ಮಕ್ಕಳಿಗೆ ಮದ್ಯ ಕುಡಿಸಿದ ದುಷ್ಕರ್ಮಿಗಳು ; ಓರ್ವನ ಬಂಧನ

07-06-21 03:57 pm       Headline Karnataka News Network   ಕ್ರೈಂ

ರಾಮನಗರದಲ್ಲಿ ಮಕ್ಕಳಿಗೆ ಮದ್ಯ ಕುಡಿಸಿ ವಿಡಿಯೋ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಕೋಡಿಹಳ್ಳಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ರಾಮನಗರ, ಜೂನ್ 07; ರಾಮನಗರದಲ್ಲಿ ಮಕ್ಕಳಿಗೆ ಮದ್ಯ ಕುಡಿಸಿ ವಿಡಿಯೋ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೋಡಿಹಳ್ಳಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಬಾಳೆ ತೋಟದಲ್ಲಿ 10 ವರ್ಷದೊಳಗಿನ 7 ಮಕ್ಕಳು ಬಾಡೂಟದ ಜತೆಗೆ ಮದ್ಯ ಕುಡಿಯುತ್ತಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಮದ್ಯ‌ ಕುಡಿದ ಬಳಿಕ ಮಕ್ಕಳು ಅವಾಚ್ಯ ಶಬ್ದಗಳಿಂದ ಬೈದಾಡಿಕೊಳ್ಳುತ್ತಿದ್ದಾರೆ. ಬಾಲಕನೊಬ್ಬ ತನಗೆ ಮತ್ತಷ್ಟು ಮದ್ಯ ಬೇಕು‌ ಎಂದು ಕೂಗಾಡುತ್ತಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಜನರು ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

Seven kids found drinking alcohol in Ramnagar video goes viral