ಬ್ರೇಕಿಂಗ್ ನ್ಯೂಸ್
27-08-20 11:45 am Hassan Reporter ಕ್ರೈಂ
ಹಾಸನ, ಆಗಸ್ಟ್ 27: ನಿರ್ಗತಿಕ ಮಹಿಳೆಯೊಬ್ಬಳನ್ನು ಕೊಂದು ನಂತರ ತನ್ನ ಕಾಮತೃಷೆ ತೀರಿಸಿಕೊಂಡ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು ಗಂಭೀರವಾಗಿ ಪರಿಗಣಿಸಿರುವ ಹಾಸನ ಜಿಲ್ಲಾ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಸೋಮವಾರ ತಡರಾತ್ರಿ ಮಹಿಳೆ ಭಿಕ್ಷಾಟನೆಯ ಬಳಿಕ ರಾತ್ರಿ 11 ಗಂಟೆ ವೇಳೆಗೆ ಎನ್.ಆರ್. ವೃತ್ತದ ಕನ್ನಿಕಾ ಪರಮೇಶ್ವರಿ ಬ್ಯಾಂಕ್ ಎದುರು ಮಲಗಲು ಅಣಿಯಾಗುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದಿದ್ದ ನೀಲಿ ಜೀನ್ಸ್ ಪ್ಯಾಂಟ್ ಧಾರಿ ಕೀಚಕ, ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಲವಂತ ಮಾಡುತ್ತಾನೆ. ಇದಕ್ಕೆ ಮಹಿಳೆ ನಿರಾಕರಿಸಿದಾಗ ಅಲ್ಲಿಂದ ತೆರಳುವ ಪಾಪಿ ಯುವಕ, ಮಹಿಳೆ ನಿದ್ದೆಗೆ ಜಾರುವವರೆಗೂ ಬೇರೆಡೆ ಹೊಂಚು ಹಾಕಿದ್ದಾನೆ. ಮಹಿಳೆ ಮಲಗಿದ್ದನ್ನು ಖಾತ್ರಿ ಪಡಿಸಿಕೊಂಡ ದುರುಳ, ಬೃಹತ್ ಗಾತ್ರದ ಹಾಲೋಬ್ರಿಕ್ಸ್ ಇಟ್ಟಿಗೆಯನ್ನು ಮಲಗಿದ್ದ ಮಹಿಳೆಯ ತಲೆಗೆ ಎತ್ತಿ ಹಾಕುತ್ತಾನೆ. ನಂತರ ಆಕೆ ಸತ್ತಳೆಂದು ದೃಢವಾದ ಬಳಿಕ ಸತ್ತ ಹೆಣದ ಜೊತೆ ಮೃಗೀಯ ರೀತಿ ವರ್ತಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಾನೆ. ಈ ಎಲ್ಲಾ ಅಮಾನವೀಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ವಿಕೃತ ಕಾಮಿ ಉಮೇಶ್ ರೆಡ್ಡಿಯ ಹೀನ ಕೃತ್ಯವನ್ನು ನೆನಪಿಸುವ ರೀತಿಯ ಹಂತಕನ ಕರಾಳ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಇಡೀ ಮನುಕುಲವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಅಲ್ಲದೆ ಸಾರ್ವಜನಿಕ ವಲಯದಲ್ಲಿ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಆತನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಕೃತ್ಯದ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಸಿಸಿಟಿವಿ ಆಧರಿಸಿ ಆರೋಪಿ ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿದ್ದು, ಆದಷ್ಟು ಬೇಗ ಆರೋಪಿಯನ್ನು ಬಂಧಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹಾಸನ ಎಸ್ಪಿ ಶ್ರೀನಿವಾಸ್ ಗೌಡ ಭರವಸೆ ನೀಡಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm