ಬ್ರೇಕಿಂಗ್ ನ್ಯೂಸ್
08-04-21 02:03 pm Headline Karnataka News Network ಕ್ರೈಂ
ಬೆಂಗಳೂರು,ಎ.8 : ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇಬ್ಬರನ್ನು ಕೊಲೆಗೈದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಂತೃಪ್ತಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ಬೆಂಗಳೂರು: ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇಬ್ಬರನ್ನು ಕೊಲೆಗೈದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಂತೃಪ್ತಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಮಮತಾ ಬಸು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಸಂತೃಪ್ತಿ ನಗರದಲ್ಲಿ ಸ್ವಂತ ಮನೆ ಹೊಂದಿದ್ದರು. ಮಗ ಸಹ ಪಕ್ಕದ ಬೀದಿಯಲ್ಲಿ ಪ್ರತ್ಯೇಕ ಮನೆಯೊಂದರಲ್ಲಿ ವಾಸವಾಗಿದ್ದನು.

ಈ ನಡುವೆ ಮಮತಾ ಪುತ್ರನ ಸ್ನೇಹಿತನಾಗಿದ್ದ ಒಡಿಶಾ ಮೂಲದ ದೇವಬ್ರತಾ ಎಂಬುವರಿಗೆ ನಗರದಲ್ಲಿ ಲೆಕ್ಚರಲ್ ಆಗಿ ಕೆಲಸ ದೊರಕಿತ್ತು. ಈ ನಿಟ್ಟಿನಲ್ಲಿ 20 ದಿನಗಳ ಹಿಂದೆ ನಗರಕ್ಕೆ ಬಂದು ಸ್ನೇಹಿತನ ಸಲಹೆಯಂತೆ ತಾಯಿ ಮನೆಯಲ್ಲಿ ಉಳಿದುಕೊಂಡಿದ್ದ. ಆದರೆ ನಿನ್ನೆ ರಾತ್ರಿ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿದ್ದಾನೆ. ಈ ವೇಳೆ ಚಾಕುವಿನಿಂದ ಮನೆಯಲ್ಲಿದ್ದ ಇಬ್ಬರನ್ನು ಕೊಲೆ ಮಾಡಿದ್ದಾನೆ. ಬಳಿಕ ಅಲ್ಲಿದ್ದ ಲ್ಯಾಪ್‌ಟಾಪ್, ಮೊಬೈಲ್, ಚಿನ್ನಾಭರಣ, ಎಟಿಎಂ ಕಾರ್ಡ್‌ಗಳನ್ನು ದೋಚಿಕೊಂಡು ಪರಾರಿಯಾಗಿದ್ದಾನೆ.

ಪುಟ್ಟೇನಹಳ್ಳಿ ಪೊಲೀಸರು ಹಣಕ್ಕಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸಂಬಂಧ ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
An unidentified person who entered a house in Bangalore has killed two people and then fleeing with cash and gold. Puttanahalli police are now investigating the case.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm