ಬ್ರೇಕಿಂಗ್ ನ್ಯೂಸ್
01-04-21 10:49 am Mangalore Correspondent ಕ್ರೈಂ
ಸುಳ್ಯ, ಎ.1 : ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಮೋಹನ್ ಜ್ಯುವೆಲ್ಲರಿ ಮಾರ್ಟ್ ಗೆ ನಿನ್ನೆ ರಾತ್ರಿ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ.
ಇಂದು ಮುಂಜಾನೆ ಪೇಪರ್ ಏಜೆಂಟ್ ಪತ್ರಿಕೆ ಹಾಕಲು ಬಂದಾಗ ಜ್ಯುವೆಲ್ಲರಿಯ ಬೀಗ ಒಡೆದಿರುವುದು ಕಂಡುಬಂದಿದ್ದು ಅಂಗಡಿ ಮಾಲಕರಿಗೆ ವಿಷಯ ತಿಳಿಸಿದ್ದಾರೆ. ಮಾಲಕರು ಸ್ಥಳಕ್ಕಾಗಮಿಸಿ ಅಂಗಡಿ ತೆರೆದಾಗ ಕಳ್ಳರು ನುಗ್ಗಿರುವುದು ಕಂಡುಬಂದಿದೆ. ಬಳಿಕ ಪೊಲೀಸರಿಗೆ ತಿಳಿಸಿದ್ದು ಸುಮಾರು 50 ಸಾವಿರ ರೂ. ನಗದು ಮತ್ತು 10 ಲಕ್ಷ ರೂ.ಗೂ ಅಧಿಕ ಮೊತ್ತದ ಚಿನ್ನ ಕಳವಾಗಿರುವುದಾಗಿ ದೂರು ನೀಡಿದ್ದಾರೆ.
ಸ್ಥಳಕ್ಕೆ ಬೆರಳಚ್ಚು ತಜ್ಞರನ್ನು ಆಗಮಿಸಿದ್ದಾರೆ. ಅಂಗಡಿ ಒಳಗಿದ್ದ ಸಿಸಿಟಿವಿ ಕ್ಯಾಮರಾವನ್ನು ಡಿ.ವಿ.ಆರ್. ಬಾಕ್ಸ್ ಸಮೇತ ಕಳ್ಳರು ಹೊತ್ತೊಯ್ದಿದ್ದಾರೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
ವಾರದ ಹಿಂದಷ್ಟೇ ಪುತ್ತೂರು ಪೇಟೆಯಲ್ಲಿ ಇದೇ ರೀತಿ ಜುವೆಲ್ಲರಿಗೆ ನುಗ್ಗಿದ ಕಳ್ಳರು ಭಾರೀ ಪ್ರಮಾಣದ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದರು. ಆ ಕೃತ್ಯದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ ಸುಳ್ಯದಲ್ಲಿ ಮತ್ತೊಂದು ಕೃತ್ಯ ನಡೆದಿದೆ.
Mohan jewellery mart shop robbed of valuables worth lakhs in Sullia. The police are now investigating the case.
31-08-25 05:35 pm
HK News Desk
Bangalore Court, Dharmasthala, Delete Videos:...
30-08-25 04:51 pm
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
31-08-25 01:32 pm
HK News Desk
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
Siddaramaiah, 1991 Election: 1991ರ ಚುನಾವಣೆಯಲ್...
29-08-25 05:20 pm
31-08-25 01:56 pm
Mangaluru Correspondent
Udupi, Diksha Sets New World Record, Bharatan...
31-08-25 12:49 pm
ಬೆಂಗಳೂರಿನಲ್ಲಿ ಉಳಿದಿದ್ದು ನಿಜ, ದೆಹಲಿಗೆ ಹೋಗಿದ್ದೂ...
30-08-25 11:08 pm
2002ರ ಉಳ್ಳಾಲದ ಚಾರಿತ್ರಿಕ ನಾಗಮಂಡಲದ ರೂವಾರಿ, ಧಾರ್...
30-08-25 11:01 pm
Mangalore, Ganesh Chaturthi, Catholic: ಸಂಘನಿಕ...
30-08-25 10:10 pm
30-08-25 03:22 pm
Mangalore Correspondent
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm