ಬ್ರೇಕಿಂಗ್ ನ್ಯೂಸ್
09-04-21 10:15 pm Headline Karnataka News Network ಕ್ರೈಂ
ಬೆಂಗಳೂರು, ಎ.9 : ರಕ್ಷಿತ್ ಶೆಟ್ಟಿ - ರಶ್ಮಿಕಾ ಮಂದಣ್ಣ ನಟನೆಯ ಸೂಪರ್ ಹಿಟ್ ಚಿತ್ರ ಕಿರಿಕ್ ಪಾರ್ಟಿ. ಆದರೆ, ರಿಷಬ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದಿದ್ದ ಈ ಕಿರಿಕ್ ಪಾರ್ಟಿ ಚಿತ್ರತಂಡಕ್ಕೇ ಈಗ ಸಂಕಷ್ಟ ಎದುರಾಗಿದೆ. ಇಡೀ ಸಿನಿಮಾ ತಂಡದ ವಿರುದ್ಧ ಬೆಂಗಳೂರಿನ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.
ಬೆಂಗಳೂರಿನ 9ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದು, ಆರೋಪಿತರನ್ನು ಬಂಧಿಸಿ ಕರೆತರುವಂತೆ ಕೋರ್ಟ್ ಸೂಚಿಸಿದೆ. ನಟ ರಕ್ಷಿತ್ ಶೆಟ್ಟಿ, ನಿರ್ದೇಶಕ ರಿಷಬ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಪರಮ್ವಾ ಸ್ಟುಡಿಯೋಸ್ ಆರೋಪಿಗಳಾಗಿದ್ದು ಬಂಧನ ವಾರೆಂಟ್ ಜಾರಿಯಾಗಿದೆ. ಲಹರಿ ಸಂಸ್ಥೆಯಿಂದ ಇವರ ವಿರುದ್ಧ ದೂರು ನೀಡಿದ್ದು ಅನುಮತಿ ಇಲ್ಲದೆ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ತಮ್ಮ ಹಾಡನ್ನು ಅಕ್ರಮವಾಗಿ ಬಳಸಿಕೊಂಡಿದ್ದಾಗಿ ಆರೋಪಿಸಿ ದೂರು ನೀಡಿತ್ತು.
2016ರಲ್ಲಿ ಲಹರಿ ಸಂಸ್ಥೆ ಕಾಪಿ ರೈಟ್ ಆಕ್ಟ್ ಅಡಿ ದೂರು ದಾಖಲು ಮಾಡಿತ್ತು. ಸಿನಿಮಾ ಬಿಡುಗಡೆಯಾಗಿ 5 ವರ್ಷಗಳ ಬಳಿಕ ವಿಚಾರಣೆ ನಡೆದು ಈಗ ವಾರೆಂಟ್ ಜಾರಿಯಾಗಿದೆ.
ಒಟ್ಟು ತಂಡದ ವಿರುದ್ಧ 8 ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿತ್ತು. ಆದರೆ ಆರೋಪಿಗಳು ಒಮ್ಮೆಯೂ ಕೋರ್ಟ್ ಗೆ ಹಾಜರಾಗದ ಕಾರಣಕ್ಕೆ ಈ ಬಾರಿ ಬಂಧಿಸಿ ಕರೆತರುವಂತೆ ಕೋರ್ಟ್ ಆದೇಶ ನೀಡಿದೆ. ಮೇ 27ಕ್ಕೆ ಕೋರ್ಟ್ ಮುಂದೆ ಹಾಜರು ಪಡಿಸಲು ಪೊಲೀಸರಿಗೆ ಸೂಚನೆ ನೀಡಿದೆ.
ಕಿರಿಕ್ ಪಾರ್ಟಿ ಸಿನಿಮಾದಲ್ಲಿ ರವಿಚಂದ್ರನ್ ನಟನೆಯ ಶಾಂತಿ ಕ್ರಾಂತಿ ಚಿತ್ರದ ಮಧ್ಯರಾತ್ರೀಲಿ ಹಾಡನ್ನು ಬಳಸಿಕೊಳ್ಳಲಾಗಿದೆ ಎಂದು ಲಹರಿ ಸಂಸ್ಥೆ ಮುಖ್ಯಸ್ಥ ಲಹರಿ ವೇಲು ದೂರು ದಾಖಲಿದ್ದರು.
Rishab Shetty’s ‘Kirik Party’ starring Simple Star Rakshit Shetty is back in trouble. The court has issued a non-bailable warrant against the film. The 9th ACMM Court in Bangalore has issued a non-bailable warrant and ordered the arrest. Actor Rakshit Shetty, director Rishab Shetty, music director Ajanesh Lokanath and Paramwa Studios are accused. He was accused of illegally using the song in Kirk Party Cinema without permission from a drug agency.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm