ಬ್ರೇಕಿಂಗ್ ನ್ಯೂಸ್
04-05-21 04:47 pm Mangalore Correspondent ಕ್ರೈಂ
ಮಂಗಳೂರು, ಮೇ 4: ಮೊಬೈಲ್ ಏಪ್ ಬಳಸ್ಕೊಂಡು ಅಂತಾರಾಜ್ಯ ಮಟ್ಟದಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಟ್ಟಿಂಗ್ ಜಾಲದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ, ವಿಕ್ರಮ್ ಕುಂಪಲ, ಕಮಲೇಶ್ ಮತ್ತು ಧನಪಾಲ್ ಎಂಬ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಂತಾರಾಜ್ಯ ಮಟ್ಟದಲ್ಲಿ ಜಾಲ ಬೆಸೆದುಕೊಂಡಿರುವುದು ಪತ್ತೆಯಾಗಿತ್ತು. ಬಳಿಕ ಆರೋಪಿಗಳಿಂದ ಮಾಹಿತಿ ಪಡೆದು ಮುಂಬೈ ಮೂಲದ ಹರೀಶ್ ಶೆಟ್ಟಿ, ಪ್ರೀತೇಶ್ ಅಶೋಕನಗರ ಮತ್ತು ಅವಿನಾಶ್ ಮಾರಿಗುಡಿ ಎಂಬ ಮೂವರನ್ನು ಬಂಧಿಸಲಾಗಿದೆ. ಇವರನ್ನು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಮೊಬೈಲ್ ಏಪ್ ಗಳಾದ Star App ಮತ್ತು Lotus book 247 bet ಗಳಲ್ಲಿ ಗ್ರಾಹಕರನ್ನು ಸೆಳೆಯುತ್ತಿದ್ದರು. ವ್ಯವಸ್ಥಿತವಾಗಿ ನಡೆಸುತ್ತಿದ್ದ ಜಾಲದಲ್ಲಿ ವಿವಿಧ ಕಡೆ ಏಜಂಟರನ್ನು ಇರಿಸಿಕೊಂಡಿದ್ದರು. ಮಂಗಳೂರು ಸೇರಿದಂತೆ ಗೋವಾ, ಮಹಾರಾಷ್ಟ್ರದ ವಿವಿಧ ಕಡೆಗಳಲ್ಲಿ ಜಾಲ ಕಾರ್ಯಾಚರಣೆ ನಡೆಸುತ್ತಿತ್ತು. ವಿಶಾಖಪಟ್ಟಣವನ್ನು ಕೇಂದ್ರವಾಗಿಟ್ಟುಕೊಂಡು ಹರೀಶ್ ಶೆಟ್ಟಿ ಮತ್ತು ಅವಿನಾಶ್ ಬೆಟ್ಟಿಂಗ್ ಜಾಲ ನಡೆಸುತ್ತಿದ್ದರು ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
20 ಬ್ಯಾಂಕ್ ಖಾತೆ, 20 ಲಕ್ಷ ರೂಪಾಯಿ ಸೀಜ್
ಇದಲ್ಲದೆ, ಗ್ರಾಹಕರು ಹಣವನ್ನು ಹೂಡಿಕೆ ಮಾಡುವುದಕ್ಕಾಗಿ ಬೇನಾಮಿ ಹೆಸರಲ್ಲಿ ವಿವಿಧ ಬ್ಯಾಂಕುಗಳಲ್ಲಿ ಖಾತೆಗಳನ್ನು ತೆರೆದಿರುವುದು ಪತ್ತೆಯಾಗಿದೆ. ಏಕ್ಸಿಸ್ ಬ್ಯಾಂಕ್, ಕರ್ಣಾಟಕ ಬ್ಯಾಂಕ್ ಮತ್ತು ಎಚ್ ಡಿಎಫ್ ಸಿ ಬ್ಯಾಂಕಿನಲ್ಲಿ ಖಾತೆಗಳು ಇರುವುದನ್ನು ಪತ್ತೆ ಮಾಡಿದ್ದು, ಸುಮಾರು 20 ಖಾತೆಗಳನ್ನು ಸೀಜ್ ಮಾಡಲಾಗಿದೆ. ಅದರಲ್ಲಿದ್ದ 20 ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ, ಆರೋಪಿಗಳಿಂದ ಮೂರು ಲಕ್ಷ ರೂ. ನಗದು ಹಾಗೂ ಬೆಟ್ಟಿಂಗ್ ಜಾಲ ನಡೆಸುತ್ತಿದ್ದ ಹತ್ತು ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಅಂತಾರಾಜ್ಯ ಬೆಟ್ಟಿಂಗ್ ಜಾಲ
ಹೊರ ರಾಜ್ಯದಲ್ಲಿ ಇದ್ದುಕೊಂಡು ಅಕ್ರಮ ವಹಿವಾಟು ನಡೆಸುತ್ತಿರುವುದು ಪತ್ತೆಯಾಗಿದೆ. ವಿವಿಧ ಕಡೆಗಳಲ್ಲಿ ಸಬ್ ಏಜಂಟರನ್ನು ಇರಿಸಿಕೊಂಡು ಗ್ರಾಹಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದರು. ಗ್ರಾಹಕರಲ್ಲಿ ಏಪ್ ಡೌನ್ಲೋಡ್ ಮಾಡಿಸಿಕೊಂಡು ಹಣವನ್ನು ಆನ್ ಲೈನಲ್ಲಿ ಹೂಡಿಕೆ ಮಾಡಿಸುತ್ತಿದ್ದರು. ಜಾಲದ ಬಗ್ಗೆ ಬಹಳಷ್ಟು ಮಾಹಿತಿಗಳು ಲಭಿಸಿದ್ದು, ಜಾಲದಲ್ಲಿ ಇನ್ನೂ ಹಲವು ಆರೋಪಿಗಳು ಇದ್ದಾರೆ. ಅವರನ್ನು ಬಂಧಿಸಲಾಗುವುದು. ಮಂಗಳೂರಿನ ಇಕನಾಮಿಕ್ ಮತ್ತು ನಾರ್ಕೋಟಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಬಿ ತಂಡದ ಸಿಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಕಮಿಷನರ್ ತಿಳಿಸಿದ್ದಾರೆ.
ಬೇನಾಮಿ ಖಾತೆಯಲ್ಲಿ ವಹಿವಾಟು
ಯಾರದೋ ಹೆಸರಲ್ಲಿ ಖಾತೆ ತೆರೆದುಕೊಂಡು ಬೇನಾಮಿಯಾಗಿ ವಹಿವಾಟು ನಡೆಸಲಾಗುತ್ತಿತ್ತು. ದಿನದಲ್ಲಿ ಲಕ್ಷಾಂತರ ರೂಪಾಯಿ ಹಣದ ವಹಿವಾಟು ನಡೆಯುತ್ತಿತ್ತು. ಸಾಮಾನ್ಯ ವ್ಯಕ್ತಿಯೊಬ್ಬನ ಖಾತೆಯಲ್ಲಿ ಲಕ್ಷಾಂತರ ರೂಪಾಯಿ ವಹಿವಾಟು ನಡೆಯುತ್ತಿದ್ದರೆ, ಬ್ಯಾಂಕ್ ಅಧಿಕಾರಿಗಳು ಅನುಮಾನ ಬಂದು ತನಿಖೆ ನಡೆಸಬೇಕು. ಈ ರೀತಿಯ ಸಂಶಯಾಸ್ಪದ ಖಾತೆಗಳ ಬಗ್ಗೆ ದೂರು ನೀಡಿದರೆ ತನಿಖೆಗೆ ಸಹಕಾರಿಯಾಗುತ್ತದೆ ಎಂದರು ಕಮಿಷನರ್.
Video:
City Crime Branch (CCB) and Economic and Narcotic Crime police station officers and personnel have arrested six bookies who used to IPL cricket betting on mobile apps like Star App and Lotusbook247 in the bank accounts of Axis Bank, Karnataka Bank and HDFC Bank, which they opened in others names to which they used to collect betting money from punters online.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm