ಬ್ರೇಕಿಂಗ್ ನ್ಯೂಸ್
18-06-21 08:07 pm Mangaluru Correspondent ಕ್ರೈಂ
ಮಂಗಳೂರು, ಜೂನ್ 18: ತುಳುನಾಡಿನ ಬಾವುಟವನ್ನು ಚಪ್ಪಲಿಯ ಬಣ್ಣಕ್ಕೆ ಹೊಂದಿಕೆಯಾಗುವಂತೆ ಎಡಿಟ್ ಮಾಡಿ, ಫೇಸ್ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣದಲ್ಲಿ ಬರ್ಕೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿರುವ ಸೂರ್ಯ ಎನ್.ಕೆ. (19) ಬಂಧಿತ ಆರೋಪಿ. ತುಳುನಾಡಿನ ಬಾವುಟವನ್ನು ಎಡಿಟ್ ಮಾಡಿ, ತನ್ನ ಫೇಸ್ಬುಕ್ ನಲ್ಲಿ ಹಾಕಿದ್ದಲ್ಲದೆ ಅಶ್ಲೀಲವಾಗಿ ಕಮೆಂಟ್ ಹಾಕಿದ್ದ. ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಶಶಿಧರ ಹೆಗ್ಡೆ ಪೊಲೀಸರಿಗೆ ದೂರು ನೀಡಿದ್ದರು.
ಬರ್ಕೆ ಠಾಣೆಯಲ್ಲಿ ಈ ಬಗ್ಗೆ ಪೊಲೀಸರು 153(ಎ) ಮತ್ತು 505 (2) ಐಪಿಸಿ ಅಡಿ ಪ್ರಕರಣ ದಾಖಲಿಸಿದ್ದರು. ಆರೋಪಿಯ ಪತ್ತೆಗಾಗಿ ಬರ್ಕೆ ಠಾಣೆ ಎಸ್ಐ ಹಾರುಣ್ ಅಖ್ತರ್ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣೆ ಸಿಬಂದಿ ಪುಷ್ಪರಾಜ್, ಪ್ರಕಾಶ್, ಬರ್ಕೆ ಠಾಣೆಯ ಶರತ್ ಎಂಬವರನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.
ಪೊಲೀಸ್ ತಂಡ ಬೆಂಗಳೂರಿಗೆ ತೆರಳಿ, ಆರೋಪಿಯ ಮನೆಯನ್ನು ಪತ್ತೆ ಮಾಡಿದೆ. ಆರೋಪಿ ಸೂರ್ಯ ಎನ್.ಕೆ. ಶ್ರೀರಾಂಪುರದಲ್ಲಿ ಒಂದನೇ ಕ್ರಾಸ್ ನಿವಾಸಿಯಾಗಿದ್ದನ್ನು ಪತ್ತೆ ಮಾಡಿ, ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಯನ್ನು ಇಂದು ಮಂಗಳೂರಿಗೆ ಕರೆತಂದು ಕೋರ್ಟಿಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ತುಳುವರು ಕಳೆದ ಭಾನುವಾರ ಟ್ವಿಟರ್ ನಲ್ಲಿ ಅಭಿಯಾನ ನಡೆಸಿದ್ದು, ತುಳು ಭಾಷೆಗೆ ರಾಜ್ಯಭಾಷೆಯ ಮಾನ್ಯತೆ ನೀಡುವಂತೆ ಒತ್ತಾಯ ಮಾಡಿದ್ದರು. ಈ ವೇಳೆ, ಸಾಮಾಜಿಕ ಜಾಲತಾಣದಲ್ಲಿ ತುಳು ಟ್ವೀಟ್ ಭಾರೀ ಟ್ರೆಂಡ್ ಆಗಿತ್ತು. ಇದೇ ವೇಳೆ, ಸೂರ್ಯ ತುಳುವರನ್ನು ಕೆರಳಿಸುವುದಕ್ಕಾಗಿ ತುಳು ಬಾವುಟವನ್ನು ಚಪ್ಪಲಿಗೆ ಹೊಂದಿಸಿ, ಪೋಸ್ಟ್ ಮಾಡಿದ್ದಲ್ಲದೆ, ಇವತ್ತು ತುಳುನಾಡ್ ಚಪ್ಪಲಿ ಬಂದಿದೆ, ನಾಳೆ ಬಿಕಿನಿಯೂ ಬರಬಹುದು, ಹಾಕಿಕೊಂಡು ಮಜಾ ಮಾಡಿ ಎಂದು ಬರೆದು ತುಳು ಭಾಷಿಕರ ಭಾವನೆಗೆ ಘಾಸಿಗೊಳಿಸುವ ಕೆಲಸ ಮಾಡಿದ್ದ. ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
The Mangalore City Polie have arrested a man accused of insulting the Tulu Nadu flag through a Facebook post recently. His post had gone viral on social media. The arrested has been identified as Surya NK.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm