ಬ್ರೇಕಿಂಗ್ ನ್ಯೂಸ್
06-04-21 01:28 pm Mangalore Correspondent ಕ್ರೈಂ
ಮಂಗಳೂರು, ಎ.6: ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ನೇತೃತ್ವದಲ್ಲಿ ಮಹತ್ವದ ರಹಸ್ಯ ಕಾರ್ಯಾಚರಣೆ ಮಾಡಲಾಗಿದ್ದು, ಮಂಗಳೂರಿನ ಚೈಲ್ಡ್ ಕೇರ್ ಸೆಂಟರ್ ಗಳಲ್ಲಿ ಇರುವ ಬುದ್ಧಿಮಾಂದ್ಯ ಮತ್ತು ಅನಾಥ ಮಕ್ಕಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿರುವುದನ್ನು ಪತ್ತೆ ಮಾಡಲಾಗಿದೆ.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಐದು ಚೈಲ್ಡ್ ಕೇರ್ ಸೆಂಟರ್ ಗಳಲ್ಲಿ ಮಕ್ಕಳನ್ನು ದೈಹಿಕವಾಗಿ ಮತ್ತು ಲೈಂಗಿಕವಾಗಿ ಕಿರುಕುಳ ನೀಡಿರುವ ಅಂಶ ಬೆಳಕಿಗೆ ಬಂದಿದ್ದು, ಈ ಬಗ್ಗೆ ಪೊಲೀಸರು ಶಿಸ್ತು ಕ್ರಮ ಜರುಗಿಸಲು ಮುಂದಾಗಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ, ಉಳ್ಳಾಲದ ನೂರಾನಿ ಯತೀಂಖಾನದಲ್ಲಿ ಮಕ್ಕಳನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದಲ್ಲಿ ಅಲ್ಲಿನ ಉಸ್ತಾದ್ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಕಿಗೆ ಬಂದಿದ್ದು ಹೇಗೆ ?
ಮಕ್ಕಳಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ರಹಸ್ಯ ಮಾಹಿತಿ ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ಲಭಿಸಿತ್ತು. ಇದನ್ನು ಪತ್ತೆಹಚ್ಚುವ ಸಲುವಾಗಿ ಕಮಿಷನರ್, ಡಿಸಿಪಿ ಹರಿರಾಮ್ ಶಂಕರ್ ಜೊತೆಗೂಡಿ ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ. ಇದಕ್ಕಾಗಿ ಮಂಗಳೂರಿನ ಮಕ್ಕಳ ವೈದ್ಯರು ಮತ್ತು ಮನೋವೈದ್ಯರನ್ನು ಬಳಸ್ಕೊಂಡಿದ್ದಾರೆ. ಅರಿವು – ನೆರವು ಹೆಸರಲ್ಲಿ ಕಾರ್ಯಕ್ರಮ ರೂಪಿಸಿದ್ದು, ಅದರಲ್ಲಿ ಕೋವಿಡ್ ಸೋಂಕಿನ ಬಗ್ಗೆ ಜಾಗೃತಿ ಮತ್ತು ಮಕ್ಕಳಲ್ಲಿ ಲೈಂಗಿಕ ಶೋಷಣೆ ಬಗ್ಗೆ ಜಾಗೃತಿ ಮೂಡಿಸುವ ಶಿಬಿರಗಳಿದ್ದವು. ಆಮೂಲಕ ಬುದ್ಧಿಮಾಂದ್ಯ ಮತ್ತು ಅನಾಥ ಮಕ್ಕಳಲ್ಲಿ ಲೈಂಗಿಕ ಶೋಷಣೆಯ ಕುರಿತು ಜಾಗೃತಿ ಮೂಡಿಸಿದ್ದಾರೆ.
ಗುಡ್ ಟಚ್ ಮತ್ತು ಬ್ಯಾಡ್ ಟಚ್ ಎನ್ನುವ ಹೆಸರಲ್ಲಿ ಮಕ್ಕಳಲ್ಲಿ ಜಾಗೃತಿ ಮೂಡಿಸಿದ್ದಲ್ಲದೆ, ನಿಗಾ ಘಟಕಗಳಲ್ಲಿ ಆಗುತ್ತಿರುವ ಕಿರುಕುಳದ ಬಗ್ಗೆ ಅರಿವು ಮೂಡಿಸಿದ್ದಾರೆ. ಈ ರೀತಿಯಲ್ಲಿ ಮಕ್ಕಳನ್ನು ಪರೀಕ್ಷೆಗೊಳಪಡಿಸಿದಾಗ, ವಿವಿಧ ಕೇಂದ್ರಗಳ ನೂರಕ್ಕೂ ಹೆಚ್ಚು ಮಕ್ಕಳಿಗೆ ಕಿರುಕುಳ ಆಗುತ್ತಿರುವ ವಿಚಾರ ಅರಿವಿಗೆ ಬಂದಿದೆ. ಆಬಳಿಕ ಆ ಪೈಕಿ 20 ಮಕ್ಕಳನ್ನು ಕೊನೆಯದಾಗಿ ಪರೀಕ್ಷೆಗೊಳಪಡಿಸಿದ್ದು, ಅವರನ್ನು ನಿರಂತರವಾಗಿ ಲೈಂಗಿಕವಾಗಿ ದುರ್ಬಳಕೆ ಮತ್ತು ಕಿರುಕುಳ ನೀಡುತ್ತಿರುವುದನ್ನು ಪೊಲೀಸರು ಮತ್ತು ವೈದ್ಯರು ಪತ್ತೆ ಮಾಡಿದ್ದಾರೆ.
ಇವೆಲ್ಲವೂ ರಹಸ್ಯವಾಗಿ ನಡೆದಿದ್ದು, ಮಂಗಳೂರಿನ ಐದು ಚೈಲ್ಡ್ ಕೇರ್ ಸೆಂಟರ್ ಗಳ ಬಗ್ಗೆ ಪೊಲೀಸರು ಕಣ್ಣಿರಿಸಿದ್ದಾರೆ. ಅವುಗಳಿಗೆ ನೋಟೀಸ್ ನೀಡಿದ್ದಲ್ಲದೆ, ಅಲ್ಲಿ ಮಕ್ಕಳನ್ನು ದುರ್ಬಳಕೆ ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ. ಉಳ್ಳಾಲದ ಯತೀಂಖಾನ ಒಂದರಲ್ಲಿ ಮದ್ರಸ ಕಲಿಸುತ್ತಿದ್ದ ಉಸ್ತಾದ್ ಅವರನ್ನು ಇದೇ ಆರೋಪದಲ್ಲಿ ವಶಕ್ಕೆ ಪಡೆದಿದ್ದಾರೆ. ರಹಸ್ಯ ಕಾರ್ಯಾಚರಣೆಯಲ್ಲಿ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನೂ ಬಳಸಿಕೊಳ್ಳಲಾಗಿತ್ತು.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 28 ಚೈಲ್ಡ್ ಕೇರ್ ಸೆಂಟರ್ ಗಳಿದ್ದು, 500 ಮಕ್ಕಳಿದ್ದಾರೆ. ಇಡೀ ಜಿಲ್ಲೆಯಲ್ಲಿ 60ಕ್ಕೂ ಹೆಚ್ಚು ಸೆಂಟರ್ ಗಳಿದ್ದು 1024 ಮಕ್ಕಳು ನಿಗಾ ಘಟಕದಲ್ಲಿದ್ದಾರೆ. ಈಗ ಮಂಗಳೂರು ವ್ಯಾಪ್ತಿಯ ನಿಗಾ ಘಟಕಗಳ ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
In shocking information revealed to Headline Karnataka Childrens rescued by the ChildLine, department are been sexually harassed in child line centres has been exposed by our team.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm