ಬ್ರೇಕಿಂಗ್ ನ್ಯೂಸ್
27-08-20 12:26 pm Bangalore Reporter ಕ್ರೈಂ
ಬೆಂಗಳೂರು, ಆಗಸ್ಟ್ 27: ಸಿಲಿಕಾನ್ ಸಿಟಿಯ ಸಿಸಿಬಿ ಪೊಲೀಸರು ಮೊಟ್ಟಮೊದಲ ಬಾರಿಗೆ ಎರಡು ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ. ಏಕಕಾಲದಲ್ಲಿ 204 ಕೆಜಿ ಗಾಂಜಾ ಸಿಸಿಬಿ ಪೊಲೀಸರು ಬೇಟೆಯಾಡಿದ್ದು, ಈ ಮೂಲಕ ಇದೇ ಮೊದಲ ಬಾರಿಗೆ ಪೊಲೀಸ್ ಇತಿಹಾಸದಲ್ಲೇ ಇಷ್ಟು ಪ್ರಮಾಣದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಗಾಂಜಾ ಬರೋಬ್ಬರಿ ಒಂದು ಕೋಟಿ ಬೆಲೆಬಾಳುತ್ತದೆ ಎಂದು ಅಂದಾಜಿಸಲಾಗಿದೆ.


ಜೊತೆಗೆ ಈ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಸಮೀರ್, ಕೈಸರ್ ಪಾಷಾ, ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಒಂದು ಲಾರಿ, ಒಂದು ಕಾರು, ಮೂರು ಮೊಬೈಲ್ ಸೇರಿದಂತೆ 204 ಕೆಜಿ ಗಾಂಜಾ ವಶ ಪಡೆಯಲಾಗಿದೆ. ಈ ಗ್ಯಾಂಗ್ ಸದಸ್ಯರು ರಾಜಾರೋಷವಾಗಿ ಲಾರಿಯಲ್ಲೇ ಗಾಂಜಾ ಸಾಗಾಟ ಮಾಡುತ್ತಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಪಡೆದ ಇನ್ಸ್‍ಪೆಕ್ಟರ್ ಬೊಳೆತ್ತಿನ್ ಹಾಗೂ ವಿರುಪಾಕ್ಷ ನೇತೃತ್ವದ ತಂಡ ದಾಳಿ ಮಾಡಿ ಅರೆಸ್ಟ್ ಮಾಡಿದೆ.
ಗಾಂಜಾ ಸಾಗಾಟದಲ್ಲಿ ರಾಜಕಾರಣಿಗಳ ಹೆಸರು ತಳುಕು ಹಾಕಿಕೊಂಡಿದ್ದು, ಬಂಧಿಸಿರುವ ಮೂವರಲ್ಲಿ ಕೈಸರ್ ಪಾಷಾ ಮೈಸೂರಿನ ಜೆಡಿಎಸ್ ಪಕ್ಷದ ಮುಖಂಡನಾಗಿದ್ದಾನೆ. ಈತನೇ ಈ ಗಾಂಜಾ ಗ್ಯಾಂಗಿನ ಕಿಂಗ್‍ಪಿನ್ ಎನ್ನಲಾಗಿದ್ದು, ಈತ ಮೈಸೂರಿನ ಶಾಂತಿನಗರ ನಗರಸಭೆ ವಾರ್ಡಿನಿಂದ ಕೌನ್ಸಲರ್ ಚುನಾವಣೆ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದ. ಆದರೆ ಕೇವಲ 150 ಮತಗಳಿಂದ ಪರಾಜಿತ ಹೊಂದಿದ್ದ. ಈತ ಲಾರಿಯಲ್ಲಿ ಗಾಂಜಾವನ್ನು ವಿಶಾಖಪಟ್ಟಣದಿಂದ ದೇವನಹಳ್ಳಿಗೆ ಸಾಗಿಸುವಾಗ ಸಿಕ್ಕಿಬಿದ್ದಿದ್ದಾನೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm