ಬ್ರೇಕಿಂಗ್ ನ್ಯೂಸ್
02-06-21 12:29 pm Bangalore Correspondent ಕ್ರೈಂ
ಬೆಂಗಳೂರು, ಜೂ. 02: ಬಾಂಗ್ಲಾದೇಶಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಈ ಮೂಲಕ ಒಂದೇ ಪ್ರಕರಣದಲ್ಲಿ ಎರಡು ಬಾರಿ ಶೂಟೌಟ್ ಮಾಡಿ ಮೂವರ ಕಾಲಿಗೆ ಗುಂಡು ಹಾರಿಸಿ ವಿಕೃತ ಕಾಮುಕರಿಗೆ ರಾಮಮೂರ್ತಿನಗರ ಪೊಲೀಸರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಬಾಂಗ್ಲಾ ಮೂಲದ ಶೂಬಜ್ ಗುಂಡೇಟು ತಿಂದ ಆರೋಪಿ. ಯುವತಿಯ ಗುಪ್ತಾಂಗಕ್ಕೆ ಕಾಲಿನಲ್ಲಿ ಒದ್ದು ಹಲ್ಲೆ ಮಾಡಿದ್ದ. ವಿಡಿಯೋ ವೈರಲ್ ಆಗಿತ್ತು. ಪ್ರಕರಣ ಬೆಳಕಿಗೆ ಬಂದ ನಂತರ ರಾಂಪುರ ಸಮೀಪ ತಲೆ ಮರೆಸಿಕೊಂಡಿದ್ದ ಶೂಬಜ್‌ನನ್ನು ಬಂಧಿಸಲು ರಾಮಮೂರ್ತಿನಗರ ಪೊಲೀಸರು ತೆರಳಿದ್ದಾರೆ. ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ಬಟನ್ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ರಾಮಮೂರ್ತಿನಗರ ಪಿಎಸ್ಐ ಶಿವರಾಜ್ ನಿಂದ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಆ ಬಳಿಕ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದ ಆರೋಪಿ ಶೂಬಜ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಈ ವೇಳೆ ಪಿಎಸ್ಐ ಶಿವರಾಜ್ ಪೊಲೀಸ್ ಸಿಬ್ಬಂದಿ ದೇವೇಂದ್ರ ಸಿಂಗ್ ಅವರಿಗೆ ಸಣ್ಣ ಗಾಯವಾಗಿದೆ.


ಬಂಧಿತರ ಸಂಖ್ಯೆ ಹತ್ತಕ್ಕೆ ಏರಿಕೆ: ಬಾಂಗ್ಲಾದೇಶಿ ಮೂಲದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಹತ್ತಕ್ಕೆ ಏರಿದೆ. ಸಂತ್ರಸ್ತ ಯುವತಿ, ಬಂಧಿತ ಆರೋಪಿಗಳೆಲ್ಲರೂ ಬಾಂಗ್ಲಾದೇಶಿಯರೇ. ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.
ಹಣಕಾಸಿನ ವಿಚಾರವಾಗಿ ಜಗಳ ತೆಗೆದು ಮಸಾಜ್ ಪಾರ್ಲರ್ ನಡೆಸುತ್ತಿದ್ದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಮಿಗಿಲಾಗಿ ಯುವತಿ ಜತೆ ವಿಕೃತವಾಗಿ ನಡೆದುಕೊಂಡು ದೌರ್ಜನ್ಯ ಎಸಗಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಬಳಿಕ ರಾಮಮೂರ್ತಿನಗರ ಪೊಲೀಸರು ಪ್ರಕರಣವನ್ನು ಪತ್ತೆ ಮಾಡಿದ್ದರು.
ಬಾಂಗ್ಲಾ ಮತಾಂಧರಿಂದ ಬೆಂಗಳೂರಿನಲ್ಲಿ ಮೃಗೀಯ ಕೃತ್ಯ ; ಚಿತ್ರಹಿಂಸೆ ವಿಡಿಯೋ ಹಿಂದಿತ್ತು ಕರಾಳ ವೇಶ್ಯಾವಾಟಿಕೆ ದಂಧೆ !
ಬೆಂಗಳೂರು ಅತ್ಯಾಚಾರ ಕೇಸ್ ; ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm