ ಈ ಜಾಮೀನನ್ನು ಪ್ರಶ್ನಿಸಿ ಸ್ವಪ್ನ ಆವರು ಹೈಕೋರ್ಟಿನ ಮೊರೆ ಹೋಗಿದ್ದರು. ಈ ಮಧ್ಯೆ ಆರೋಪಿ ತಲೆಮರೆಸಿಕೊಂಡು ಸುಪ್ರೀಂ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದ ಎನ್ನಲಾಗಿದೆ. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದೀಗ ಜಯಾನಂದ ನೇರವಾಗಿ ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Supreme court rejects bail plea of acid attacker of Kadaba orders for arrest but the accused has surrendered to the Police Station.