ಬ್ರೇಕಿಂಗ್ ನ್ಯೂಸ್
24-04-21 10:06 am Headline Karnataka News Network ಕ್ರೈಂ
ನವದೆಹಲಿ,ಎ.24: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಕೋವಿಡ್ ಬಿಗಡಾಯಿಸಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಡುತ್ತಿದ್ದಾರೆ. ಆದ್ರೆ ಇಲ್ಲೋರ್ವ ಖದೀಮ ಅಕ್ರಮವಾಗಿ ತನ್ನ ಮನೆಯಲ್ಲಿಯೇ ಆಮ್ಲಜನಕದ ಸಿಲಿಂಡರ್‌ಗಳನ್ನು ಸಂಗ್ರಹಿಸಿಟ್ಟುಕೊಂಡು ಹೆಚ್ಚಿಗೆ ಬೆಲೆಗೆ ವ್ಯಾಪಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ನಿಖರ ಮಾಹಿತಿಯ ಮೇರೆಗೆ ದೆಹಲಿಯ ದಶರತ್ಪುರ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಪೊಲೀಸರು ದಾಳಿ ನಡೆಸಿದಾಗ ತಲಾ 67 ಲೀಟರ್ ಸಾಮರ್ಥ್ಯವುಳ್ಳ 32 ದೊಡ್ಡ ಹಾಗೂ ತಲಾ 10 ಲೀಟರ್ ಸಾಮರ್ಥ್ಯದ 16 ಸಣ್ಣ ಆಕ್ಸಿಜನ್ ಸಿಲಿಂಡರ್ಗಳು ಪತ್ತೆಯಾಗಿವೆ. ಮನೆಯ ಮಾಲೀಕನಾಗಿರುವ ಆರೋಪಿ ಅನಿಲ್ ಕುಮಾರ್ನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಆರೋಪಿಯು ದೊಡ್ಡ ಸಿಲಿಂಡರ್‌ಗಳಿಂದ ಸಣ್ಣ ಸಿಲಿಂಡರ್‌ಗಳಿಗೆ ಆಮ್ಲಜನಕ ತುಂಬಿ, ಪ್ರತಿ ಸಿಲಿಂಡರ್ಗೆ 12,500 ರೂಪಾಯಿಯಂತೆ ಮಾರಾಟ ಮಾಡುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಸದ್ಯಕ್ಕೆ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನ್ಯಾಯಾಲಯವು ಇವುಗಳನ್ನು ಅಗತ್ಯವಿರುವ ಆಸ್ಪತ್ರೆಗಳಿಗೆ ನೀಡಲು ಸೂಚನೆ ನೀಡಲಿದೆ. ಆರೋಪಿಯ ಮುಖ್ಯ ಗೋದಾಮು ಮಾಯಾಪುರಿ ಪ್ರದೇಶದಲ್ಲಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಡಿಸಿಪಿ (ನೈರುತ್ಯ ದೆಹಲಿ) ಇಂಗಿತ್ ಪ್ರತಾಪ್ ಸಿಂಗ್ ಮಾಹಿತಿ ನೀಡಿದ್ದಾರೆ.
A man was arrested on Friday for allegedly storing oxygen gas cylinders at his house in southwest Delhi's Dashrathpuri in violation of rules, police said.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm