ಬ್ರೇಕಿಂಗ್ ನ್ಯೂಸ್
14-06-21 04:25 pm Mangalore Correspondent ಕ್ರೈಂ
ಮಂಗಳೂರು, ಜೂನ್ 14: ಒಮಾನ್ ರಾಷ್ಟ್ರದ ಪ್ರಜೆಯೊಬ್ಬ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಲಾಡ್ಜ್ ಒಂದರಲ್ಲಿ ಡ್ರಗ್ಸ್ ಸೇವನೆ ಮಾಡಿ ಸಿಕ್ಕಿಬಿದ್ದಿದ್ದಾನೆ.
ನಗರದ ಲಾಡ್ಜ್ ಒಂದರಲ್ಲಿ ಒಮಾನ್ ರಾಷ್ಟ್ರದ ಪ್ರಜೆ ಅಹ್ಮದ್ ಮತ್ತು ಹಿಮಾಚಲ ಪ್ರದೇಶದ ನಿವಾಸಿ ರಾಮ್ ಎಂಬಾತ ಸೆರೆಸಿಕ್ಕಿರುವ ಆರೋಪಿಗಳು.



ಒಮಾನ್ ಪ್ರಜೆ ಅಹ್ಮದ್ ಆರು ತಿಂಗಳ ಹಿಂದೆ ಗೋವಾಕ್ಕೆ ಟೂರಿಸ್ಟ್ ವೀಸಾದಲ್ಲಿ ಬಂದಿದ್ದ. ಆದರೆ, ಅನಾರೋಗ್ಯಕ್ಕೀಡಾಗಿದ್ದ ಅಹ್ಮದ್ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಆನಂತರ ಚಿಕಿತ್ಸೆ ಪಡೆದು ಹೊರಬಂದಿದ್ದ. ಈ ನಡುವೆ ಆತನ ವೀಸಾ ಅವಧಿ ಮಾರ್ಚ್ 31ಕ್ಕೆ ಮುಗಿದಿದ್ದು ಆಬಳಿಕ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದಾನೆ.
ಪೊಲೀಸರು ಮಾಹಿತಿ ಪಡೆದು ಲಾಡ್ಜ್ ಗೆ ದಾಳಿ ನಡೆಸಿದ್ದು ಇಬ್ಬರನ್ನು ಬಂಧಿಸಿದ್ದಾರೆ. ಈ ವೇಳೆ ಅವರ ಬಳಿ 50 ಗ್ರಾಂಜಾ ಮತ್ತು ಎರಡು ಗ್ರಾಮ್ ಎಂಡಿಎಂಎ ಡ್ರಗ್ಸ್ ಪತ್ತೆಯಾಗಿದೆ. ಅಲ್ಲದೆ, ಇಬ್ಬರು ಕೂಡ ಡ್ರಗ್ಸ್ ಸೇವನೆ ಮಾಡಿರುವುದನ್ನು ಪತ್ತೆ ಮಾಡಿದ್ದಾರೆ.


ಅಹ್ಮದ್ ವಿರುದ್ಧ ಅಕ್ರಮ ವಾಸ ಮತ್ತು ಮಾದಕ ದ್ರವ್ಯ ಹೊಂದಿದ್ದ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಲಾಡ್ಜ್ ನಲ್ಲಿ ಯಾವುದೇ ವ್ಯಕ್ತಿಗಳ ಗುರುತು ಪತ್ರ ಇಲ್ಲದೆ ಕೊಠಡಿ ನೀಡಬಾರದು. ಹಾಗೊಂದ್ವೇಳೆ, ಗುರುತು ಕಾರ್ಡ್ ಇಲ್ಲದೆ ಲಾಡ್ಜ್ ನಲ್ಲಿ ಅಕ್ರಮ ವಾಸ ಪತ್ತೆಯಾದರೆ ಅಂತಹ ಲಾಡ್ಜ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪೊಲೀಸರು ಇನ್ನು ಮುಂದೆ ಈ ಬಗ್ಗೆ ಅನಿಯಮಿತವಾಗಿ ದಾಳಿ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
Video:
The Mangalore City Police have arrested Two including one Oman national for drug consumption and illegal stay in India. Another arrested is said to be from Himachal Pradesh.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 11:31 pm
HK News Desk
ವಿದ್ಯಾರ್ಥಿ ಸಂಘದ ಪದಗ್ರಹಣ ; ಮೊದಲ ಮಹಡಿಯ ಕಾಂಕ್ರೀಟ...
27-09-26 10:59 am
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
27-09-26 08:06 pm
HK News Staffer
Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ...
27-09-26 06:10 pm
ಶಾರ್ಜಾದಲ್ಲಿ ಹತ್ಯೆಯಾದ ಕುಂದಾಪುರದ ವ್ಯಕ್ತಿಯ ಶವ ಹು...
25-09-26 04:53 pm
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am